ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ: ಸಿಎಂ ಸಿದ್ದರಾಮಯ್ಯ

Date:

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು.
ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಅವರು ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ರ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚಿಸಲಾಗಿದೆ ಎಂದರು.

ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ವೇದಿಕೆಯಲ್ಲೇ ಸೂಚನೆ ನೀಡಿದರು.

ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...