ಹಿರಿಯ ನಟಿ ಲೀಲಾವತಿ ನಿಧನ : ಕಂಬನಿ ಮಿಡಿದ ಅಭಿಮಾನಿಗಳು, ಚಿತ್ರರಂಗ

Date:

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಲೀಲಾವತಿ ಇಂದು ಸಂಜೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಲೀಲಾವತಿ ಅವರು ಪುತ್ರ ನಟ ವಿನೋದ್‌ ರಾಜ್‌ ಅವರನ್ನು ಅಗಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 1938ರಲ್ಲಿ ಜನಿಸಿದ ಲೀಲಾವತಿ ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಒಲವು ಆಸಕ್ತಿ ಹೊಂದಿ ತಮ್ಮ ವೃತ್ತಿಜೀವನ ಆರಂಭಿಸಿದರು. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Leela 6
ಡಾ. ರಾಜಕುಮಾರ್ ಅವರೊಂದಿಗೆ ‘ತೂಗುದೀಪ’ ಚಿತ್ರದಲ್ಲಿ

ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು. ಮದುವೆ ಮಾಡಿ ನೋಡು, ಸಂತ ತುಕಾರಾಂ, ತುಂಬಿದ ಕೊಡ, ಕಣ್ತೆರೆದು ನೋಡು, ರಾಣಿ ಹೊನ್ನಮ್ಮ, ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ, ಬಿಳಿ ಹೆಂಡ್ತಿ, ನಾ ನಿನ್ನ ಮರೆಯಲಾರೆ, ಕಳ್ಳ ಕುಳ್ಳ, ಡಾಕ್ಟರ್ ಕೃಷ್ಣ, ಕನ್ನಡದ ಕಂದ, ವೀರ ಕೇಸರಿ ಲೀಲಾವತಿ ನಟಿಸಿದ ಪ್ರಮುಖ ಚಿತ್ರಗಳು.

ಕನ್ನಡ ಚಿತ್ರ ದಿಗ್ಗಜರಾದ ಡಾ. ರಾಜ್‌ಕುಮಾರ್, ಕಲ್ಯಾಣ್ ಕುಮಾರ್, ಉದಯ್‌ ಕುಮಾರ್‌ ಅವರಲ್ಲದೆ, ತಮಿಳಿನ ಎಂಜಿಆರ್‌, ಶಿವಾಜಿ ಗಣೇಶನ್, ತೆಲುಗಿನ ಎನ್‌ಟಿಆರ್‌, ಎಎನ್‌ಆರ್‌ ಸೇರಿದಂತೆ ಭಾರತೀಯ ಚಿತ್ರರಂಗದ ಹಲವು ಜನಪ್ರಿಯ ನಟರೊಂದಿಗೆ ಲೀಲಾವತಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.

Leel a2
ಕಾರ್ಯಕ್ರಮವೊಂದರಲ್ಲಿ ಪುಟ್ಟಣ ಕಣಗಾಲ್ ಮತ್ತು ಭಾರತಿ ಅವರೊಂದಿಗೆ

ಲೀಲಾವತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಮತ್ತು ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

ಲೀಲಾವತಿ ಅವರ ಪಾರ್ಥೀವ ಶರೀರವನ್ನು ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಇಡಲಾಗಿದ್ದು ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಇರುತ್ತದೆ.

ಸಿನಿಮಾ ಪಯಣ

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ‘ನಾಗಕನ್ನಿಕ’ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

Leela 3
ನಟಿ ಭಾರತಿ ಅವರೊಂದಿಗೆ

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ‘ಮಾಂಗಲ್ಯ ಯೋಗ’. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ‘ರಣಧೀರ ಕಂಠೀರವ’.

