ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸಿ ವಿ ಶಿವಶಂಕರ್ ನಿಧನ

Date:

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದ ನಟ, ನಿರ್ದೇಶಕ ಸಿ ವಿ ಶಿವಶಂಕರ್​ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದಯಘಾತ ಉಂಟಾದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಅವರು ಬದುಕುಳಿಯಲಿಲ್ಲ.

ವಿ ಶಿವಶಂಕರ್​ ಅವರಿಗೆ 90 ವರ್ಷ ವಯಸ್ಸಾಗಿತ್ತು. ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆ ಅವರಿಗೆ ಇರಲಿಲ್ಲ. ಮಧ್ಯಾಹ್ನ ಊಟ ಮುಗಿಸಿದರು. ಪೂಜೆ ಮಾಡಿದ ಬಳಿಕ ಹಾರ್ಟ್​ ಅಟ್ಯಾಕ್​ ಆಯಿತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ಸಿ ವಿ ಶಿವಶಂಕರ್​ ಅವರು ರಂಗಭೂಮಿಯಲ್ಲಿ ತೊಡಗಿಕೊಂಡಿದ್ದರು. ಬಾಲನಟನಾಗಿಯೇ ರಂಗಭೂಮಿ ಪ್ರವೇಶಿಸಿದ್ದ ಅವರು ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸ್ಕೂಲ್ ಮಾಸ್ಟರ್​’, ‘ಕೃಷ್ಣ ಗಾರುಡಿ’, ‘ರತ್ಮಮಂಜರಿ’, ‘ರತ್ನಗಿರಿ ರಹಸ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹಲವು ನಿರ್ದೇಶಕರ ಜೊತೆ ಸಹಾಯಕರಾಗಿ ಅನುಭವ ಪಡೆದ ಬಳಿಕ ‘ಮನೆ ಕಟ್ಟಿ ನೋಡು’ ಸಿನಿಮಾವನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದರು.

ಈ ಸುದ್ದಿ ಓದಿದ್ದೀರಾ? ಆದಿಪುರುಷ್ ವಿವಾದ | ಸಂಭಾಷಣೆಕಾರ ಮನೋಜ್‌ಗೆ ಅಲಹಾಬಾದ್‌ ಹೈಕೋರ್ಟ್‌ ನೋಟಿಸ್

‘ಪದವೀಧರ’, ‘ನಮ್ಮ ಊರು’, ‘ಮಹಡಿಯ ಮನೆ’, ‘ಹೊಯ್ಸಳ, ‘ಮಹಾ ತಪಸ್ವಿ’, ‘ಕನ್ನಡ ಕುವರ’, ‘ವೀರ ಮಹಾದೇವ’ ಮತ್ತಿತರ ಸಿನಿಮಾಗಳಿಗೆ ಸಿ ವಿ ಶಿವಶಂಕರ್​ ನಿರ್ದೇಶನ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ಗೀತರಚನಕಾರನಾಗಿಯೂ ಗುರುತಿಸಿಕೊಂಡಿದ್ದರು. ‘ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ..’ ಹಾಡನ್ನು ಬರೆಯುವ ಮೂಲಕ ಅವರು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...