‘ಅನ್ನಪೂರ್ಣಿ’ ಸಿನಿಮಾದಲ್ಲಿ ರಾಮ ಮಾಂಸಾಹಾರಿ ಉಲ್ಲೇಖ: ನಯನತಾರ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್

Date:

ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ನಯನತಾರ ನಟನೆಯ ‘ಅನ್ನಪೂರ್ಣಿ’ ಸಿನಿಮಾ  ವಿವಾದಕ್ಕೀಡಗಿದೆ. ಹಿಂದೂ ದಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್‌ ಜಿಹಾದ್ ಒಳಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಖಂಡರೊಬ್ಬರು ಮುಂಬೈ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಹಿಂದೂ ಸಂಘಟನೆಯ ಮುಖಂಡ ರಮೇಶ್ ಸೋಲಂಕಿ ಅವರು, ‘ಅನ್ನಪೂರ್ಣಿ’ ಸಿನಿಮಾದ ನಾಯಕಿ ಹಿಜಾಬ್‌ ಧರಿಸಿ ನಮಾಜ್ ಮಾಡುವುದು. ಆಕೆಯ ಸ್ನೇಹಿತ ನಾಯಕಿಯನ್ನು ಲವ್‌ ಜಿಹಾದ್‌ಗೆ ಒತ್ತಾಯಿಸಿ ಮತಾಂತರಕ್ಕೆ ಆಮಿಶವೊಡ್ಡುವುದು ಕೂಡ ಸಿನಿಮಾದಲ್ಲಿ ಒಳಗೊಂಡಿದೆ. ಇದರ ಜೊತೆಗೆ ಭಗವಾನ್ ರಾಮ ಮತ್ತು ಆತನ ಪತ್ನಿ ಸೀತಾ ಕೂಡ ಮಾಂಸಾಹಾರಿಗಳೆನ್ನುವ ದೃಶ್ಯಗಳಿವೆ ಎಂದು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕಿ ನಯನತಾರ, ನಿರ್ದೇಶಕ ನಿಲೇಶ್ ಕೃಷ್ಣ, ನಿರ್ಮಾಪಕರಾದ ಆರ್ ರವೀಂದ್ರ,ಜಿತಿನ್ ಸೇಠಿ,ಪುನೀತ್ ಗೋಯಂಕಾ, ಝೀ ಸ್ಟುಡಿಯೋ ಸಿಬಿಒ ಹಾಗೂ ಭಾರತದ ನೆಟ್‌ಫ್ಲಿಕ್ಸ್ ಮುಖ್ಯಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ದೂರು ದಾಖಲಿಸಿರುವ ಬಗ್ಗೆ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ರಮೇಶ್ ಸೋಲಂಕಿ, ಈ ಕುರಿತು ಮುಂಬೈ ಪೊಲೀಸರು ಮತ್ತು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಮತ್ತು ಚಿತ್ರದ ನಿರ್ಮಾಪಕರು ಮತ್ತು ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ನೆಟ್‌ಫ್ಲಿಕ್ಸ್ ಇಂಡಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ  ನಾಯಕಿ ನಯನತಾರ ಒಳಗೊಂಡ ಚಿತ್ರತಂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚಿಗಷ್ಟೆ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್‌ ಕೂಡ ರಾಮ ಮಾಂಸಹಾರಿ ಎಂದು ಹೇಳಿಕೆ ನೀಡಿ ನಂತರ ವಿಷಾದ ವ್ಯಕ್ತಪಡಿಸಿದ್ದರು.

ನಯನತಾರ ನಟನೆಯ ‘ಅನ್ನಪೂರ್ಣಿ’ ಡಿಸೆಂಬರ್‌ 1ರಂದು ತಮಿಳುನಾಡಿನಲ್ಲಿ ಬಿಡುಗಡೆಯಾಗಿತ್ತು. ಆದರೆ ಡಿ.29ರಂದು ಒಟಿಟಿಯಲ್ಲಿ ಹಿಂದಿ ಸೇರಿ ದಕ್ಷಿಣ ರಾಜ್ಯಗಳ ಭಾಷೆಗಳಲ್ಲಿ ಬಿಡುಗಡೆಯಾದ ನಂತರ ದೂರು ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...