ಕಾರ್ತಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯ್ತು ʼಜಪಾನ್‌ʼ ಟೀಸರ್‌

Date:

46ನೇ ವಸಂತಕ್ಕೆ ಕಾಲಿಟ್ಟ ಕಾರ್ತಿ

ತೆರೆಗೆ ಸಜ್ಜಾದ 25ನೇ ಸಿನಿಮಾ

ತಮಿಳಿನ ಖ್ಯಾತ ನಟ ಕಾರ್ತಿ ಗುರುವಾರ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬುರತ್ತಿದೆ. ಇದೇ ವೇಳೆ ಕಾರ್ತಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ʼಜಪಾನ್‌ʼ ಚಿತ್ರದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಟ್ಟು ಹಬ್ಬಕ್ಕೆ ಉಡುಗೊರೆಯ ರೂಪದಲ್ಲಿ ಬಿಡುಗಡೆಯಾಗಿರುವ ʼಜಪಾನ್‌ʼ ಚಿತ್ರದ ಟೀಸರ್‌ನಲ್ಲಿ ಕಾರ್ತಿ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಮ್ಮೆ ಖಳನಾಗಿ, ಇನ್ನೊಮ್ಮೆ ಹಾಸ್ಯಗಾರನಾಗಿ ಮತ್ತೊಮ್ಮೆ ನಾಯಕನಾಗಿ ಕಾಣಿಸಿಕೊಳ್ಳುವ ಕಾರ್ತಿ ತಮ್ಮ ಪಾತ್ರ ಮತ್ತು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ಈ ಚಿತ್ರದ ಶೀರ್ಷಿಕೆ ಮಾತ್ರವಲ್ಲ ನಾಯಕನ ಹೆಸರು ಕೂಡ ʼಜಪಾನ್‌ʼ ಎಂಬುದು ಗಮನಾರ್ಹ.

ಸಸ್ಪೆನ್ಸ್‌, ಕ್ರೈಂ, ಆ್ಯಕ್ಷನ್ ಕಥಾಹಂದರವುಳ್ಳ ʼಜಪಾನ್‌ʼ ಚಿತ್ರವನ್ನು ತಮಿಳಿನ ಖ್ಯಾತ ನಿರ್ದೇಶಕ ರಾಜು ಮುರುಗನ್ ನಿರ್ದೇಶಿಸಿದ್ದಾರೆ. ನಟಿ ಅನು ಇಮ್ಯಾನುಯೆಲ್ ಕಾರ್ತಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದು, ತೆಲುಗಿನ ಜನಪ್ರಿಯ ನಟ ಸುನಿಲ್ ಈ ಚಿತ್ರದ ಮೂಲಕ ತಮಿಳುಚಿತ್ರರಂಗ ಪ್ರವೇಶಿಸುತ್ತಿರುವುದು ವಿಶೇಷ.

ಈ ಸುದ್ದಿ ಓದಿದ್ದೀರಾ? ಕೇರಳದ ಅಸಲಿ ಕಥೆಯೇ ಬೇರೆ : ಪಿಣರಾಯಿ ವಿಜಯನ್‌

ಭಿನ್ನ ಶೀರ್ಷಿಕೆ, ಮೇಕಿಂಗ್‌ ಮತ್ತು ಟೀಸರ್‌ ಮೂಲಕ ಸದ್ದು ಮಾಡುತ್ತಿರುವ ʼಜಪಾನ್‌ʼ ಸಿನಿಮಾ ದೀಪಾವಳಿ ಹಬ್ಬಕ್ಕೆ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರವನ್ನು ʼಡ್ರೀಮ್ ವಾರಿಯರ್ ಪಿಕ್ಚರ್ಸ್ʼ ಬ್ಯಾನರ್‌ನಡಿ ಎಸ್‌.ಆರ್‌ ಪ್ರಕಾಶ್ ಬಾಬು ಮತ್ತು ಪ್ರಭು ಜಂಟಿಯಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಅವರ ಹಿನ್ನೆಲೆ ಸಂಗೀತವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...