ವಿಜಯ್‌ ದೇವರಕೊಂಡ ಹುಟ್ಟು ಹಬ್ಬಕ್ಕೆ ʼಖುಷಿʼ ಗಿಫ್ಟ್‌

Date:

ಟಾಲಿವುಡ್‌ನ ಸ್ಟಾರ್‌ ನಟ ವಿಜಯ್ ದೇವರಕೊಂಡ ಇಂದು (ಮೇ 9) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ನಟನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ವಿಜಯ್‌ ದೇವರಕೊಂಡ ಮತು ಸಮಂತಾ ಜೊತೆಯಾಗಿ ನಟಿಸಿರುವ ಬಹುನಿರೀಕ್ಷಿತ ʼಖುಷಿʼ ಚಿತ್ರದ ಮೊದಲ ಲಿರಿಕಲ್‌ ಹಾಡು ಬಿಡುಗಡೆಯಾಗಿದೆ.

ವಿಜಯ್‌ ದೇವರಕೊಂಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ʼನನ್ನ ರೋಜಾ ನೀನೇ..ʼ ಹಾಡು ಸಿನಿ ರಸಿಕರ ಗಮನ ಸೆಳೆಯುತ್ತಿದೆ. ಕನ್ನಡದ ಖ್ಯಾತ ಸಾಹಿತಿ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಈ ಹಾಡಿಗೆ ಹೆಶಮ್ ಅಬ್ದುಲ್ ವಹಾಬ್ ಧ್ವನಿಯಾಗಿದ್ದು, ಹಿನ್ನೆಲೆ ಸಂಗೀತವನ್ನು ಕೂಡ ಸಂಯೋಜಿಸಿದ್ದಾರೆ. ಈ ಮೆಲೋಡಿ ಹಾಡಿನ ಚಿತ್ರೀಕರಣವನ್ನು ಕಾಶ್ಮೀರ ಭಾಗದಲ್ಲಿ ನಡೆಸಲಾಗಿದೆ.

ತೆಲುಗಿನ ಖ್ಯಾತ ನಿರ್ದೇಶಕ ಶಿವ ನಿರ್ವಾಣ ನಿರ್ದೇಶನದ ಪ್ರೇಮ ಕಥಾಹಂದರವುಳ್ಳ ಈ ಚಿತ್ರದಲ್ಲಿ ವಿಜಯ್‌ ದೇವರಕೊಂಡ ಮತ್ತು ಸಮಂತಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವೆನ್ನೆಲ ಕಿಶೋರ್, ರೋಹಿಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಕಿಂಗ್‌ ಮತ್ತು ಬಹುತಾರಾಗಣದ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ʼಖುಷಿʼ ಚಿತ್ರ ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿದ್ದು, ಸೆಪ್ಟೆಂಬರ್ 1ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

ಈ ಹಿಂದೆ ವಿಜಯ್‌ ದೇವರಕೊಂಡ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ʼಲೈಗರ್‌ʼ ಸಿನಿಮಾ ಕೂಡ ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ತೆರೆಕಂಡಿತ್ತು. ಮೇಕಿಂಗ್‌ ಮತ್ತು ಅಬ್ಬರದ ಪ್ರಚಾರದ ಮೂಲಕವೇ ಹೆಚ್ಚು ಸದ್ದು ಮಾಡಿದ್ದ ʼಲೈಗರ್‌ʼ ಗಲ್ಲಾ ಪೆಟ್ಟಿಗೆಯಲ್ಲಿ ಹೀನಾಯ ಸೋಲು ಕಂಡಿತ್ತು. ಲೈಗರ್‌ ಸೋಲಿನ ಬಳಿಕ ಕೆಲ ದಿನಗಳ ಕಾಲ ನಟನೆಯಿಂದ ಅಂತರ ಕಾಯ್ದುಕೊಂಡಿದ್ದ ವಿಜಯ್‌ ಇದೀಗ ಖುಷಿ ಚಿತ್ರದ ಮೂಲಕ ಪ್ರೇಕ್ಷಕರನ್ನು ಎದುರುಗೊಳ್ಳಲು ಸಜ್ಜಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...