ಸ್ಟಾರ್‌ ಸಿನಿಮಾದಲ್ಲಿ ಮಿಂಚಲು ಸಜ್ಜಾದ ಯೋಗರಾಜ್‌ ಭಟ್‌

Date:

7 ವರ್ಷಗಳ ಬಳಿಕ ನಟನೆಯತ್ತ ಒಲವು ತೋರಿದ ಯೋಗರಾಜ್‌ ಭಟ್‌

ʼಕರಟಕ ದಮನಕʼ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಹಿರಿಯ ನಿರ್ದೇಶಕ

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಯೋಗರಾಜ್‌ ಭಟ್‌ ಹಲವು ವರ್ಷಗಳ ನಂತರ ಮತ್ತೆ ನಟನೆಗೆ ಮರಳುತ್ತಿದ್ದಾರೆ. ಮಲ್ಟಿಸ್ಟಾರರ್‌ ಸಿನಿಮಾವೊಂದರಲ್ಲಿ ಭಟ್ರು ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವರಾಜ್‌ ಕುಮಾರ್‌ ಮತ್ತು ಪ್ರಭುದೇವ ಜೊತೆಯಾಗಿ ನಟಿಸುತ್ತಿರುವ ʼಕರಟಕ ದಮನಕʼ ಚಿತ್ರವನ್ನು ಯೋಗರಾಜ್‌ ಭಟ್‌ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್‌ ಚಾಲ್ತಿಯಲ್ಲಿದೆ. ಇದೇ ಚಿತ್ರದ ಪ್ರಮುಖ ಪಾತ್ರವೊಂದಕ್ಕೆ ಭಟ್ರು ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ.

karataka damanaka

2013ರಲ್ಲಿ ಗಡ್ಡಾ ವಿಜಿ ನಿರ್ದೇಶನದಲ್ಲಿ ಮೂಡಿಬಂದಿದ್ದ ʼದ್ಯಾವ್ರೆʼ ಮತ್ತು 2016ರಲ್ಲಿ ತೆರೆಗೆ ಬಂದಿದ್ದ ʼಪರಪಂಚʼ ಚಿತ್ರದಲ್ಲಿ ಯೋಗರಾಜ್‌ ಭಟ್‌ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡು ಮೋಡಿ ಮಾಡಿದ್ದರು. ಇದೇ ಮೊದಲ ಬಾರಿಗೆ ತಾವು ನಿರ್ದೇಶಿಸುತ್ತಿರುವ ಚಿತ್ರದಲ್ಲಿ ಶಿವಣ್ಣ ಮತ್ತು ಪ್ರಭುದೇವ ಜೊತೆಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

ಭಿನ್ನ ಕಥಾಹಂದರವನ್ನು ಹೊಂದಿರುವ ʼಕರಟಕ ದಮನಕʼ ಚಿತ್ರ ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ಸಿದ್ಧಗೊಳ್ಳುತ್ತಿದೆ. ಖ್ಯಾತ ನಟಿಯರಾದ ಪ್ರಿಯಾ ಆನಂದ್‌ ಮತ್ತು ನಿಶ್ವಿಕಾ ನಾಯ್ಡು ಚಿತ್ರದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ಚಿತ್ರಕ್ಕೆ ಬಂಡವಾಳ ಹೂಡಿರುವ ರಾಕ್‌ಲೈನ್‌ ವೆಂಕಟೇಶ್‌ ಕೂಡ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ವಿ. ಹರಿಕೃಷ್ಣ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...