ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

Date:

60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. ಈ ವಂಚನೆ ಪ್ರಕರಣವು ಸದ್ಯ ನಿಷ್ಕ್ರಿಯವಾಗಿರುವ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗೆ ಸಂಬಂಧಿಸಿದೆ.

ದಂಪತಿಗಳು ಪದೇ ಪದೇ ವಿದೇಶಿ ಪ್ರವಾಸ ಕೈಗೊಳ್ಳುತ್ತಿರುವುದರಿಂದ, ಮುಂಬೈ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ಘಟಕವು ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿಯೊಬ್ಬರಿಗೆ ಸುಮಾರು 60 ಕೋಟಿ ರೂ. ವಂಚಿಸಲಾಗಿದೆ ಎಂದು ನಟಿ ಶಿಲ್ಪಾ ಶೆಟ್ಟಿ ಹಾಗೂ ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಆಗಸ್ಟ್ 14ರಂದು ದಾಖಲಾಗಿದ್ದ ದೂರನ್ನು ಆಧರಿಸಿ ಈ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯಮ ವಿಸ್ತರಣೆಗೆಂದು ಮೀಸಲಾಗಿದ್ದ ನಿಧಿಯನ್ನು 2015ರಿಂದ 2023ರ ನಡುವೆ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ತಮ್ಮ ವೈಯಕ್ತಿಕ ಬಳಕೆಗಾಗಿ ಬಳಸಿಕೊಂಡಿದ್ದಾರೆ ಎಂದು ಮುಂಬೈ ಮೂಲದ ಉದ್ಯಮಿ ದೀಪಕ್ ಕೊಠಾರಿ ಎಂಬವರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಗ್​​ಬಾಸ್ 12ನೇ ಆವೃತ್ತಿಯ ಪ್ರಾರಂಭ ದಿನಾಂಕ ಘೋಷಿಸಿದ ನಟ ಸುದೀಪ್

ರಾಜೇಶ್ ಆರ್ಯ ಎಂಬವರು ನನ್ನನ್ನು ಶಿಲ್ಪಾ ಶೆಟ್ಟಿ ದಂಪತಿಗಳಿಗೆ ಪರಿಚಯಿಸಿದರು. ಈ ವೇಳೆ ಬೆಸ್ಟ್ ಡೀಲ್ ಟಿವಿಯ ಶೇ. 87.6ರಷ್ಟು ಶೇರುಗಳ ಮೇಲೆ ದಂಪತಿಗಳು ನಿಯಂತ್ರಣ ಹೊಂದಿದ್ದರು ಎಂದು ಅವರು ಹೇಳಿದ್ದಾರೆ.

ಆರಂಭದಲ್ಲಿ ಶೇ. 12ರ ಬಡ್ಡಿ ದರದಲ್ಲಿ 75 ಕೋಟಿ ರೂ. ಸಾಲ ಕೋರಿದ್ದ ದಂಪತಿಗಳು, ನಂತರ, ಮಾಸಿಕ ಮರುಪಾವತಿ ಹಾಗೂ ಅಸಲಿನ ಮರುಪಾವತಿಯ ಭರವಸೆಯೊಂದಿಗೆ ತೆರಿಗೆಯನ್ನು ಕಡಿತಗೊಳಿಸಲು ಆ ಮೊತ್ತವನ್ನು ಹೂಡಿಕೆಯಾಗಿ ವಿನಿಯೋಗಿಸುವಂತೆ ನನ್ನನ್ನು ಬಲವಂತಪಡಿಸಿದರು ಎಂದು ದೀಪಕ್ ಕೊಠಾರಿ ಆರೋಪಿಸಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಈ ಹೊಸ ದೂರಿನಿಂದ ದಂಪತಿಗಳ ಕಾನೂನು ಸಮಸ್ಯೆ ಮತ್ತಷ್ಟು ಜಟಿಲಗೊಂಡಿದೆ. ಚಿನ್ನದ ಯೋಜನೆಯಲ್ಲಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹೂಡಿಕೆದಾರರೊಬ್ಬರಿಗೆ ವಂಚಿಸಿದ್ದಾರೆ ಎಂದು ಈ ವರ್ಷದ ಆರಂಭದಲ್ಲಿ ರಿದ್ಧಿ ಸಿದ್ಧಿ ಬುಲಿಯನ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಪೃಥ್ವಿರಾಜ್ ಕೊಠಾರಿ ಎಂಬವರು ಆರೋಪಿಸಿದ್ದರು.

ಇದಕ್ಕೂ ಮುನ್ನ, ಅಶ್ಲೀಲ ವಿಡಿಯೊ ನಿರ್ಮಾಣ ಪ್ರಕರಣದಲ್ಲಿ 2021ರಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೀಡಾಗಿದ್ದ ರಾಜ್ ಕುಂದ್ರಾ, ನಂತರ, ಜಾಮೀನಿನ ಮೇಲೆ ಹೊರ ಬಂದಿದ್ದರು. ಇದಲ್ಲದೆ, ಬಿಟ್ ಕಾಯಿನ್ ವಂಚನೆಗೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಮತ್ತೊಂದು ಪ್ರತ್ಯೇಕ ಅಕ್ರಮ ಹಣ ವರ್ಗಾವಣೆ ತನಿಖೆಯನ್ನೂ ಎದುರಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...