ಹೈದರಾಬಾದ್ | ಪುಷ್ಪಾ 2 ಪ್ರೀಮಿಯರ್ ವೇಳೆ ಕಾಲ್ತುಳಿತ; ಮಹಿಳೆ ಸಾವು, ಬಾಲಕ ಗಂಭೀರ

Date:

ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ 2 : ದ ರೂಲ್‌’ ಸಿನಿಮಾ ಪ್ರೀಮಿಯರ್ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಆರ್‌ಟಿಸಿ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದೆ.

ಮಧ್ಯರಾತ್ರಿ ಪುಷ್ಪಾ 2 ಪ್ರೀಮಿಯರ್ ಪ್ರದರ್ಶನವಿತ್ತು. ಈ ವೇಳೆ ಥಿಯೇಟರ್‌ಗೆ ನಟ ಅಲ್ಲು ಅರ್ಜುನ್ ಆಗಮಿಸಿದ್ದಾರೆ. ನಾಯಕನನ್ನು ನೋಡುವ ತರಾತುರಿಯಲ್ಲಿ ಜನರು ಪ್ರವೇಶ ದ್ವಾರದತ್ತ ನುಗ್ಗಿದ್ದು ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದರೆ, ಕನಿಷ್ಠ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಈ ಪೈಕಿ ಮೃತ ಮಹಿಳೆಯ ಮಗನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ‘ಪುಷ್ಪಾ 2: ದ ರೂಲ್’; ಟಿಕೆಟ್‌ ದರ 2,400 ರೂ.ಗೆ ಏರಿಕೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರದರ್ಶನಕ್ಕೂ ಮುನ್ನ ಅಲ್ಲು ಅರ್ಜುನ್‌ ಅವರನ್ನು ನೋಡಲು ಅಭಿಮಾನಿಗಳು ಪ್ರವೇಶ ದ್ವಾರದತ್ತ ಧಾವಿಸಿದ್ದು ಜನರನ್ನು ನಿಯಂತ್ರಿಸಿ, ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದೂ ಹೇಳಲಾಗಿದೆ.

ಇನ್ನು ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮಹಿಳೆಯನ್ನು ದಿಲ್‌ಸುಖ್‌ನಗರ ನಿವಾಸಿ ರೇವತಿ (39) ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿ ಭಾಸ್ಕರ್ ಮತ್ತು ಅವರ ಇಬ್ಬರು ಮಕ್ಕಳಾದ ತೇಜ್ (9) ಮತ್ತು ಸಾನ್ವಿಕಾ (7) ಜೊತೆ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಲು ಬಂದಿದ್ದರು. ನೂಕು ನುಗ್ಗಲು ಉಂಟಾದಾಗ ರೇವತಿ ಮತ್ತು ಅವರ ಮಗ ತೇಜ್ ಮೂರ್ಛೆ ಹೋದರು.

ಮಹಿಳೆಯನ್ನ ಚಿಕಿತ್ಸೆಗಾಗಿ ದುರ್ಗಾ ಬಾಯಿ ದೇಶಮುಖ ಆಸ್ಪತ್ರೆಗೆ ಕರೆತರಲಾಗಿತ್ತು. ತೀವ್ರವಾಗಿ ಗಾಯಗೊಂಡ ಬಾಲಕ ತೇಜ್‌ನನ್ನು ಬೇಗಂಪೇಟೆಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೇವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದುರ್ಗಾಬಾಯಿ ದೇಶಮುಖ ಆಸ್ಪತ್ರೆಯಿಂದ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

‘ಪುಷ್ಪಾ 2 : ದ ರೂಲ್’ ಸಿನಿಮಾ ಗುರುವಾರ (ಡಿಸೆಂಬರ್ 5) ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2021ರ ಪುಷ್ಪಾ ಸಿನಿಮಾದ ಮುಂದುವರಿದ ಭಾಗ ಇದಾಗಿದೆ. 21,000ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ. ಮುಗಂಡ ಟಿಕೆಟ್ ಬುಕಿಂಗ್‌ ಮೂಲಕವೇ ತಂಡವು 100 ಕೋಟಿ ರೂಪಾಯಿ ಗಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...