ಅಪಹರಣ, ಹಲ್ಲೆ ಆರೋಪ : ಹನಿಸಿಂಗ್‌ ವಿರುದ್ಧ ದೂರು ದಾಖಲು

Date:

ಸಂಗೀತ ಕಾರ್ಯಕ್ರಮ ರದ್ದು ಮಾಡಿದ್ದಕ್ಕೆ ಹಲ್ಲೆ ನಡೆಸಿದ್ದ ಹನಿಸಿಂಗ್‌

ಹನಿಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಿಸದ ಮುಂಬೈ ಪೊಲೀಸರು

ಬಾಲಿವುಡ್‌ನ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಹನಿಸಿಂಗ್‌ ವಿರುದ್ಧ ಅಪಹರಣ ಮತ್ತು ಹಲ್ಲೆ ಆರೋಪದಡಿ ಮುಂಬೈನ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುವ ʼಫೆಸ್ಟಿವಿನಾ ಮ್ಯೂಸಿಕ್‌ ಫೆಸ್ಟಿವಲ್‌ʼ ʼಇವೆಂಟ್‌ ಮ್ಯಾನೇಜ್‌ಮೆಂಟ್‌ʼ ಕಂಪನಿಯ ಮಾಲೀಕ ವಿವೇಕ್‌ ರವಿ ರಮಣ್‌ ಎಂಬುವವರು ಹನಿಸಿಂಗ್‌ ಮತ್ತು ಅವರ ಸಹಚರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದ ಕಾರಣಕ್ಕೆ ಹನಿಸಿಂಗ್‌ ಮತ್ತು ಆತನ ಸಹಚರರು ತಮ್ಮನ್ನು ಅಪಹಿರಿಸಿ ಹೋಟೆಲ್‌ವೊಂದಕ್ಕೆ ಕರೆದೊಯ್ದು ಥಳಿಸಿರುವುದಾಗಿ ಆರೋಪಿಸಿದ್ದಾರೆ.

ವಿವೇಕ್‌, ಹನಿಸಿಂಗ್‌ ಮತ್ತು ತಂಡದವರೊಂದಿಗೆ ಮುಂಬೈನಲ್ಲಿಯೇ ಏಪ್ರಿಲ್‌ 15ರಂದು ʼಹನಿಸಿಂಗ್‌ 3.0ʼ ಹೆಸರಿನ ಸಂಗೀತ ಕಾರ್ಯ್ರಕ್ರಮವನ್ನು ನಡೆಸಿಕೊಡಲು ಒಪ್ಪಂದ ಮಾಡಿಕೊಂಡಿದ್ದರು. ಒಪ್ಪಂದದಂತೆ ನಿಗದಿತ ದಿನದಂದು ಕಾರ್ಯಕ್ರಮ ಕೂಡ ಆಯೋಜನೆಗೊಂಡಿದೆ. ಆ ದಿನ ಕಾರ್ಯಕ್ರಮ ಶುರುವಾಗುವುದಕ್ಕೂ ಮುನ್ನ ವೇದಿಕೆಯ ಬಳಿ ವಿವೇಕ್‌ ಮತ್ತು ಹನಿಸಿಂಗ್‌ ಎದುರಾದಾಗ ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ನಂತರ ಜಗಳಕ್ಕೆ ತಿರುಗಿದ್ದು, ವಿವೇಕ್‌ ಕೂಡಲೇ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಇದರಿಂದ ಕೋಪಗೊಂಡ ಹನಿಸಿಂಗ್‌ ಮತ್ತು ತಂಡದವರು ವಿವೇಕ್‌ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅವರನ್ನು ತಾವು ತಂಗಿದ್ದ ʼಜೆ.ಡಬ್ಲ್ಯೂ ಮ್ಯಾರಿಯಟ್‌ʼ ಹೋಟೆಲ್‌ಗೆ ಕೊಂಡೊಯ್ದು, ಆ ಹೋಟೆಲ್‌ನ ರೂಮಿನಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಶ್‌ ಚೋಪ್ರಾ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಇನ್ನಿಲ್ಲ

ಸದ್ಯ ವಿವೇಕ್‌ ಅವರ ದೂರನ್ನು ಸ್ವೀಕರಿಸಿರುವ ಬಾಂದ್ರಾ ಠಾಣೆಯ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ. ಘಟನೆಯ ಬಗ್ಗೆ ಹನಿಸಿಂಗ್‌ ಮತ್ತು ತಂಡದವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...