‘ದಿ ಕೇರಳ ಸ್ಟೋರಿ’ ಸಿನಿಮಾ ಬಹಿಷ್ಕರಿಸಿ; ಸಿನಿಪ್ರೇಮಿಗಳಿಗೆ ಸಚಿವರ ಮನವಿ

Date:

  • ಕೋಮು ಸೌಹಾರ್ಧಕ್ಕೆ ಹೆಸರಾಗಿರುವ ಕೇರಳದ ಹೆಸರು ಕೆಡಿಸಲು ಸಂಚು
  • ಕೋಮು ಭಾವನೆ ಬಿತ್ತಿ ಸಮಾಜ ಒಡೆಯುವ ದುರುದ್ಧೇಶದ ಸಿನಿಮಾ

ವಿವಾದಿತ ಸಿನಿಮಾ ‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ಸಿದ್ದವಾಗಿದೆ. ಸಿನಿಮಾ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯವನ್ನು ಹೊಂದಿದ್ದು, ಕೇರಳದ ಹೆಸರಿಗೆ ಮಸಿಬಳಿಯುವಂತಿದೆ. ಈ ಸಿನಿಮಾವನ್ನು ರಾಜ್ಯದ ಜನರು ಬಹಿಷ್ಕರಿಸಬೇಕೆಂದು ಕೇರಳ ಸಂಸ್ಕೃತಿ ಹಾಗೂ ಸಿನಿಮಾ ಸಚಿವ ಶಾಜಿ ಚೆರಿಯನ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಅದರಲ್ಲಿ, ಕೇರಳದ 32 ಸಾವಿರ ಹಿಂದು, ಕ್ರಿಶ್ಚಿಯನ್ ಯುವತಿಯರು ಮತ್ತು ಮಹಿಳೆಯರನ್ನು ಲವ್‌ ಜಿಹಾದಿ ಮೂಲಕ ಮತಾಂತರ ಮಾಡಲಾಗುತ್ತದೆ. ಇನ್ನೂ ಕೆಲವರನ್ನು ಮಾನವ ಕಳ್ಳಸಾಗಣೆ ಮಾಡಿ ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂಬ ದೃಶ್ಯಗಳಿವೆ. ಹೀಗಾಗಿ, ಟ್ರೇಲರ್‌ನ ದೃಶ್ಯಗಳು ಸಿನಿಮಾವನ್ನು ವಿರೋಧಿಸುವಂತೆ ಮಾಡಿದೆ.

“ಕೇರಳದಲ್ಲಿ ಹಿಂದು, ಕ್ರಿಶ್ಚಿಯನ್ ಮಹಿಳೆಯರನ್ನು ಲವ್‌ ಜಿಹಾದಿಗೆ ಒಳಪಡಿಸಿ, ಅವರನ್ನು ಐಎಸ್ ಉಗ್ರಗಾಮಿ ಸಂಘಟನೆಗೆ ಸೇರಿಸಿ ಚಿತ್ರಹಿಂಸೆ ಕೊಡುತ್ತಿದ್ದ ಘಟನೆಗಳ ಆಧಾರದ ಮೇಲೆ ಈ ಚಿತ್ರನ್ನು ತಯಾರಿಸಲಾಗಿದೆ” ಎಂದು ಚಿತ್ರತಂಡ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, “ಕೇರಳವನ್ನು ಧರ್ಮ ಮತಾಂದರರು ಮತ್ತು ದೇಶ ವಿರೋಧಿಗಳು ಎಂದು ಬಿಂಬಿಸಲು ಸಂಘಪರಿವಾರಿ ಮಾಡುತ್ತಿರುವ ಸಂಚು ಇದು. ಸಿನಿಮಾ ಮೂಲಕ ಸಂಘಪರಿವಾರ ಏನನ್ನು ಹೇಳಲು ಹೊರಟಿದೆ ಎಂಬುದನ್ನು ಈಗಾಗಲೇ ಬಿಡುಗಡೆಯಾದ ಟ್ರೇಲರ್ ಹೇಳುತ್ತಿದೆ” ಎಂದು ಹಲವರು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ?: ʼದಿ ಸಾಂಗ್‌ ಆಫ್‌ ಸ್ಕಾರ್ಪಿಯನ್ಸ್‌ʼ ಸೇರಿ ಈ ವಾರ 5 ಪ್ರಮುಖ ಚಿತ್ರಗಳು ತೆರೆಗೆ

