ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

Date:

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಗುಜರಾತ್ ಮೂಲದ ವನರಾಜ್ ಭಾಯ್ ಎಂಬ ವ್ಯಕ್ತಿಯು ಎಮ್ಮೆಗಳನ್ನು ಕೊಡಿಸುವುದಾಗಿ 3.8 ಲಕ್ಷ ರೂಪಾಯಿಗಳನ್ನು ವಂಚಿಸಿರುವ ಆರೋಪದ ಮೇಲೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಸಹಾಯಕ ಮತ್ತು ನಟ ಚಂದ್ರು ಅವರು ದೂರು ಸಲ್ಲಿಸಿದ್ದಾರೆ.

ಪ್ರೇಮ್ ಅವರು ತಮ್ಮ ಕೃಷಿ ಉದ್ಯಮಕ್ಕಾಗಿ ಉತ್ತಮ ತಳಿಯ ಎರಡು ಎಮ್ಮೆಗಳನ್ನು ಖರೀದಿಸುವ ಉದ್ದೇಶದಿಂದ ವನರಾಜ್ ಭಾಯ್ ಅವರನ್ನು ಸಂಪರ್ಕಿಸಿದ್ದರು. ಮೊದಲು ಮುಂಗಡವಾಗಿ 20,000 ರೂಪಾಯಿ ಪಡೆದ ಆತ, ವಾಟ್ಸಾಪ್ ಮೂಲಕ ಎಮ್ಮೆಗಳ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿ ನಂಬಿಕೆ ಗಳಿಸಿದ್ದ. ಇದನ್ನು ನಂಬಿ ಪ್ರೇಮ್ ಅವರು ಹಂತಹಂತವಾಗಿ ಆನ್‌ಲೈನ್ ಮೂಲಕ ಒಟ್ಟು 3.8 ಲಕ್ಷ ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಹಣ ಸ್ವೀಕರಿಸಿದ ನಂತರ ವನರಾಜ್ ಭಾಯ್ ಎಮ್ಮೆಗಳನ್ನು ತಲುಪಿಸದೇ ನಾಪತ್ತೆಯಾಗಿದ್ದಾನೆ. “ಹತ್ತು ದಿನಗಳಲ್ಲಿ ಎಮ್ಮೆಗಳನ್ನು ನಿಮ್ಮ ಫಾರ್ಮ್‌ಗೆ ಕಳುಹಿಸುತ್ತೇನೆ” ಎಂದು ಹೇಳಿದ್ದ ಆತನ ಫೋನ್ ಈಗ ಸ್ವಿಚ್ ಆಫ್ ಆಗಿದ್ದು, ಮೋಸದ ಅರಿವಾಗಿ ಪ್ರೇಮ್ ಅವರು ಪೊಲೀಸರ ಬಳಿ ದೂರು ನೀಡಿದ್ದಾರೆ.

ಪ್ರೇಮ್ ಅವರು ತಮ್ಮ ತಾಯಿ ಭಾಗ್ಯಮ್ಮ ಅವರ ನೆನಪಿಗಾಗಿ ಮದ್ದೂರು ಸಮೀಪದ ಬೆಸಗರಹಳ್ಳಿಯಲ್ಲಿ ಹನ್ನೊಂದು ಎಕರೆ ಕೃಷಿ ಭೂಮಿ ಖರೀದಿಸಿ ‘ಅಮ್ಮನ ತೋಟ’ ಎಂದು ನಾಮಕರಣ ಮಾಡಿದ್ದಾರೆ. ಗುಜರಾತ್ ತಳಿಯ ಎಮ್ಮೆಗಳನ್ನು ತಂದು ಅದನ್ನು ಈ ತೋಟದಲ್ಲಿ ಸಾಕುವ ಕನಸು ಹೊಂದಿದ್ದರು. ಈಗಾಗಲೇ ಹಲವು ಸ್ಥಳೀಯ ತಳಿಯ ಹಸುಗಳನ್ನು ಸಂಗ್ರಹಿಸಿ ಪಾಲಿಸುತ್ತಿದ್ದ ಅವರು, ಇತ್ತೀಚೆಗೆ ಹರಿಯಾಣದ ಕಾಮಧೇನು ಸಂಸ್ಥೆಗೆ ಭೇಟಿ ನೀಡಿ ಸಹ್ಯಾದ್ರಿ ತಳಿಯ ಹಸುಗಳು ಮತ್ತು ‘ಭೈರವ’ ಎಂಬ ಹೋರಿಯನ್ನು ಖರೀದಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...