ನಟ, ಬರಹಗಾರ ಮತ್ತು ಚಲನಚಿತ್ರ ನಿರ್ಮಾಪಕರಾಗಿ ಮಲಯಾಳಂ ಸಿನಿಮಾ ರಂಗಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಶ್ರೀನಿವಾಸನ್ ಶನಿವಾರ ನಿಧನರಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಮಲಯಾಳಂ ಸಿನಿಮಾ ರಂಗದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶ್ರೀನಿವಾಸನ್ ಅವರನ್ನು ಡಯಾಲಿಸಿಸ್‌ಗೆ ಕರೆದೊಯ್ಯುತ್ತಿದ್ದಾಗ ಅಸ್ವಸ್ತರಾಗಿದ್ದು ನಿಧನರಾಗಿದ್ದಾರೆ. ಅವರ ಮೃತದೇಹವನ್ನು ಸದ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಅಂತ್ಯಕ್ರಿಯೆಯ ಬಗ್ಗೆ ಅಧಿಕ ಮಾಹಿತಿ ನೀಡಲಾಗಿಲ್ಲ.
ಇದನ್ನು ಓದಿದ್ದೀರಾ? ತಮಿಳು ನಟ ಮದನ್ ಬಾಬ್ ನಿಧನ
1956ರ ಏಪ್ರಿಲ್ 6ರಂದು ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ಬಳಿಯ ಪಟ್ಯಂನಲ್ಲಿ ಜನಿಸಿದ ಶ್ರೀನಿವಾಸನ್, ಮಲಯಾಳಂ ಸಿನಿಮಾ ರಂಗದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಸಾಮಾಜಿಕ ವಿಚಾರಗಳ್ನು ವಿಂಡಬನಾತ್ಮಕವಾಗಿ ಸಿನಿಮಾದಲ್ಲಿ ಮುನ್ನೆಲೆಗೆ ತರುವ ಕಾರ್ಯವನ್ನು ಮಾಡುತ್ತಾ ಬದಿದ್ದಾರೆ. 1976ರಲ್ಲಿ ಪಿ ಎ ಬ್ಯಾಕರ್ ಅವರ ಮಣಿಮುಳಕ್ಕಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, 1979ರಲ್ಲಿ ಸಂಘಗಾನಂ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದರು.
ಸುಮಾರು ಐದು ದಶಕಗಳ ವೃತ್ತಿಜೀವನದಲ್ಲಿ, ಶ್ರೀನಿವಾಸನ್ 225ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಸಿನಿಮಾಕ್ಕೆ ಉತ್ತಮ ಚಿತ್ರಕಥೆಗಳನ್ನು ಬರೆದಿದ್ದಾರೆ. ನಾಡೋಡಿಕ್ಕಾಟ್ಟು, ವರವೇಲ್ಪು, ತಾಳಯಾನ ಮಂತ್ರಂ, ಸಂದೇಶಂ, ಮಿಧುನಂ, ಒರುವುದ ಮರವದಯನ್, ಒರುವುದ್ಯಾನ ಮರವದಯನ್, ಮೊದಲಾದವುಗಳು ಅವರ ಬರವಣಿಗೆಗಳು.
ವಡಕ್ಕುನೋಕ್ಕಿಯಂತ್ರಂ ಮತ್ತು ಚಿಂತವಿಷ್ಟಾಯ ಶ್ಯಾಮಲಾದಲ್ಲಿ ಚಿತ್ರಕಥೆ ಮತ್ತು ನಿರ್ದೇಶನ ಮಾಡಿದರು. ವಡಕ್ಕುನೋಕ್ಕಿಯಂತ್ರಂ ಅತ್ಯುತ್ತಮ ಚಲನಚಿತ್ರಕ್ಕಾಗಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡರೆ, ಚಿಂತವಿಷ್ಟಾಯ ಶ್ಯಾಮಲಾ ಇತರ ಸಾಮಾಜಿಕ ಸಮಸ್ಯೆಗಳ ಮೇಲಿನ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗಳಿಸಿದೆ. ಜತೆಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಜನಪ್ರಿಯ ಚಲನಚಿತ್ರವೆಂದು ಗುರುತಿಸಲ್ಪಟ್ಟಿದೆ.
ಶ್ರೀನಿವಾಸನ್ ತಮ್ಮ ವೃತ್ತಿಜೀವನದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಎರಡು ಫಿಲ್ಮ್‌ಫೇರ್ ಪ್ರಶಸ್ತಿಗಳು, ದಕ್ಷಿಣ ಮತ್ತು ಆರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಗೌರವಗಳನ್ನು ಪಡೆದಿದ್ದಾರೆ. ಸಂದೇಶಂ ಮತ್ತು ಮಜಯೇತುಮ್ ಮುಂಪೆ ಚಿತ್ರಗಳಿಗೆ ಅವರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿದ್ದಾರೆ.





