ಬಿಗ್ ಬಾಸ್ ಕನ್ನಡ 12ನೇ ಸೀಸನ್ ರಿಯಾಲಿಟಿ ಶೋ: ಗಿಲ್ಲಿ ನಟರಾಜ್ ವಿನ್ನರ್

Date:

ಕಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದ್ದೀಪ್ ನಡೆಸಿಕೊಡುವ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಸೀಸನ್‌ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ‌ನಟರಾಜ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ರನ್ನರ್ ಅಪ್ ಪ್ರಶಸ್ತಿಯನ್ನು ಕರಾವಳಿ ಮೂಲದ ಮುಂಬೈಯಲ್ಲಿ ವಾಸವಿರುವ ರಕ್ಷಿತಾ ಶೆಟ್ಟಿ ತಮ್ಮದಾಗಿಸಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಡದಪುರದ ಹಳ್ಳಿಯ ರೈತ ಕುಟುಂಬದಿಂದ ಬಂದಿರುವ ಗಿಲ್ಲಿ ನಟ ಹಾಸ್ಯ ಕಲಾವಿದನಾಗಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ 10ನೇ ತರಗತಿ ಪೂರ್ಣಗೊಳಿಸಿದ ನಂತರ 2 ವರ್ಷಗಳ ಕೋರ್ಸ್‌ ಐಟಿಐ ಮಾಡಿದ್ದಾರೆ. ಪಕ್ಕಾ ಹಳ್ಳಿ ಪ್ರತಿಭೆಯಾಗಿರುವ ಗಿಲ್ಲಿ, ಮಾತನಾಡುವ ಶೈಲಿಯನ್ನೇ ತನ್ನ ಕಾಮಿಡಿಯಲ್ಲಿ ಬಳಸಿ ಜನಪ್ರಿಯರಾಗಿದ್ದರಿಂದ ಬಿಗ್ ಬಾಸ್ ಫೈನಲ್‌ನಲ್ಲಿ ತಮ್ಮ ಹೆಸರು ಉಳಿಸಿಕೊಂಡಿದ್ದರು.

ಬಿಗ್ ಬಾಸ್ ಗೆದ್ದ ಗಿಲ್ಲಿನಟ ಅವರಿಗೆ 50 ಲಕ್ಷ ರೂ. ನಗದು ಬಹುಮಾನ ಹಾಗೂ ಮಾರುತಿ ಕಂಪನಿಯ ಹೊಸ ಕಾರು ಸಿಕ್ಕಿದೆ.

ರಕ್ಷಿತಾ ಶೆಟ್ಟಿ ಮೊದಲ ರನ್ನರ್ ಅಪ್ ಆದರೆ, ಕನ್ನಡಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಶ್ವಿನಿ ಗೌಡ ಎರಡನೇ ರನ್ನರ್ ಅಪ್ ಆಗಿದ್ದಾರೆ.

ಬಿಗ್ ಬಾಸ್ ಸ್ಟುಡಿಯೋ ಮುಂದೆ ಜನಜಂಗುಳಿ: ಸ್ಥಳಕ್ಕಾಗಮಿಸಿದ ಎಸ್‌ಪಿ

ಗಿಲ್ಲಿ‌ ನಟ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದಲ್ಲಿರುವ ಬಿಗ್ ಬಾಸ್ ಸ್ಟುಡಿಯೋ‌‌ ಮುಂದೆ ಗಿಲ್ಲಿಯ ಅಭಿಮಾನಿಗಳು ಸೇರಿದ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಎಸ್‌ಪಿ ಸ್ಥಳಕ್ಕೆ ಆಗಮಿಸಬೇಕಾದ ಪರಿಸ್ಥಿತಿ ಬಂದಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...