​’ದಿ ಕೇರಳ ಸ್ಟೋರಿ 2′ ಬಿಡುಗಡೆಗೆ ತಡೆ ನೀಡಿದ ಕೇರಳ ಹೈಕೋರ್ಟ್

Date:

ತೀವ್ರ ವಿವಾದಕ್ಕೆ ಕಾರಣವಾಗಿರುವ ‘ದಿ ಕೇರಳ ಸ್ಟೋರಿ 2’ ಚಿತ್ರದ ಬಿಡುಗಡೆಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಮಹತ್ವದ ಸೂಚನೆ ನೀಡಿದ್ದು, ಅರ್ಜಿಯ ವಿಚಾರಣೆ ಸಂಪೂರ್ಣವಾಗಿ ಮುಗಿಯುವವರೆಗೆ ಚಿತ್ರವನ್ನು ಬಿಡುಗಡೆ ಮಾಡದಂತೆ ಚಿತ್ರತಂಡಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

​ಅರ್ಜಿದಾರರು ವ್ಯಕ್ತಪಡಿಸಿರುವ ಕಳವಳವು “ಬಹುಶಃ ನೈಜವಾಗಿದೆ” ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಈ ವಿಷಯದ ಕುರಿತು ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡುವವರೆಗೆ ಕಾಯುವಂತೆ ನಿರ್ಮಾಪಕರಿಗೆ ಸೂಚಿಸಿದೆ.

ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶನದ ಮತ್ತು ವಿಪುಲ್ ಅಮೃತ್‌ಲಾಲ್ ಶಾ ನಿರ್ಮಾಣದ ಈ ಚಿತ್ರವು ಫೆಬ್ರವರಿ 27ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಿದ್ಧವಾಗಿತ್ತು. ಆದರೆ, ಚಿತ್ರದಲ್ಲಿ ಭಾರತೀಯ ಮುಸ್ಲಿಮರನ್ನು ಬಿಂಬಿಸಿರುವ ರೀತಿ ಮತ್ತು ಉತ್ಪ್ರೇಕ್ಷಿತ ಅಂಶಗಳ ಕಾರಣಕ್ಕಾಗಿ ಚಿತ್ರವು ತೀವ್ರ ಟೀಕೆಗೆ ಗುರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ​’ನ್ಯಾಯಾಂಗವನ್ನು ದೂಷಿಸಲು ಯಾರಿಗೂ ಬಿಡೆವು’: ಎನ್‌ಸಿಇಆರ್‌ಟಿ ಪಠ್ಯದ ವಿರುದ್ಧ ಸಿಜೆಐ ಆಕ್ರೋಶ

​ಜೀವಶಾಸ್ತ್ರಜ್ಞ ಶ್ರೀದೇವ್ ನಂಬೂದಿರಿ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಚಿತ್ರವು ಕೇರಳ ರಾಜ್ಯವನ್ನು “ದುರುದ್ದೇಶಪೂರಿತ”ವಾಗಿ ಬಿಂಬಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಚಿತ್ರದ ಬಿಡುಗಡೆ ಅಥವಾ ಸಾರ್ವಜನಿಕ ಪ್ರದರ್ಶನಕ್ಕೆ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ಚಿತ್ರತಂಡಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. “ನಿಮಗೆ ವಾದ ಮಂಡಿಸಲು ನಾನು ಸಾಕಷ್ಟು ಸಮಯಾವಕಾಶ ನೀಡುತ್ತೇನೆ. ಆದರೆ, ವಿಚಾರಣೆ ಬಾಕಿ ಇರುವಾಗ ಚಿತ್ರವನ್ನು ಬಿಡುಗಡೆ ಮಾಡಬೇಡಿ. ವಿಚಾರಣೆ ಮುಕ್ತಾಯಗೊಂಡು, ಅರ್ಜಿಗಳ ಮೇಲೆ ನ್ಯಾಯಾಲಯವು ತೀರ್ಪು ನೀಡುವವರೆಗೆ ಕಾಯಿರಿ,” ಎಂದು ಸೂಚಿಸಿದ್ದಾರೆ.

​ಇದಕ್ಕೂ ಮುನ್ನ, ಪ್ರಕರಣದ ಆಳ ತಿಳಿಯಲು ಖುದ್ದಾಗಿ ಚಿತ್ರವನ್ನು ವೀಕ್ಷಿಸಲು ನ್ಯಾಯಾಲಯ ಸಿದ್ಧವಿತ್ತು. ಆದರೆ, ನ್ಯಾಯಪೀಠಕ್ಕೆ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲು ಚಿತ್ರತಂಡವು ಹಿಂದೇಟು ಹಾಕಿತ್ತು ಎಂದು ವರದಿಯಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...