ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

Date:

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಅಂಬೋಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಾಘವೇಂದ್ರ ಹೆಗಡೆ ಈ ಬಗ್ಗೆ ದೂರು ನೀಡಿದ್ದಾರೆ.

“2016ರಲ್ಲಿ ನನ್ನ ಮೊದಲ ಚಿತ್ರದ ಯಶಸ್ಸಿನ ನಂತರ, ದಕ್ಷಿಣ ಭಾರತದ ಚಲನಚಿತ್ರ ನಟ ಧ್ರುವ ಕುಮಾರ್ ಅಲಿಯಾಸ್ ಧ್ರುವ ಸರ್ಜಾ ನನ್ನ ಕಚೇರಿಗೆ ಬಂದು ನನ್ನೊಂದಿಗೆ ಚಿತ್ರದಲ್ಲಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. 2016ರಿಂದ 2018ರವರೆಗೆ ನನ್ನ ಬೆನ್ನತ್ತಿದ್ದರು. ಆದ್ದರಿಂದ ನಾನು ಒಪ್ಪಿಕೊಂಡು ಸರ್ಜಾ ಅವರು ತಮ್ಮೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಮೊದಲು 3 ಕೋಟಿ ರೂಪಾಯಿಗಳನ್ನು ನೀಡುವಂತೆ ಕೇಳಿಕೊಂಡಿದ್ದರು. ಅವರು ನೀಡಿದ ಭರವಸೆಯ ಆಧಾರದಲ್ಲಿ ಹಣ ನೀಡಿದ್ದೆ” ಎಂದು ಹೆಗಡೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಂಚನೆ ಆರೋಪ | ನಿರ್ಮಾಪಕರ ವಿರುದ್ಧ ಕ್ರಮಕ್ಕೆ ಮುಂದಾದ ಸುದೀಪ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರ ಫೆಬ್ರವರಿ 21ರಂದು ಔಪಚಾರಿಕ ಒಪ್ಪಂದಕ್ಕೆ ಸಹಿ ಹಾಕುವ ಮೊದಲು ಹಣವನ್ನು ವರ್ಗಾಯಿಸಲಾಗಿದೆ. ಒಪ್ಪಂದದ ಪ್ರಕಾರ, ಚಿತ್ರೀಕರಣವು 2020ರ ಜನವರಿಯಲ್ಲಿ ಪ್ರಾರಂಭವಾಗಿ 2020ರ ಜೂನ್‌ ಒಳಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಹಣ ಪಡೆದ ಬಳಿಕ ಸರ್ಜಾ ಪದೇ ಪದೇ ದಿನ ವಿಸ್ತರಣೆ ಕೋರಿದ್ದಾರೆ. ಕೋವಿಡ್ ಲಾಕ್‌ಡೌನ್ ಬಳಿಕ ಪ್ರತಿಕ್ರಿಯಿಸಿಲ್ಲ ಎಂದು ಹೆಗಡೆ ಆರೋಪಿಸಿದ್ದಾರೆ.

“ಸರ್ಜಾ ಅವರು ಚಿತ್ರಕಥೆಗಾರರು ಮತ್ತು ಪ್ರಚಾರ ಸಲಹೆಗಾರರು ಸೇರಿದಂತೆ ಮೂರನೇ ವ್ಯಕ್ತಿಗಳಿಗೆ ಹೆಚ್ಚುವರಿ ಪಾವತಿಗಳನ್ನು ಮಾಡಿಸಿದ್ದಾರೆ. ಆದರೆ ಕೊನೆಗೆ, ಸರ್ಜಾ ಆ ಯೋಜನೆಯಿಂದ ಹಿಂದೆ ಸರಿದರು. ಕರೆ ತೆಗೆಯುತ್ತಿಲ್ಲ” ಎಂದು ದೂರಿದ್ದಾರೆ.

ಇನ್ನು ಈ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಧ್ರುವ ಮ್ಯಾನೇಜರ್ ಅಶ್ವಿನ್ ಸ್ಪಷ್ಟನೆ ನೀಡಿದ್ದಾರೆ. “ರಾಘವೇಂದ್ರ ಹೆಗೆಡೆ 2018ರಲ್ಲಿ ಸೋಲ್ಜರ್ ಸಿನಿಮಾ ಮಾಡಲು 3.15 ಕೋಟಿ ರೂಪಾಯಿ ಹಣ ನೀಡಿದ್ದರು. ನಂದಿನಿ ಎಂಟರ್​ಟೇನ್​ಮೆಂಟ್​ನಿಂದ 20 ಲಕ್ಷ ರೂಪಾಯಿ ಹಾಗೂ ರಾಘವೇಂದ್ರ ಕಡೆಯಿಂದ 2.95 ಲಕ್ಷ ರೂಪಾಯಿ ನೀಡಲಾಗಿತ್ತು. ಈ ಪೈಕಿ 20 ಲಕ್ಷ ರೂಪಾಯಿ ಹಣ ನಾವು ಹಿಂದಿರುಗಿಸಿದ್ದೆವು. ಉಳಿದ ಹಣದಲ್ಲಿ ಸಿನಿಮಾ ಮಾಡಬೇಕಿತ್ತು. ಆದರೆ ಸಿನಿಮಾ ಮಾಡುವ ವಿಚಾರದ ಬಂದಾಗ ದಿನ ದೂಡುತ್ತಿದ್ದರು. ನಾಲ್ಕುವರೆ ವರ್ಷದ ಬಳಿಕ ಅರ್ಧ ಸ್ಕ್ರಿಪ್ಟ್ ಕಳುಹಿಸಿದ್ದರು” ಎಂದು ತಿಳಿಸಿದ್ದಾರೆ.

“ಬಳಿಕ ಸೋಲ್ಜರ್ ಸಿನಿಮಾ ಮಾಡೋದು ಬೇಡ, ಬಜೆಟ್ ಜಾಸ್ತಿ ಆಗುತ್ತದೆ. ಮಾಡಿದರೂ ಕನ್ನಡದಲ್ಲಿ ಬೇಡ, ತೆಲುಗು ಅಥವಾ ಹಿಂದಿಯಲ್ಲಿ ಮಾಡೋಣ ಎಂದಿದ್ದಾರೆ. ಆದರೆ ಕನ್ನಡದಲ್ಲೇ ಸಿನಿಮಾ ಮಾಡಬೇಕು ಎಂದು ಸರ್ಜಾ ಪಟ್ಟು ಹಿಡಿದರು. ಅಕ್ಟೋಬರ್​ನಿಂದ ಡೇಟ್ಸ್ ಬೇಕು ಎಂದು ರಾಘವೇಂದ್ರ ಕೇಳಿದರು. ನಾವು ಇದಕ್ಕೆ ರೆಡಿ ಇದ್ದೆವು. ಜುಲೈನಲ್ಲಿ ನೋಟಿಸ್ ಕೊಟ್ಟಿದ್ದಾರೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...