‘ದಿ ಕೇರಳ ಸ್ಟೋರಿ’ ಸಿನಿಮಾದ ಟ್ರೇಲರ್ ಕೇರಳದಲ್ಲಿ ವಾಗ್ಯುದ್ಧಕ್ಕೆ ಎಡೆ ಮಾಡಿಕೊಟ್ಟಿದೆ. ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಸರ್ಕಾರ ಹಾಗೂ ಕಾಂಗ್ರೆಸ್ ನೇತೃತ್ವದ ವಿರೋಧ ‍ಪಕ್ಷಗಳು ಈ ಚಿತ್ರದ ವಿರುದ್ಧ ಮುಗಿಬಿದ್ದಿವೆ. ಕಾನೂನು ಕ್ರಮ ಜರುಗಿಸಿ ಚಿತ್ರ ಬಿಡುಗಡೆಯಾಗದಂತೆ ಕ್ರಮವಹಿಸಬೇಕೆಂದು ಒತ್ತಾಯಿಸಿವೆ.

“ಸಿನಿಮಾವನ್ನು ಜನ ಬಹಿಷ್ಕರಿಸಬೇಕು. ಈ ಸಿನಿಮಾ ಕೇರಳದಲ್ಲಿ ಬಿಡುಗಡೆಯಾಗದಂತೆ ತಡೆಯಲು ಕಾನೂನು ಕ್ರಮಗಳನ್ನು ಪರಿಶೀಲಿಸಲಾಗುತ್ತಿದೆ. ಸಿನಿಮಾ ಬಿಡುಗಡೆಗೆ ಸರ್ಕಾರ ಅವಕಾಶ ಕೊಡಬಾರದು” ಎಂದು ಸಂಸ್ಕೃತಿ ಹಾಗೂ ಸಿನಿಮಾ ಸಚಿವ ಶಾಜಿ ಚೆರಿಯನ್ ಹೇಳಿದ್ದಾರೆ.

“ಕೋಮು ಸೌಹಾರ್ಧಕ್ಕೆ ಹೆಸರಾಗಿರುವ ಕೇರಳದ ಹೆಸರು ಕೆಡಿಸಲು ಇದು ಸಂಘಪರಿವಾರದವರು ಮಾಡುತ್ತಿರುವ ಸಂಚು” ಎಂದಿದ್ದ ಪತ್ರಕರ್ತರೊಬ್ಬರು ಈ ಹಿಂದೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ಅವರಿಗೆ ಪತ್ರ ಬರೆದಿದ್ದರು ಮತ್ತು ಸಿನಿಮಾ ಬಿಡುಗಡೆ ಅವಕಾಶ ಕೊಡದಂತೆ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದ್ದರು.

“ತಪ್ಪು ಸಂದೇಶ ತಲುಪಿಸುವ ‘ದಿ ಕೇರಳ ಸ್ಟೋರಿ’ ಚಿತ್ರವು ತೆರೆ ಕಾಣದಂತೆ ಕ್ರಮವಹಿಸಿ” ಎಂದು ಕೇರಳದ ಸಂಸದ ಜಾನ್ ಬ್ರಿಟಾಸ್ ಅವರು 2022 ನವೆಂಬರ್ 9ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು.

ಯಾರೆಲ್ಲ ಚಿತ್ರದಲ್ಲಿದ್ದಾರೆ?

ಸುದೀಪ್ತೊ ಸೇನ್ ಅವರ ನಿರ್ದೇಶನದ ಈ ಸಿನಿಮಾವನ್ನು ವಿಫುಲ್ ಶಾ ನಿರ್ಮಾಣ ಮಾಡಿದ್ದಾರೆ. ಅದಾ ಶರ್ಮಾ, ಯೋಗಿತಾ ಬಿಹಾನಿ, ಸೋನಿಯಾ ಬಿಲಾನಿ, ಸಿದ್ಧಿ ಇದ್‌ನಾನಿ ಅವರು ಲವ್ ಜಿಹಾದ್‌ಗೆ ಒಳಗಾಗುವ ಹಿಂದು ಯುವತಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‘ದಿ ಕೇರಳ ಸ್ಟೋರಿ’ ಇದೇ ಮೇ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...