ಅರಣ್ಯ ಮರಗಳ ನಾಶ | ಯಶ್‌ ನಟನೆಯ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ಎಫ್‌ಐಆರ್

Date:

ನಟ ಯಶ್ ಅವರ ‘ಟಾಕ್ಸಿಕ್’ ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು. ಸೆಟ್ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

‘ಟಾಕ್ಸಿಕ್’ ಚಿತ್ರತಂಡದ ವಿರುದ್ಧ ಅರಣ್ಯ ಕಾಯ್ದೆಯಡಿಯಲ್ಲಿ ಈಗ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದಾರೆ.

ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ಸದ್ಯ ಗೀತು ಮೋಹನ್ ದಾಸ್ ಅವರ ‘ಟಾಕ್ಸಿಕ್ ಚಿತ್ರದ ಚಿತ್ರೀಕರಣ ಮುಂಬಯಿಯಲ್ಲಿ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಿಂದೆ ಸ್ಪಷ್ಟಪಡಿಸಿದ್ದರು.

ನಂತರ ಈ ಬಗ್ಗೆ ಹೆಚ್‌ಎಂಟಿ ಸ್ಪಷ್ಟನೆ ನೀಡಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಹೇಳಿತ್ತು.

WhatsApp Image 2024 11 12 at 12.12.52 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...