ಪಠ್ಯ ಪರಿಷ್ಕರಣೆ ಮಾಡುವುದು ತಪ್ಪೇ? ಗೀತಾ ಶಿವರಾಜ್‌ಕುಮಾರ್‌

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್‌ ನಾಯಕಿ ಗೀತಾ ಶಿವರಾಜ್‌ಕುಮಾರ್‌ ಸಮರ್ಥಿಸಿಕೊಂಡಿದ್ದು, ಮಕ್ಕಳ ಅನುಕೂಲಕ್ಕಾಗಿ ಪಠ್ಯ ಪರಿಷ್ಕರಣೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಮಕ್ಕಳಿಗೆ ಒಳ್ಳೆಯದಾಗಲಿ ಅಂತ ಪಠ್ಯ ಪರಿಷ್ಕರಣೆ ಮಾಡಿದಾಗ ಅದು ಅವರಿಗೆ ನೆರವಾಗುತ್ತದೆಯೇ ಹೊರತು ಗೊಂದಲಕ್ಕೀಡು ಮಾಡುವುದಿಲ್ಲ. ಮಕ್ಕಳಿಗೆ ಯಾವುದನ್ನು ಹೇಳಿಕೊಡಬೇಕು ಯಾವುದನ್ನು ಹೇಳಿಕೊಡಬಾರದು ಎಂಬುದು ಮೊದಲು ನಮ್ಮೆಲ್ಲರಿಗೆ ಗೊತ್ತಿರಬೇಕು” ಎಂದಿದ್ದಾರೆ.

ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಪಠ್ಯ ಪರಿಷ್ಕರಣೆಯ ಬಗ್ಗೆ ತೀರ್ಮಾನ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಆರರಿಂದ 10ನೇ ತರಗತಿ ವರೆಗಿನ ಕನ್ನಡ ಮತ್ತು ಸಮಾಜ ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹೆಡಗೇವಾರ್‌, ವಿ.ಡಿ ಸಾವರ್ಕರ್‌, ಚಕ್ರವರ್ತಿ ಸೂಲಿಬೆಲೆ ಅವರ ಪಠ್ಯಗಳನ್ನು ಕೈಬಿಡಲಾಗುವುದು ಅವುಗಳ ಬದಲಿಗೆ ಸಾವಿತ್ರಿ ಫುಲೆ, ಅಂಬೇಡ್ಕರ್‌ ಮತ್ತು ನೆಹರು ಅವರ ಪಠ್ಯಗಳನ್ನು ಸೇರಿಸಲಾಗುವುದು” ಎಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

ರಾಜ್ಯ ಕಾಂಗ್ರೆಸ್‌ ಸರ್ಕಾರ ಪಠ್ಯ ಪರಿಷ್ಕರಣೆಗೆ ಮುಂದಾಗುತ್ತಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಹಲವು ನಾಯಕರು ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವರ ಈ ನಡೆ ಸೇಡಿನ ರಾಜಕೀಯದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...