ಲೋಕಸಭೆಯಲ್ಲಿ ಬೆಂಬಲ ಬೇಕಿದ್ದರೆ ಬಂಗಾಳದಲ್ಲಿ ಸಿಪಿಐ ಸಹವಾಹ ಬಿಡಬೇಕು : ಕೈ ನಾಯಕರಿಗೆ ದೀದಿ ಸ್ಪಷ್ಟ ಸಂದೇಶ

Date:

ಬಿಜೆಪಿ ಸೋಲಿಸಲು ಒಗ್ಗೂಡಿದ ವಿಪಕ್ಷಗಳು

ಜೂನ್‌ 23ರಂದು ನಡೆಯಲಿದೆ ಮಹತ್ವದ ಸಭೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಬೆಂಬಲ ಬೇಕೆಂದರೆ ಕೈ ನಾಯಕರು ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಪಕ್ಷದವರ ಸಹವಾಸದಿಂದ ದೂರ ಇರಬೇಕು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಷರತ್ತು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರ ಲೋಕಸಭಾ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸುತ್ತಿವೆ. ಬಿಜೆಪಿಯನ್ನು ಸೋಲಿಸಲು ರಣತಂತ್ರ ಹೆಣೆದಿರುವ ವಿಪಕ್ಷಗಳು ಇದೇ ಜೂನ್‌ 23ರಂದು ಬಿಹಾರದ ಪಾಟ್ನಾದಲ್ಲಿ ಬೃಹತ್‌ ಸಭೆಯನ್ನು ನಡೆಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ರಾಹುಲ್‌ ಗಾಂಧಿ, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ ಸೇರಿದಂತೆ ದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮಹತ್ವದ ಸಭೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಂಧಾನದ ವಿಚಾರ ಮಾತನಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಜೊತೆ ಕೈ ಜೋಡಿಸದಂತೆ ಕಾಂಗ್ರೆಸ್‌ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಶನಿವಾರ ಪಶ್ಚಿಮ ಬಂಗಾಳದ ಕಕ್‌ದ್ವೀಪ್‌ನಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, “ಕಾಂಗ್ರೆಸ್‌ ಆಡಳಿತ ನಡೆಸಿರುವ ಎಲ್ಲ ರಾಜ್ಯಗಳಲ್ಲಿ ಸಿಪಿಐ(ಎಂ) ಬಹುದೊಡ್ಡ ಮಿತ್ರ ಪಕ್ಷದಂತೆಯೇ ವರ್ತಿಸಿದೆ. ಕೇವಲ ಕಾಂಗ್ರೆಸ್‌ಗೆ ಮಾತ್ರವಲ್ಲದೆ ಬಿಜೆಪಿಗೂ ಕೂಡ ಸಿಪಿಐ(ಎಂ) ಮಿತ್ರಪಕ್ಷವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರಿಗೆ ನಮ್ಮ (ಟಿಎಂಸಿ) ಬೆಂಬಲದ ಅಗತ್ಯವಿದ್ದರೆ ಖಂಡಿತ ನಿಮ್ಮನ್ನು (ಕಾಂಗ್ರೆಸ್‌) ಬೆಂಬಲಿಸುತ್ತೇವೆ. ಆದರೆ, ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ನೀವು (ಕಾಂಗ್ರೆಸ್‌), ಸಿಪಿಎಂ(ಐ) ಜೊತೆ ಒಳ ಒಪ್ಪಂದ ಮಾಡಿಕೊಂಡು ನಮ್ಮಿಂದ ಮಾತ್ರ ನೆರವನ್ನು ನಿರೀಕ್ಷಿಸಬೇಡಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಂದು ಕರೆಗೆ ಉಕ್ರೇನ್‌ ಯುದ್ಧ ನಿಲ್ಲಿಸಿದೆವೆಂದ ಜನ ಮಣಿಪುರ ಹೊತ್ತಿ ಉರಿಯಲು ಬಿಟ್ಟಿದ್ದೇಕೆ: ನಟ ಕಿಶೋರ್‌ ಪ್ರಶ್ನೆ

ಮಮತಾ ಬ್ಯಾನರ್ಜಿ, ಸಿಪಿಐ(ಎಂ) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದು ಇದು ಮೊದಲೇನಲ್ಲ. ಈ ಹಿಂದೆ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವಿಪಕ್ಷಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದ ದೀದಿ, “ಟಿಎಂಸಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್‌, ಸಿಪಿಐ(ಎಂ) ಮತ್ತು ಬಿಜೆಪಿ ಮೂರು ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿವೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...