ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣ: ರೀಲ್ಸ್‌ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ಜಾಮೀನು

Date:

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಗುರುವಾರ ಜಾಮೀನು ಮಂಜೂರಾಗಿದೆ.

ಪಿಡಿಜೆ ಕೋರ್ಟ್‌ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು.

ರೀಲ್ಸ್ ಬೆಡಗಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು ಮಾಡಿ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ. ಏಪ್ರಿಲ್ 5ರ ಶುಕ್ರವಾರ, ಜೈಲಿನಿಂದ ಸೋನು ಶ್ರೀನಿವಾಸ್ ಗೌಡ ಬಿಡುಗಡೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

7 ವರ್ಷದ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಕೆಲವೇ ದಿನಗಳ ಹಿಂದೆಯಷ್ಟೇ ಸೋನು ಶ್ರೀನಿವಾಸ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗ ಪಡಿಸಿದ್ದರು. ಆದರೆ, ಸೋನು ಶ್ರೀನಿವಾಸ್ ಗೌಡ ಕಾನೂನುಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದಿದ್ದಾರೆ ಎನ್ನಲಾಗಿದೆ.

ಈ ಆರೋಪದ ಮೇಲೆ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು, ಸೋನು ಶ್ರೀನಿವಾಸ್ ಗೌಡ ಅವರನ್ನ ಮಾರ್ಚ್ 22ರಂದು ಬಂಧಿಸಿದ್ದರು.

ಸೋನು ಶ್ರೀನಿವಾಸ್ ಗೌಡಗೆ ಬಾಲಕಿ ಪರಿಚಯವಾಗಿದ್ದ ಸ್ಥಳ, ಬಾಲಕಿಯ ನಿವಾಸ ಸೇರಿದಂತೆ ಹಲವೆಡೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕಾದ ಅವಶ್ಯಕತೆ ಇತ್ತು. ಹೀಗಾಗಿ, ಮೊದಲು ಸೋನು ಶ್ರೀನಿವಾಸ್ ಗೌಡ ಅವರನ್ನ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಬಳಿಕ ಸೋನು ಶ್ರೀನಿವಾಸ್ ಗೌಡಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...