ಈ ಸುದ್ದಿ ಓದಿದ್ದೀರಾ? ಮೇರಾ ನಾಮ್ ಜೋಕರ್’ ಖ್ಯಾತಿಯ ಬಾಲಿವುಡ್ ಹಿರಿಯ ನಟ ʻಜೂನಿಯರ್ ಮೆಹಮೂದ್ʼ ನಿಧನ

‘ರಾಣಿ ಹೊನ್ನಮ್ಮ’ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ… ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿಯೂ ಗುರುತಿಸಿಕೊಂಡಿದ್ದರು.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

leela 1
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ವಿನೋದ್‌ ರಾಜ್‌ ಜೊತೆ ಪ್ರಶಸ್ತಿ ಕಾರ್ಯಕ್ರಮವೊಂದರಲ್ಲಿ

ಮರೆಯಲಾರದ ಚಿತ್ರಗಳು

ನಾಗರ ‌ಹಾವು: ಮೇಸ್ಟ್ರು ಪಾತ್ರದ ಅಶ್ವಥ್ ಅವರ ಪತ್ನಿಯಾಗಿ, ವಿಷ್ಣುವರ್ಧನ್ ಸಾಕು ತಾಯಿಯ ಪಾತ್ರದ ಲೀಲಾವತಿ ಅವರ ಮನೋಜ್ಞ ಅಭಿನಯಕ್ಕೆ ಮನಸೋಲದವರು ಯಾರು ಇಲ್ಲ.

ನಾ ನಿನ್ನ ಮರೆಯಲಾರೆ: ರಾಜ್‌ಕುಮಾರ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಲೀಲಾವತಿಯವರು ನಾಯಕಿ ತಾಯಿಯಾಗಿ ನಟಿಸಿದ್ದರು. ತನ್ನ ಮಗಳು- ಲಕ್ಷ್ಮಿ ಪ್ರೇಮಿಸುವ ಹುಡುಗನನ್ನು ಅಳಿಯನನ್ನಾಗಿ ಅಂಗೀಕರಿಸದೆ ಆಕೆಗೆ ಬೇರೆ ಮದುವೆ ಮಾಡಿ ತನ್ನ ಹಠ ಸಾಧಿಸುವ ಪಾತ್ರವನ್ನು ಯಾರು ಮರೆಯಲು ಸಾಧ್ಯವಿಲ್ಲ.

ವೀರ ಕೇಸರಿ: ಚಿತ್ರದಲ್ಲಿನ ಪ್ರಣಯ ಪಾತ್ರ, ಭಕ್ತ ಕುಂಬಾರ ಚಿತ್ರದ ಗೋರನ ಪತ್ನಿಯ ಪಾತ್ರ ಹಾಗೂ ಡಾಕ್ಟರ್ ಕೃಷ್ಣ ಚಿತ್ರದಲ್ಲಿ ತಾಯಿಯ ಪಾತ್ರಗಳಲ್ಲಿನ ಲೀಲಾವತಿ ಅವರ ಅತ್ಯದ್ಭುತ ಅಭಿನಯ ಇಂದಿಗೂ ಅಚ್ಚಿಳಿಯದೆ ಉಳಿದಿದೆ.

ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ಯುನ್ನತ ಪ್ರಶಸ್ತಿ ಡಾ. ರಾಜ್‌ಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಯವರಿಗೆ ನೀಡಲಾಗಿತ್ತು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನಿಸಲಾಗಿತ್ತು.

Leela 4
ಪ್ರಶಸ್ತಿ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ದಿವಂಗತ ದಿ. ದೇವರಾಜು ಅರಸು

ಪ್ರಶಸ್ತಿ-ಪುರಸ್ಕಾರಗಳು

ಮದುವೆ ಮಾಡಿ ನೋಡು ಹಾಗೂ ಸಂತ ತುಕಾರಾಂ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.

ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು ಹಾಗೂ ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಜ್ಯ ಪ್ರಶಸ್ತಿಗಳು ಸಂದಿವೆ.

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:
ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

ಗೆಜ್ಜೆಪೂಜೆ – 1970
ಸಿಪಾಯಿ ರಾಮು -1971
ಡಾಕ್ಟರ್ ಕೃಷ್ಣ – 1973

2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006 – ಅತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

Leela 5
ಪ್ರಶಸ್ತಿ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ

 

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...