ಖ್ಯಾತ ಮಲಯಾಳಂ ಚಲನಚಿತ್ರ ನಿರ್ಮಾಪಕ ಶಫಿ ನಿಧನ

Date:

ಕಲ್ಯಾಣರಾಮನ್ ಮತ್ತು ಪುಲಿವಲ್ ಕಲ್ಯಾಣಂನಂತಹ ಸಿನಿಮಾಗಳಿಗೆ ಹೆಸರುವಾಸಿಯಾದ ಖ್ಯಾತ ಮಲಯಾಳಂ ಚಲನಚಿತ್ರ ನಿರ್ಮಾಪಕ ಶಫಿ ಭಾನುವಾರ ಮುಂಜಾನೆ ನಿಧನರಾದರು.

56 ವರ್ಷ ಪ್ರಾಯದ ಶಫಿ ಜನವರಿ 16ರಂದು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅವರಿಗೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಫಿ ಮಧ್ಯ ರಾತ್ರಿ 12:25ಕ್ಕೆ ನಿಧನರಾದರು ಎಂದು ವರದಿಯಾಗಿದೆ.

ಶಫಿ ನಿಧನದ ಬಗ್ಗೆ ನಟ ವಿಷ್ಣು ಉನ್ನಿಕೃಷ್ಣನ್ ಫೇಸ್‌ಬುಕ್‌ನಲ್ಲಿ ಖಚಿತಪಡಿಸಿದ್ದಾರೆ. “ಶಫಿ ಸರ್ ಅವರು ನಗು ಮತ್ತು ಮರೆಯಲಾಗದ ಕಥೆಗಳನ್ನು ಬಿಟ್ಟು ಹೋಗಿದ್ದಾರೆ. ಅವರಿಗೆ ಗೌರವಗಳು:” ಎಂದು ಉನ್ನಿಕೃಷ್ಣನ್ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಖ್ಯಾತ ಪರಮಾಣು ವಿಜ್ಞಾನಿ ಡಾ ಆರ್ ಚಿದಂಬರಂ ನಿಧನ

ಶಫಿ ಹುಟ್ಟಿನ ಹೆಸರು ಎಂ.ಎಚ್. ​​ರಶೀದ್. ಮಲಯಾಳಂ ಚಲನಚಿತ್ರೋದ್ಯಮದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿ ಬಳಿಕ ಶಫಿ ಎಂದು ಹೆಸರು ಬದಲಾಯಿಸಿಕೊಂಡರು. ಶಫಿ, ಪ್ರಸಿದ್ಧ ಚಿತ್ರಕಥೆಗಾರ ರಫಿ ಅವರ ಕಿರಿಯ ಸಹೋದರ ಆಗಿದ್ದಾರೆ. ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ದಿವಂಗತ ಸಿದ್ದಿಕ್ ಅವರ ಸೋದರಳಿಯ ಆಗಿದ್ದಾರೆ.

ಶಫಿ ಅವರ ಪಾರ್ಥಿವ ಶರೀರವನ್ನು ಕೊಚ್ಚಿಯ ಎಡಪ್ಪಳ್ಳಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಕಲೂರಿನ ಕೊಚ್ಚಿನ್ ಸರ್ವಿಸ್ ಕೋ-ಆಪರೇಟಿವ್ ಬ್ಯಾಂಕ್ ಹಾಲ್‌ನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಂತ್ಯಕ್ರಿಯೆಯನ್ನು ಸಂಜೆ 4 ಗಂಟೆಗೆ ಕಲೂರು ಮುಸ್ಲಿಂ ಜುಮಾ ಮಸೀದಿಯಲ್ಲಿ ನಡೆಸಲಾಗುತ್ತದೆ.

ಇದನ್ನು ಓದಿದ್ದೀರಾ? ಕೋಲಾರ | ದಲಿತ ಹೋರಾಟಗಾರ ಕೊಮ್ಮಣ್ಣ ಎಂ ನಿಧನ

1995ರಲ್ಲಿ ರಫಿ-ಮೆಕಾರ್ಟಿನ್ ಮತ್ತು ನಿರ್ದೇಶಕ ರಾಜಸೇನನ್ ಅವರಿಗೆ ಆದ್ಯತೇ ಕಣ್ಮಣಿ ಚಿತ್ರದಲ್ಲಿ ಸಹಾಯ ಮಾಡುವ ಮೂಲಕ ಶಫಿ ಮಲಯಾಳಂ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಂತರ ಅವರು 2001ರಲ್ಲಿ ಜಯರಾಮ್, ಲಾಲ್ ಮತ್ತು ಸಂಯುಕ್ತ ವರ್ಮಾ ಅವರ ಒನ್ ಮ್ಯಾನ್ ಶೋ ಮೂಲಕ ನಿರ್ದೇಶನ ಆರಂಭಿಸಿದರು. ಅದಕ್ಕೂ ಮುನ್ನ ಐದು ಇತರ ಮಲಯಾಳಂ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಕಲ್ಯಾಣರಾಮನ್ (2002), ಮೇರಿಕ್ಕುಂಡೋರು ಕುಂಜಾಡು (2010), ಟು ಕಂಟ್ರೀಸ್ (2015), ಮೇರಿಕ್ಕುಂಡೋರು ಕುಂಜಾಡು (2010), ತೊಮ್ಮನುಮ್ ಮಕ್ಕಳುಮ್ (2005), ಪುಲಿವಲ್ ಕಲ್ಯಾಣಂ (2003), ಮಾಯಾವಿ (2007), ಚಟ್ಟಂಬಿನಾಡು (2009) ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...