ಜಪಾನ್‌ನಲ್ಲಿ ತೆರೆಗೆ ಸಜ್ಜಾದ ʼಕೆಜಿಎಫ್‌ʼ ಸರಣಿ

Date:

ಗಳಿಕೆಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಜಿಎಫ್‌-2

ಜಾಪನೀಸ್‌ ಭಾಷೆಯಲ್ಲೇ ಮಾಹಿತಿ ಹಂಚಿಕೊಂಡ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ಮತ್ತು ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ ʼಕೆಜಿಎಫ್‌-1ʼ ಮತ್ತು ʼಕೆಜಿಎಫ್‌-2ʼ ಸಿನಿಮಾ ಸರಣಿಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದವು. ಯಶ್‌ಗೆ ಗ್ಲೋಬಲ್‌ ಸ್ಟಾರ್‌ ಪಟ್ಟವನ್ನು ತಂದುಕೊಟ್ಟಿದ್ದ ಈ ಸರಣಿ ಸಿನಿಮಾಗಳು ಇದೀಗ ಜಪಾನ್‌ನಲ್ಲಿ ಬಿಡುಗಡೆಗೆ ಸಜ್ಜಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೆಜಿಎಫ್‌ ಸರಣಿಯ ಎರಡೂ ಸಿನಿಮಾಗಳು ಜುಲೈ 14ರಿಂದ ಜಪಾನ್‌ನಲ್ಲಿ ತೆರೆಕಾಣಲಿವೆ. ಈ ಬಗ್ಗೆ ಸ್ವತಃ ಯಶ್‌ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಸೆಲ್ಫೀ ವಿಡಿಯೋದಲ್ಲಿ ಜಪಾನ್‌ ಭಾಷೆಯಲ್ಲೇ ಮಾತನಾಡಿರುವ ಯಶ್‌ ತಮ್ಮ ಜಾಪನೀಸ್‌ ಅಭಿಮಾನಿಗಳಿಗೆ ಸಿನಿಮಾ ವೀಕ್ಷಿಸುವಂತೆ ಕರೆ ನೀಡಿದ್ದಾರೆ. ಸ್ಥಳೀಯ ಭಾಷೆಯಲ್ಲೇ ಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಕೆಜಿಎಫ್‌ ಸರಣಿ ಜಪಾನ್‌ ದೇಶಾದ್ಯಂತ ಬಿಡುಗಡೆಗೆ ಸಜ್ಜಾಗಿರುವುದರಿಂದ ಗಳಿಕೆಯ ವಿಚಾರದಲ್ಲಿ ಹೊಸ ದಾಖಲೆ ಬರೆಯಲಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ಈ ಪಟ್ಟಿಯಲ್ಲಿ 1924.7 ಕೋಟಿಗಳಷ್ಟು ಸಾರ್ವಕಾಲಿಕ ಗಳಿಕೆ ಮಾಡಿರುವ ಆಮಿರ್‌ ಖಾನ್‌ ನಟನೆಯ ʼದಂಗಲ್‌ʼ ಸಿನಿಮಾ ಮೊದಲ ಸ್ಥಾನದಲ್ಲಿದ್ದರೆ, 1742.3 ಕೋಟಿ ಕಲೆ ಹಾಕಿದ್ದ ʼಬಾಹುಬಲಿ-2ʼ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿರುವ ʼಆರ್‌ಆರ್‌ಆರ್‌ʼ ಸಿನಿಮಾ ₹1,243.3 ಕೋಟಿಗಳನ್ನು ಗಳಿಸಿದೆ. ʼಕೆಜಿಎಫ್‌-2ʼ ಸಿನಿಮಾ ನಾಲ್ಕನೇ ಸ್ಥಾನದಲ್ಲಿದ್ದು, ₹1,177.9 ಕೋಟಿ ಕಲೆ ಹಾಕಿದೆ. ಇದೀಗ ಜಪಾನ್‌ನಲ್ಲಿ ಬಿಡುಗಡೆಯಾಗುತ್ತಿರುವ ಈ ಸಿನಿಮಾ ನಿರೀಕ್ಷಿತ ಯಶಸ್ಸು ಗಳಿಸಿದರೆ ʼಆರ್‌ಆರ್‌ಆರ್‌ʼ ಸಿನಿಮಾದ ಗಳಿಕೆಯದ ದಾಖಲೆಯನ್ನು ಸರಿಗಟ್ಟಿ ಮೂರನೇ ಸ್ಥಾನಕ್ಕೇರಲಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರೀಕರಣ ಸಮಯದಲ್ಲಿ ಶಾರುಖ್‌ ಖಾನ್‌ ಮೂಗಿಗೆ ಗಾಯ

ಕೆಜಿಎಫ್‌-2 ಯಶಸ್ಸಿನ ಬಳಿಕ ಜವಾಬ್ದಾರಿ ಹೆಚ್ಚಾಗಿದೆ ಎನ್ನುವ ಯಶ್‌ ಈವರೆಗೆ ತಮ್ಮ ಮುಂದಿನ ಚಿತ್ರವನ್ನು ಘೋಷಣೆ ಮಾಡಿಲ್ಲ. ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ಚಿತ್ರಕಥೆ ಸಿದ್ಧವಾಗಿದೆ, ಸಮಯ ವ್ಯರ್ಥ ಮಾಡದೆ ಕೆಲಸ ಮಾಡುತ್ತಿದ್ದೇನೆ, ಸದ್ಯದಲ್ಲೇ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದಿದ್ದರು. ಯಶ್‌ ಅವರ ಮುಂದಿನ ಚಿತ್ರದ ಘೋಷಣೆ ಯಾವಾಗ ಎಂದು ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಕೆಜಿಎಫ್‌ ಸರಣಿ ಸಾಗರದಾಚೆಗೆ ಮರು ಬಿಡುಗಡೆಯಾಗುತ್ತಿರುವುದು ಖುಷಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...