ಎಂಪುರಾನ್ ವಿವಾದ | ಪೃಥ್ವಿರಾಜ್‌ಗೆ ನಿರ್ಮಾಪಕರ ಬೆಂಬಲ; 250 ಕೋಟಿಗೂ ಅಧಿಕ ಗಳಿಕೆ

Date:

ಗುಜರಾತ್(Gujarat) ಹತ್ಯಾಕಾಂಡ ಹೋಲುವ ಕೆಲವು ದೃಶ್ಯಗಳನ್ನು ಹೊಂದಿದೆ ಎಂಬ ಕಾರಣ ಬಲಪಂಥೀಯರ ಟೀಕೆಗೆ ಒಳಗಾದ ಎಲ್‌2: ಎಂಪುರಾನ್(L2: Empuraan) ಸಿನಿಮಾ ಈಗ ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಸಿದ ಮಲಯಾಳಂ ಸಿನಿಮಾವಾಗಿದೆ. ವಿಶ್ವದಾದ್ಯಂತ ಬಾಕ್ಸ್‌ ಆಫೀಸ್‌ನಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಗಳಿಸಿದೆ.

ಮಾರ್ಚ್‌ 27ರಂದು ಸಿನಿಮಾ ಬಿಡುಗಡೆಯಾಗಿದ್ದು, ಗುಜರಾತ್ ಗಲಭೆ ಹೋಲುವ ಚಿತ್ರಣವಿದ್ದ ಕಾರಣ ಕೆಲವು ದೃಶ್ಯಗಳು ಕಾಲ್ಪನಿಕ ಎಂದು ಉಲ್ಲೇಖಿಸಿದೆ. ಆದರೆ ಬಲರಾಜ್ ಪಟೇಲ್ ಯಾನೆ ಬಾಬಾ ಬಜರಂಗಿ ಎಂಬ ಪಾತ್ರವು ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಗೆ ಹೋಲುವ ಕಾರಣದಿಂದಾಗಿ ಬಲಪಂಥೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ‘ಎಂಪುರಾನ್’ ಸಿನಿಮಾ ನಿರ್ಮಾಪಕರ ಮನೆ, ಕಚೇರಿ ಮೇಲೆ ಇಡಿ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ 2002ರ ಗುಜರಾತ್ ಗಲಭೆಯಲ್ಲಿ ಪ್ರಮುಖ ಅಪರಾಧಿ. ವಿಶೇಷವಾಗಿ 97 ಮುಸ್ಲಿಮರನ್ನು ಕೊಂದ ನರೋಡಾ ಪಾಟಿಯಾ ಹತ್ಯಾಕಾಂಡದ ನೇತೃತ್ವವನ್ನು ವಹಿಸಿದ್ದ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿದೆ.

ಈ ಸಿನಿಮಾದಲ್ಲಿರುವ ಕೆಲವು ದೃಶ್ಯಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ 17 ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಅದಾದ ಬಳಿಕ ರಾಜಕೀಯ ದ್ವೇಷ ಎಂಬಂತೆ ಜಾರಿ ನಿರ್ದೇಶನಾಲಯ (ಇಡಿ) ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲಂ ಅವರ ಕಚೇರಿ ಮೇಲೆ ದಾಳಿ ನಡೆಸಿದೆ. ಆದಾಯ ತೆರಿಗೆ ಇಲಾಖೆಯು ಮತ್ತೊಬ್ಬ ನಿರ್ಮಾಪಕ ಆಂಥೋನಿ ಪೆರುಂಬವೂರ್ ಮತ್ತು ನಟ-ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇವೆಲ್ಲವುದರ ನಡುವೆಯೂ ಪ್ರೇಕ್ಷಕರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ.

ಈಗ, ಈ ಎಲ್ಲಾ ವಿವಾದಗಳ ನಡುವೆಯೂ ನಿರ್ಮಾಪಕ ಆಂಥೋನಿ ಅವರು ಪೃಥ್ವಿರಾಜ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಇಬ್ಬರ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇಬ್ಬರು ನಗುಮುಖದಲ್ಲಿ ಮಾತನಾಡುತ್ತಿರುವ ಚಿತ್ರ ಮತ್ತು ಆಂಥೋನಿ ಅವರು ಪೃಥ್ವಿರಾಜ್ ಅವರ ಕೆನ್ನೆಗೆ ಮುತ್ತಿಕ್ಕುವ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ.

ಪೃಥ್ವಿರಾಜ್ ಅವರನ್ನು ಟ್ಯಾಗ್ ಮಾಡಿರುವ ಆಂಥೋನಿ ಅವರು, ಮಲಯಾಳಂನಲ್ಲಿ “ಎಲ್ಲವೂ ಓಕೆ ಅಲ್ವ ಅಣ್ಣಾ?” ಎಂದು ಬರೆದಿದ್ದಾರೆ. ಇದಕ್ಕೆ ಮಲಯಾಳಂನಲ್ಲೇ ಪ್ರತಿಕ್ರಿಯಿಸಿರುವ ಪೃಥ್ವಿರಾಜ್ “ಹೌದು, ನಿಜಕ್ಕೂ” ಎಂದು ನಗು ಮುಖದ, ಹೃದಯದ ಇಮೋಜಿಗಳನ್ನು ಪೋಸ್ಟ್ ಮಾಡಿದ್ದಾರೆ.

ಎಲ್ಲಾ ವಿವಾದಗಳ ನಡುವೆಯೂ ಉತ್ತಮ ಪ್ರದರ್ಶನ ಕಂಡಿರುವ ಎಲ್‌2 ಎಂಪುರಾನ್ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭಾನುವಾರದವರೆಗೆ 250 ಕೋಟಿ ರೂಪಾಯಿಗೂ ಅಧಿಕ ಸಂಗ್ರಹಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...