ಮಂಗಳೂರು | ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

Date:

ಮಂಗಳೂರಿನ ಕ್ಯಾಬ್‌ ಚಾಲಕರೊಬ್ಬರಿಗೆ ಟೆರರಿಸ್ಟ್‌ ಎಂದು ನಿಂದಿಸಿದ ಆರೋಪದ ಮೇಲೆ ಕೇರಳ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಬಂಧಿಸಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಸೆ.09ರಂದು ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಊಬರ್ ಬುಕ್ ಮಾಡಿದ್ದರು. ಊಬರ್ ಕ್ಯಾಬ್ ಚಾಲಕ ಶಫೀಕ್ ಕಾರು ಬುಕ್ ಆಗಿದೆ. ಚಾಲಕ ಶಫೀಕ್ ಅವರು ಕರೆ ಮಾಡಿ ಎಲ್ಲಿಗೆ ಬರಬೇಕು ಎಂದು ಕೇಳಿದ್ದಾರೆ. ನಟ ಮೊದಲು ಹಿಂದಿಯಲ್ಲಿ ಮಾತನಾಡಿದ್ದಾರೆ. ಶಫೀಕ್ ಕನ್ನಡದಲ್ಲಿ ಮಾತನಾಡಿದಾಗ, ಮಲಯಾಳಂನಲ್ಲಿ ಮಾತನಾಡುವಂತೆ ಜಯಕೃಷ್ಣನ್ ಸೂಚಿಸಿದ್ದರು.

ಆನಂತರ ಚಾಲಕನನ್ನು ನಿಂದಿಸಿ ಮುಸ್ಲಿಂ ಟೆರರಿಸ್ಟ್ ಎಂದೆಲ್ಲ ಹೇಳಿದ್ದಾರೆ. ಮುಸ್ಲಿಂ ತೀರ್ವವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡಿದ್ದಾರೆ. ಅವರಿಗೆ ಕಾರು ಬೇಕಾಗಿಲ್ಲ. ಕ್ಯಾಬ್​ನವರನ್ನು ಆಟ ಆಡಿಸುವುದಕ್ಕೆ ಈ ರೀತಿ ಮಾಡಿದ್ದಾರೆ ಎಂದು ರಫೀಕ್ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಡಿಕಲ್‌ ಮಾಫಿಯಾಗೆ ಅಮಾಯಕ ಮಕ್ಕಳು ಬಲಿ; ಸರ್ಕಾರಗಳೇ ಜವಾಬ್ದಾರಿ

ಅನೇಕ ಕ್ಯಾಬ್ ಚಾಲಕರಿಗೆ ಜಯಕೃಷ್ಣನ್ ಇದೇ ಮಾಡುತ್ತಿದ್ದಾರೆ ಎನ್ನಲಾಗಿದೆ. ಕ್ಯಾಬ್ ಬುಕ್ ಮಾಡಿದ ಬಳಿಕ ಕಾರು ಚಾಲಕ ಸಮೀಪದಲ್ಲಿ ಬರುತ್ತಿದ್ದಾಗ ರೈಡನ್ನು ಕ್ಯಾನ್ಸಲ್ ಮಾಡುತ್ತಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲೆಯ ಆನ್ಲೈನ್ ಟ್ಯಾಕ್ಸಿ ಚಾಲಕರ ಸಂಘ ಆರೋಪ ಮಾಡಿದೆ. ಈಗ ಜಯಕೃಷ್ಣನ್ ಅವರನ್ನು ಬಂಧಿಸಲಾಗಿದೆ.

ಜಯಕೃಷ್ಣನ್ ಅವರು 1994ರಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈಗ ಅವರು ಪೋಷಕ ಪಾತ್ರಗಳು ಹಾಗೂ ಕಿರುತೆರೆಗಳಲ್ಲಿ ನಟಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...