ಡ್ರಗ್ಸ್ ಬಳಕೆ ಆರೋಪ; ಮಲಯಾಳಂ ನಟ ಶೈನ್ ಟಾಮ್ ಚಾಕೊ ಬಂಧನ

Date:

ಡ್ರಗ್ಸ್ ಬಳಕೆ ಆರೋಪದಲ್ಲಿ ಕೇರಳದ ಕೊಚ್ಚಿ ನಗರ ಪೊಲೀಸರು ಶನಿವಾರ ಮಲಯಾಳಂ ಚಲನಚಿತ್ರ ನಟ ಶೈನ್ ಟಾಮ್ ಚಾಕೊ ಅವರನ್ನು ಬಂಧಿಸಿದ್ದಾರೆ. 2015ರ ಕೊಕೇನ್ ಪ್ರಕರಣದಲ್ಲಿ ಇತ್ತೀಚೆಗೆ ಚಾಕೊ ಖುಲಾಸೆಗೊಂಡಿದ್ದರು. ಚಾಕೊ ವಿರುದ್ಧದ ಎರಡನೇ ಡ್ರಗ್ಸ್‌ ಬಳಕೆ ಪ್ರಕರಣ ಇದಾಗಿದೆ.

ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 27 (ಮಾದಕ ವಸ್ತು ಸೇವನೆ) ಮತ್ತು 29 (ಮಾದಕ ವಸ್ತು ದುರುಪಯೋಗಕ್ಕೆ ಸಂಚು) ಅಡಿಯಲ್ಲಿ ಚಾಕೊ ಅವರನ್ನು ಬಂಧಿಸಲಾಗಿದೆ ಎಂದು ಕೊಚ್ಚಿ ನಗರ ಪೊಲೀಸರು ತಿಳಿಸಿದ್ದಾರೆ. ಚಾಕೊ ಸಂದೇಶಗಳು ಮತ್ತು ಡಿಜಿಟಲ್ ಪಾವತಿ ವಿವರಗಳನ್ನು ಪೊಲೀಸರು ಪರಿಶೀಲಿಸಿದಾಗ ಅವರು ಡ್ರಗ್ಸ್ ಮಾರಾಟಗಾರರೊಂದಿಗೆ ಸಂಪರ್ಕ ಹೊಂದಿರುವುದು ತಿಳಿದುಬಂದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ಬಂಧನ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ರಾತ್ರಿ ಕೊಚ್ಚಿಯಲ್ಲಿರುವ ಅವರ ಹೋಟೆಲ್‌ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ ಚಾಕೊ ತಪ್ಪಿಸಿಕೊಂಡಿದ್ದರು. ಹೋಟೆಲ್‌ನಲ್ಲಿನ ಸಿಸಿಟಿವಿಯಲ್ಲಿ ಚಾಕೊ ಹೋಟೆಲ್‌ನಿಂದ ಓಡಿಹೋಗುತ್ತಿರುವುದು ಕಂಡುಬಂದಿದೆ. ಅಲ್ಲಿಯೇ ಡ್ರಗ್ಸ್ ಮಾರಾಟಗಾರ ಇದ್ದ ಎಂದು ಶಂಕಿಸಲಾಗಿದೆ. ನಂತರ, ಪೊಲೀಸರು ಚಾಕೊಗೆ ನೋಟಿಸ್ ನೀಡಿದ್ದು, ಶನಿವಾರ ಪೊಲೀಸರ ಮುಂದೆ ಹಾಜರಾದ ನಟನ ಬಂಧನ ಮಾಡಲಾಗಿದೆ.

ಮಲಯಾಳಂ ನಟಿ ವಿನ್ಸಿ ಅಲೋಶಿಯಸ್, ಚಲನಚಿತ್ರ ನಟರ ಸಂಘವಾದ ಮಲಯಾಳಂ ಮೂವಿ ಆರ್ಟಿಸ್ಟ್ಸ್ ಅಸೋಸಿಯೇಷನ್ ​​(AMMA) ಗೆ ದೂರು ನೀಡಿದ ನಂತರ ಈ ಪ್ರಕರಣ ಮುನ್ನಲೆಗೆ ಬಂದಿದೆ. ಚಾಕೊ ಅವರು ಡ್ರಗ್ಸ್ ಸೇವಿಸಿ ಸಿನಿಮಾ ಚಿತ್ರೀಕರಣದ ವೇಳೆ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...