ʼಪೊನ್ನಿಯನ್‌ ಸೆಲ್ವನ್‌ʼ ನಿರ್ಮಾಪಕರ ಮನೆ, ಕಚೇರಿಗಳ ಮೇಲೆ ಇ.ಡಿ ದಾಳಿ

Date:

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ʼಲೈಕಾ ಪ್ರೊಡಕ್ಷನ್ಸ್‌ʼ

ಪೊನ್ನಿಯನ್‌ ಸೆಲ್ವನ್‌ ಚಿತ್ರಕ್ಕೆ 600 ಕೋಟಿ ರೂಪಾಯಿ ಬಂಡವಾಳ ಹೂಡಿದ್ದ ಸಂಸ್ಥೆ

ತಮಿಳಿನ ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆ ʼಲೈಕಾ ಪ್ರೊಡಕ್ಷನ್ಸ್‌ʼ ಮಾಲೀಕರ ಮನೆ ಮತ್ತು ಕಚೇರಿಗಳ ಮೇಲೆ ಮಂಗಳವಾರ ಇ.ಡಿ ಅಧಿಕಾರಿಗಳು (ಜಾರಿ ನಿರ್ದೇಶನಾಲಯ) ದಿಢೀರ್‌ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಹಣ ವರ್ಗಾವಣೆ ಆರೋಪದಡಿ ಲೈಕಾ ಸಮೂಹ ಸಂಸ್ಥೆಯ ಮಾಲೀಕ ಸುಬಾಸ್ಕರನ್‌ ಅವರ ವಿರುದ್ಧ ಇ.ಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆ ಸುಬಾಸ್ಕರನ್‌ ಅವರ ಮನೆ ಮತ್ತು ಕಚೇರಿ ಸೇರಿದಂತೆ 8 ಕಡೆಗಳಲ್ಲಿ ಇ.ಡಿ ಅಧಿಕಾರಿಗಳು ತಂಡೋಪ ತಂಡಗಳಾಗಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ʼಲೈಕಾ ಪ್ರೊಡಕ್ಷನ್ಸ್‌ʼ ಬ್ಯಾನರ್‌ನಲ್ಲಿ ನಿರ್ಮಾಣವಾಗಿದ್ದ ʼಪೊನ್ನಿಯನ್‌ ಸೆಲ್ವನ್‌-1ʼ ಮತ್ತು 2 ಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದವು. 2022ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ʼಪೊನ್ನಿಯನ್‌ ಸೆಲ್ವನ್‌-1ʼ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿತ್ತು. ಕಳೆದ ಏಪ್ರಿಲ್‌ನಲ್ಲಿ ಬಿಡುಗಡೆಯಾಗಿರುವ ʼಪೊನ್ನಿಯನ್‌ ಸೆಲ್ವನ್‌-2ʼ ಇಂದಿಗೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈವರೆಗೆ 320 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಕಲೆ ಹಾಕಿದೆ. ಈ ಚಿತ್ರಕ್ಕೆ 600 ಕೋಟಿ ರೂಪಾಯಿಗೂ ಹೆಚ್ಚಿನ ಬಂಡವಾಳ ಹೂಡಲಾಗಿತ್ತು. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ತಯಾರಿಸುತ್ತಿರುವ ʼಲೈಕಾ ಪ್ರೊಡಕ್ಷನ್ಸ್‌ʼ ಅಕ್ರಮ ಹಣ ವರ್ಗಾವಣೆ ನಡೆಸುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ʼದಿ ಕೇರಳ ಸ್ಟೋರಿʼ ಚಿತ್ರತಂಡಕ್ಕೆ ಅಪಘಾತ

ಕೇವಲ ʼಪೊನ್ನಿಯನ್‌ ಸೆಲ್ವನ್‌ʼ ಮಾತ್ರವಲ್ಲದೆ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹಲವು ಚಿತ್ರಗಳಿಗೆ ʼಲೈಕಾ ಪ್ರೊಡಕ್ಷನ್ಸ್‌ʼ ಬಂಡವಾಳ ಹೂಡಿದೆ. 2014ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಒಂದೇ ಒಂದು ದಶಕದಲ್ಲಿ ಬಹುಕೋಟಿ ವ್ಯವಹಾರ ನಡೆಸುತ್ತಿದೆ. ಹೀಗಾಗಿ ಈ ಸಂಸ್ಥೆಗೆ ವಿದೇಶದಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಮತ್ತು ಸಂಸ್ಥೆಯ ಮುಖ್ಯಸ್ಥರು ತೆರಿಗೆ ವಂಚನೆ ನಡೆಸಿದ್ದಾರೆ ಎಂಬ ಆರೋಪಗಳು ಕೂಡ ಈ ಹಿಂದೆ ಕೇಳಿಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...