ನಟ ದರ್ಶನ್‌ ಪ್ರಕರಣ | ಆರೋಪಿಗಳಿಗೆ ಸೆ.17ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್‌ ಮತ್ತು ಅವರ ಸಹಚರರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 17ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ಈ ಹಿಂದೆ, ಆದೇಶಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ, ಶುಕ್ರವಾರ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ, ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ದೀಪಕ್ ಹಾಗೂ ರಾಜ್ಯದ ವಿವಿಧ ಜೈಲುಗಳಿದ್ದ ಇತರ 14 ಮಂದಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ಒಂದು ವಾರದ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...