ಮುಂಬೈ | ಬೆಳ್ಳಂಬೆಳಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ; ಬಿಗಿ ಬಂದೋಬಸ್ತ್

Date:

ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಬಳಿ ಗುಂಡಿನ ದಾಳಿ ನಡೆದಿದೆ. ಇಂದು (ಏ. 14) ಬೆಳಗ್ಗೆ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 5 ಗಂಟೆಗೆ, ಬಾಂದ್ರಾದಲ್ಲಿರುವ ಸಲ್ಮಾನ್‌ ಮನೆಯ ಹೊರಗೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಮುಂಬೈ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯ ಪತ್ತೆಗೆ ಜಾಲ ಬೀಸಿದ್ದಾರೆ.

ಈ ಹಿಂದೆಯೂ ನಟ ಸಲ್ಮಾನ್ ಖಾನ್‌ಗೆ ಹಲವು ಬಾರಿ ಕೊಲೆ ಬೆದರಿಕೆ ಕರೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರ ಭದ್ರತೆಯನ್ನೂ ಹೆಚ್ಚಿಸಲಾಗಿತ್ತು.

ಕೆಲವು ತಿಂಗಳ ಹಿಂದೆ, ಅವರ ತಂದೆ ಸಲೀಮ್‌ ಖಾನ್‌ ವಾಕ್ ಮಾಡುವಾಗ ಚೀಟಿಯೊಂದು ಸಿಕ್ಕಿತ್ತು. ಅದರಲ್ಲಿ ಸಲ್ಮಾನ್ ಖಾನ್ ಕೊಲ್ಲಲ್ಪಡುತ್ತಾರೆ ಎಂದು ಹೇಳಲಾಗಿತ್ತು. ಇದಾದ ನಂತರ ಮುಂಬೈ ಪೊಲೀಸರು ಅವರ ಭದ್ರತೆಯನ್ನು ಹೆಚ್ಚಿಸಿದ್ದರು. ಇದೀಗ ಮನೆ ಮುಂದೆಯೇ ಗುಂಡಿನ ದಾಳಿ ನಡೆದಿದ್ದು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಸುದ್ದಿ ಸಂಸ್ಥೆ ಎಎನ್ಐಯ ವರದಿಯ ಪ್ರಕಾರ, ಇಬ್ಬರು ವ್ಯಕ್ತಿಗಳು ಈ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಸದ್ಯ, ಮುಂಬೈ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ವಿಧಿವಿಜ್ಞಾನ ತಂಡವು ಸ್ಥಳದಲ್ಲಿದ್ದು, ತನಿಖೆ ಚುರುಕು ಪಡೆದುಕೊಂಡಿದೆ. ಈ ಗುಂಡಿನ ದಾಳಿ ಏಕೆ ನಡೆದಿದೆ ಎಂದೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿದ್ದರೂ ಆತನ ಗ್ಯಾಂಗ್ ಹೊರಗಿದೆ. ಇದು ಆ ಗ್ಯಾಂಗ್‌ನ ಕೈವಾಡ ಇರಬಹುದೇ ಎಂದೂ ಶಂಕಿಸಲಾಗಿದ್ದು, ಸಲ್ಮಾನ್‌ ಖಾನ್‌ ಮತ್ತವರ ಕುಟುಂಬಕ್ಕೆ ಬಿಗಿ ಪೊಲೀಸ್‌ ಭದ್ರತೆ ನೀಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...