ಗಾಯಕ ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

Date:

ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ತಮ್ಮ ಮೇಲಿನ ಎಫ್​ಐಆರ್ ರದ್ದು ಮಾಡುವಂತೆ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದು ಇದೀಗ, ನ್ಯಾಯಾಲಯವು ಬೆಂಗಳೂರು ಪೊಲೀಸರಿಗೆ ಸೋನು ನಿಗಂ ಪ್ರಕರಣ ಸಂಬಂಧ ಕೆಲ ಸೂಚನೆಗಳನ್ನು ನೀಡಿದೆ.

ಸೋನು ನಿಗಂ ಅವರ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಬಾರದು ಎಂದು ಸಹ ಪ್ರಕರಣದ ತನಿಖಾಧಿಕಾರಿಗಳಿಗೆ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದ ಸೂಚನೆಯಂತೆ ಬೆಂಗಳೂರು ಪೊಲೀಸರು ಮುಂಬೈಗೆ ಹೋಗಿ ಸೋನು ನಿಗಂ ನಿವಾಸದಲ್ಲಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.

ಇದನ್ನು ಓದಿದ್ದೀರಾ? ಕೆಜಿಎಫ್‌ 3 ಯಾವಾಗ; ಸಿನಿಮಾ ಬಗ್ಗೆ ಅಪ್‌ಡೇಟ್‌ ನೀಡಿದ ನಿರ್ಮಾಣ ಸಂಸ್ಥೆ

ತನಿಖೆಗೆ ಹಾಜರಾಗಿಲ್ಲವೆಂದು ಹೆಚ್ಚುವರಿ ಸರ್ಕಾರಿ ವಕೀಲ ಬಿ.ಎನ್.ಜಗದೀಶ್ ಅವರು ನ್ಯಾಯಾಲಯಕ್ಕೆ ಹೇಳಿದರು. ಬೆಂಗಳೂರಿಗೆ ಸೋನು ನಿಗಮ್ ಹಾಜರಾದರೆ ಸಮಸ್ಯೆ ಆಗಬಹುದು. ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಸೋನು ನಿಗಂ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿಗಳು, ಸೋನು ನಿಗಂ ಅವರಿರುವ ಜಾಗದಲ್ಲಿಯೇ ವಿಚಾರಣೆ ಮಾಡುವಂತೆ ಅಥವಾ ವಿಡಿಯೋ ಕಾಲ್ ಮೂಲಕ ವಿಚಾರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಕನ್ನಡಿಗರ ಬಗ್ಗೆ ಅವಹೇಳನ ಮಾಡಿದ್ದಕ್ಕಾಗಿ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲ ನೊಟೀಸ್​ಗೆ ಉತ್ತರ ನೀಡದೇ ಇದ್ದಾಗ ಎರಡನೇ ನೊಟೀಸ್ ಅನ್ನು ಕಳಿಸಲಾಗಿತ್ತು.

ಇತ್ತೀಚೆಗಷ್ಟೆ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಲೈವ್ ಶೋ ಮಾಡಿದ್ದ ಸೋನು ನಿಗಂ ಹಿಂದಿ ಹಾಡುಗಳನ್ನು ಹಾಡುತ್ತಿದ್ದರು. ಆ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯ ಮಾಡಿದ. ಆಗ ತಾಳ್ಮೆ ಕಳೆದುಕೊಂಡ ಸೋನು ನಿಗಂ, ‘ಕನ್ನಡ, ಕನ್ನಡ ಇಂಥಹುದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...