ಹೊಸ ಅಧ್ಯಾಯ ಬರೆಯಲು ಚಿತ್ರರಂಗಕ್ಕೆ ಮರಳಿದ ಮಹಾಲಕ್ಷ್ಮಿ

Date:

ಸಿನಿಮಾ ರಂಗದಲ್ಲಿ ಮಿಂಚಿ ಹಿಂದೆ ಸರಿದಿದ್ದ ಹಲವಾರು ನಟ-ನಟಿಯರು ಮತ್ತೆ ಚಿತ್ರರಂಗಕ್ಕೆ ಪುನರಾಗಮನ ಮಾಡುತ್ತಿದ್ದಾರೆ. ಅವರೆಲ್ಲರೂ ಹೊಸ ಉತ್ಸಾಹಗಳೊಂದಿಗೆ ಸಿನಿರಂಗಕ್ಕೆ ಮರಳುತ್ತಾರೆ. ಅಂತಹವರಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಭಾರೀ ಸದ್ದು ಮಾಡಿದ್ದ ನಟಿ ಮಹಾಲಕ್ಷ್ಮಿ ಕೂಡ ಒಬ್ಬರು.

ಮಹಾಲಕ್ಷ್ಮಿ ಅವರು 1980ರಿಂದ 1991ರವರೆಗೆ ಸಿನಿರಂಗದಲ್ಲಿ ಮಿಂಚಿದ್ದರು. ಕನ್ನಡವೂ ಸೇರಿದಂತೆ ದಕ್ಷಿಣದ ನಾನಾ ಭಾಷೆಗಳ ಸಿನಿಮಾದಲ್ಲಿ ನಟಿಸಿ, ಸಿನಿಮಾ ಅಭಿಮಾನಿಗಳನ್ನು ರಂಜಿಸಿದ್ದರು. ಇದೀಗ, 30 ವರ್ಷಗಳ ಬಳಿಕ ಕನ್ನಡದ ‘ಟಿಆರ್‌ಪಿ ರಾಮ’ ಸಿನಿಮಾ ಮೂಲಕ ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದಾರೆ.

“ನೀವು ನಿಮ್ಮ ವೃತ್ತಿಯನ್ನು ಪ್ರೀತಿಸಿದಾಗ, ನೀವು ಹಲವು ವರ್ಷಗಳ ಅಂತರದ ಬಳಿಕ ಆ ವೃತ್ತಿಗೆ ಮರಳಿದಾಗಲೂ ನಿಮ್ಮಲ್ಲಿ ಅದೇ ಪ್ರೀತಿ ಮತ್ತು ಪ್ರಾಮಾಣಿಕತೆ ತುಂಬಿರುತ್ತದೆ” ಎನ್ನುವ ಮಹಾಲಕ್ಷ್ಮಿ ಅವರ ಟಿಆರ್‌ಪಿ ರಾಮ ಚಿತ್ರವು ಈ ವಾರ ಬಿಡುಗಡೆಯಾಗಲಿದೆ. “ಚಿತ್ರವನ್ನು ಪ್ರೇಕ್ಷಕರೊಂದಿಗೆ ವೀಕ್ಷಿಸಲು ನಾನು ಕಾತರದಿಂದ ಕಾಯುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಕುಟುಂಬಕ್ಕೆ ಆದ್ಯತೆ ನೀಡಲು ನಾನು ಚಿತ್ರರಂಗದಿಂದ ದೂರ ಸರಿದಿದ್ದೆ. ಈಗ ಚಲನಚಿತ್ರಗಳಿಗೆ ಮರಳುತ್ತಿದ್ದೇನೆ. ಟಿಆರ್‌ಪಿ ರಾಮ ಸಿನಿಮಾದ ನಿರ್ಮಾಪಕರು ಒಳ್ಳೆಯ ಪಾತ್ರಕ್ಕಾಗಿ ನನ್ನನ್ನು ಸಂಪರ್ಕಿಸಿದಾಗ, ನಾನು ಅದನ್ನು ಒಪ್ಪಿಕೊಂಡೆ. ನಟನೆ ಒಂದು ವೃತ್ತಿಯಾಗಿದೆ. ಅದರ ಭಾಗವಾಗಿರಲು ನಾನು ಯಾವಾಗಲೂ ಬಯಸುತ್ತೇನೆ” ಎಂದು ಅವರು ಹೇಳಿಕೊಂಡಿದ್ದಾರೆ.

trp rama

ಮೂರು ದಶಕಗಳ ಕಾಲ ಅವರು ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಇಂದಿನ ಪೀಳಿಗೆಯಲ್ಲಿ ಜನಪ್ರಿಯವಾಗಿರುವ ಚಲನಚಿತ್ರಗಳ ಬಗ್ಗೆ ಅವರು ಉತ್ತಮ ಗ್ರಹಿಕೆಯನ್ನು ಹೊಂದಿದ್ದಾರೆ. “ಆಗ (80ರ ದಶಕ), ನಾವು ಕೆಲವು ಉತ್ತಮ ಕಥಾಹಂದರವನ್ನು ಹುಡುಕುತ್ತಿದ್ದೆವು. ಸ್ತ್ರೀ-ಕೇಂದ್ರಿತ ಸಿನಿಮಾಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆಕಾಣುತ್ತಿದ್ದವು. ಇಂದಿಗೂ ಅದು ಮುಂದುವರೆದಿದೆ. ಆದಾಗ್ಯೂ, ಇಂದಿನ ಕಾಲಕ್ಕೆ ತಕ್ಕಂತೆ ಕತೆಗಳು ವಿಕಸನಗೊಂಡಿವೆ” ಎಂದು ಮಹಾಲಕ್ಷ್ಮಿ ಹೇಳುತ್ತಾರೆ.

“ಟಿಆರ್‌ಪಿ ರಾಮ ಸಿನಿಮಾದಲ್ಲಿ ನನಗೆ ಗಟ್ಟಿಗಿತ್ತಿ ತಾಯಿಯ ಪಾತ್ರವನ್ನು ನಿರ್ದೇಶಕರು ರೂಪಿಸಿದ್ದಾರೆ. ತಾಯಿ ತನ್ನ ಮಗನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾಳೆ. ಚಿತ್ರದಲ್ಲಿ ಕಾಣಿಸುವ ನೋಟದಿಂದಾಗಿ ಪ್ರೇಕ್ಷಕರು ನನ್ನ ಪಾತ್ರವನ್ನು ಋಣಾತ್ಮಕವೆಂದು ಗ್ರಹಿಸಬಹುದು. ಆದರೆ, ಪ್ರೇಕ್ಷಕರ ಆಸಕ್ತಿಯನ್ನು ಖಂಡಿತವಾಗಿ ಕೆರಳಿಸುವ ದೃಶ್ಯಗಳು ಹೆಚ್ಚಾಗಿವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...