ನಟಿ ರಚಿತಾ ರಾಮ್ ವಿರುದ್ಧ ಕಠಿಣ ಕ್ರಮಕ್ಕೆ ನಿರ್ದೇಶಕ ನಾಗಶೇಖರ್ ಒತ್ತಾಯ

Date:

ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ.

ಸಿನಿಮಾ ತಂಡದ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾರಿಂದ ಆದ ತೊಂದರೆಯನ್ನು ಹಂಚಿಕೊಂಡರು.

ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಬಿಡುಗಡೆ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ಸಿನಿಮಾ ನಿರ್ಮಾಪಕ ನಾಪತ್ತೆ: ಅಪಘಾತದಲ್ಲಿ ಮೃತಪಟ್ಟಿರುವ ಶಂಕೆ

ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಒಂಚೂರು ಬೆಂಬಲ ಕೊಟ್ಟಿಲ್ಲ. ರಾಕ್‌ಲೈನ್‌ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದರೂ ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಬೆಂಬಲ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅವರು ಕೂಡ ಈ ಸಿನಿಮಾಗೆ ಬೆಂಬಲ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಡಿಮೆ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಚಿತ್ರಮಂದಿರ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಎಂದು ಫಿಲ್ಮ್ ಚೇಂಬರ್‌ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ.

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್‌ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...