ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಸೆನ್ಸಾರ್ ಮಂಡಳಿ ಅನುಮೋದನೆ; ಶೀಘ್ರ ಬಿಡುಗಡೆ

Date:

ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಅನುಮೋದನೆ ನೀಡಿದೆ. ಸೆನ್ಸಾರ್ ಮಂಡಳಿಯ ಅನುಮೋದನೆ ಲಭಿಸಿದ ಕಾರಣ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಯು ವಿಳಂಬವಾಗಿತ್ತು. ಇದೀಗ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಎಮರ್ಜೆನ್ಸಿ ಸಿನಿಮಾಗೆ ಪ್ರಮಾಣಪತ್ರವನ್ನು ನೀಡಿದೆ ಎಂದು ಗುರುವಾರ ನಟಿ ತಿಳಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಸ್‌ನಲ್ಲಿ “ನಮ್ಮ ಎಮರ್ಜೆನ್ಸಿ ಚಲನಚಿತ್ರಕ್ಕೆ ನಾವು ಪ್ರಮಾಣಪತ್ರವನ್ನು ಸ್ವೀಕರಿಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ರದ್ದಾದ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರಬೇಕು: ಕಂಗನಾ ರಣಾವತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ಬಗ್ಗೆ ಎಕ್ಸ್‌ (ಟ್ವಿಟ್ಟರ್) ಪೋಸ್ಟ್ ಮಾಡಿರುವ ಕಂಗನಾ ರಣಾವತ್, “ನಮ್ಮ ಚಿತ್ರ ಎಮರ್ಜೆನ್ಸಿಗೆ ಸೆನ್ಸಾರ್ ಪ್ರಮಾಣಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಶೀಘ್ರದಲ್ಲೇ ಬಿಡುಗಡೆಯ ದಿನಾಂಕವನ್ನು ಪ್ರಕಟಿಸುತ್ತೇವೆ. ನಿಮ್ಮ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು” ಎಂದು ಹೇಳಿದ್ದಾರೆ.

ಸಿನಿಮಾವು ಸೆಪ್ಟೆಂಬರ್ 6ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿತ್ತು. ಆದರೆ ಸೆನ್ಸಾರ್ ಮಂಡಳಿಯ ಪ್ರಮಾಣಪತ್ರ ಲಭಿಸಿದ ಕಾರಣ ಬಿಡುಗಡೆ ಸಾಧ್ಯವಾಗಲಿಲ್ಲ. ನಿರಂತರವಾಗಿ ಬಿಡುಗಡೆ ವಿಳಂಬವಾಗುತ್ತಾ ಬಂತು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತಾದ ಈ ಸಿನಿಮಾದಲ್ಲಿ ಕಂಗನಾ ರಣಾವತ್ ಇಂದಿರಾ ಗಾಂಧಿ ಪಾತ್ರ ನಿರ್ವಹಿಸಿದ್ದಾರೆ.

ಇದನ್ನು ಓದಿದ್ದೀರಾ? ಎಮರ್ಜೆನ್ಸಿ | ಪ್ರಮಾಣಪತ್ರ ನೀಡಲು ಸಿಬಿಎಫ್‌ಸಿಗೆ ನಿರ್ದೇಶಿಸಲಾಗದು ಎಂದ ಹೈಕೋರ್ಟ್

ಈ ಸಿನಿಮಾದಲ್ಲಿ ಸಿಖ್ ಧರ್ಮವನ್ನು ತಪ್ಪಾಗಿ ತೋರಿಸಲಾಗಿದೆ ಎಂದು ಶಿರೋಮಣಿ ಅಕಾಲಿ ದಳ ಸೇರಿದಂತೆ ಸಿಖ್ ಸಂಘಟನೆಗಳು ಆರೋಪಿಸಿದ್ದು, ಅದಾದ ಬಳಿಕ ಈ ಸಿನಿಮಾ ವಿವಾದದಲ್ಲಿ ಸಿಲುಕಿದೆ. ಬಿಡುಗಡೆಯನ್ನು ವಿಳಂಬಗೊಳಿಸಲು ಚಲನಚಿತ್ರ ಸಂಸ್ಥೆ ಪ್ರಮಾಣೀಕರಣವನ್ನು ನೀಡುತ್ತಿಲ್ಲ ಎಂದು ರಣಾವತ್ ಆರೋಪಿಸಿದ್ದರು.

ಈ ಸಿನಿಮಾದಲ್ಲಿ ಕೆಲವು ದೃಶ್ಯಗಳು ಕಡಿತಗೊಳಿಸಲು ಕಂಗನಾ ರಣಾವತ್ ಒಪ್ಪಿದೆ ಎಂದು ಕಳೆದ ಸೋಮವಾರ ಸಿಬಿಎಫ್‌ಸಿ ಬಾಂಬೆ ಹೈಕೋರ್ಟ್‌ಗೆ ತಿಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...