ಹಿನ್ನೆಲೆ ಗಾಯಕಿ ಪಿ ಸುಶೀಲಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Date:

ಪ್ರಸಿದ್ಧ ಚಲನಚಿತ್ರ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಪಿ ಸುಶೀಲಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿ ಸುಶೀಲಾ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? 2024ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಾಂತಾರ ಚಿತ್ರದ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯ ವೈದ್ಯರು ಸುಶೀಲಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರಿಗೆ ಸೂಕ್ತ ಔಷಧಿ ನೀಡಲಾಗಿದ್ದು ಇದೀಗ ಅವರ ಹೊಟ್ಟೆ ನೋವು ಕಡಿಮೆಯಾಗಿದೆ. ಅಲ್ಲದೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಪಿ. ಸುಶೀಲಾ ಅವರು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅಸಂಖ್ಯಾತ ಹಾಡುಗಳನ್ನು ಹಾಡಿದ್ದಾರೆ. ಸಂಗೀತ ಲೋಕದಲ್ಲಿ ಅವರು ತಮ್ಮದೇ ಆದ ವಿಶೇಷ ಸ್ಥಾನವನ್ನು ಗಳಿಸಿದ್ದಾರೆ. ವಿವಿಧ ಭಾಷೆಗಳಲ್ಲಿ ಹಾಡುಗಳನ್ನು ಹಾಡುವ ಮೂಲಕ ಪಿ. ಸುಶೀಲ ಅವರು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ , ಏಷಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...