ಕನ್ನಡ ಚಿತ್ರರಂಗದ ಹಿರಿಯ ನಟ ‘ಸರಿಗಮ ವಿಜಿ’ ನಿಧನ

Date:

ಕನ್ನಡ ಚಿತ್ರರಂಗದ ಹಿರಿಯ ನಟ, ‘ಸರಿಗಮ ವಿಜಿ’ ಎಂದೇ ಖ್ಯಾತರಾದ ನಟ ವಿಜಯಕುಮಾರ್ ಬುಧವಾರ ನಿಧನರಾಗಿದ್ದಾರೆ. 76 ವರ್ಷದ ನಟ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಉಂಟಾಗಿತ್ತು. ಯಶವಂತಪುರಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಮೃತರ ಅಂತ್ಯಕ್ರಿಯೆಯು ಜನವರಿ 16ರ ಬೆಳಿಗ್ಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಇರುವ ಚಿತಾಗಾರದಲ್ಲಿ ನಡೆಯಲಿದೆ.

ಇದನ್ನು ಓದಿದ್ದೀರಾ? ಖ್ಯಾತ ಪರಮಾಣು ವಿಜ್ಞಾನಿ ಡಾ ಆರ್ ಚಿದಂಬರಂ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ವಿಮಾನಪುರದಲ್ಲಿ (ಎಚ್‌ಎಎಲ್ ಪ್ರದೇಶ) ವಿಜಿ ಜನಿಸಿದ್ದು ಆರಂಭದಲ್ಲಿ ನಾಟಕದಲ್ಲಿ ನಟಿಸುತ್ತಿದ್ದರು. ಬಳಿಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು. ವಿಜಿ ಬರೆದ ‘ಸಂಸಾರದಲ್ಲಿ ಸರಿಗಮ’ ನಾಟಕ ಜನಮನ್ನಣೆಗೆ ಪಾತ್ರವಾಯಿತು. ಇದೇ ಕಾರಣಕ್ಕೆ ವಿಜಯಕುಮಾರ್ ಅವರಿಗೆ ‘ಸರಿಗಮ ವಿಜಿ’ ಎಂಬ ಹೆಸರು ಬಂದಿದೆ. ಧಾರವಾಹಿಗಳಲ್ಲೂ ವಿಜಿ ನಟಿಸಿದ್ದಾರೆ

ಪೋಷಕ ಪಾತ್ರ, ಹಾಸ್ಯನಟ, ಖಳನಟ ಹೀಗೆ ಹಲವು ಪಾತ್ರಗಳನ್ನು ವಿಜಿ ನಿರ್ವಹಿಸಿದ್ದಾರೆ. ದೇವರಾಜ್, ದರ್ಶನ್, ವಿಷ್ಣುವರ್ಧನ್, ಪುನೀತ್ ರಾಜ್‌ಕುಮಾರ್, ಅನಂತನಾಗ್, ಅಂಬರೀಶ್ ಸೇರಿದಂತೆ ಹಲವು ನಟರುಗಳ ಜೊತೆ ತೆರೆಯಲ್ಲಿ ಕಾಣಿಸಿಕೊಂಡಿದ್ದಾರೆ.

400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಸಿನಿಮಾಗಳಲ್ಲಿ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಶ್ರೀಕೃಷ್ಣದೇವರಾಯ ಪುರಸ್ಕಾರ, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...