ಮಲಯಾಳಂ ಚಿತ್ರರಂಗದಲ್ಲಿ ಯಾವುದೇ ಶಕ್ತಿ ಕೇಂದ್ರವಿಲ್ಲ: ಮೌನ ಮುರಿದ ನಟ ಮಮ್ಮುಟ್ಟಿ

Date:

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಉಂಟು ಮಾಡಿರುವ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಖ್ಯಾತ ನಟ ಮಮ್ಮುಟ್ಟಿ ಕೊನೆಗೂ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣದ ಬಗ್ಗೆ ಭಾನುವಾರ ಸಾಮಾಜಿಕ ಜಾಲತಾಣವಾದ ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ಅವರು, ಮಲಯಾಳಂ ಸಿನಿಮಾ ರಂಗದಲ್ಲಿ ಯಾವುದೇ ‘ಶಕ್ತಿ ಕೇಂದ್ರ​’ ಇಲ್ಲ. ಚಿತ್ರೋದ್ಯಮದಲ್ಲಿ ಕೇಳಿಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಯಬೇಕಿದೆ ಎಂದ ಅವರು, ನ್ಯಾಯಮೂರ್ತಿ ಹೇಮಾ ಅವರ ಸಮಿತಿ ನೀಡಿರುವ ಶಿಫಾರಸುಗಳನ್ನು ಸ್ವಾಗತಿಸಿದರು.

ಮಲಯಾಳಂ ಸಿನಿಮಾ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷರಾಗಿದ್ದ ಮೋಹನ್​​ಲಾಲ್​ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶನಿವಾರ ಪ್ರಕರಣದ ಬಗ್ಗೆ ಮಾಧ್ಯಮಗೋಷ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ, ಮಮ್ಮುಟ್ಟಿ ಅವರು ಹೇಳಿಕೆ ನೀಡಿದ್ದು ಮಹತ್ವ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲಯಾಳಂ ಸಿನಿಮಾ ರಂಗದಲ್ಲಿ ಯಾವುದೇ ಪ್ರಾಬಲ್ಯ ಇಲ್ಲ ಎಂಬುದನ್ನು ನಿರಾಕರಿಸಿದ ಮಮ್ಮುಟ್ಟಿ ಅವರು, ಚಿತ್ರೋದ್ಯಮದ ಮೇಲೆ ಕೇಳಿಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ, ನಟಿಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳ ಬಗ್ಗೆ ನ್ಯಾಯಮೂರ್ತಿ ಹೇಮಾ ಅವರ ಸಮಿತಿಯ ಮಾಡಿದ ಶಿಫಾರಸುಗಳನ್ನು ಒಪ್ಪಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಂಗನಾ ರಣಾವತ್ | ಬಿಜೆಪಿ ಪಾಲಿಗೆ ಸೆರಗಿನ ಕೆಂಡವೋ, ಫೈರ್‌ ಬ್ರ್ಯಾಂಡೋ?

ಇದರ ಜೊತೆಗೆ, ಆರೋಪಗಳ ಕುರಿತು ನಡೆಯುತ್ತಿರುವ ಪೊಲೀಸ್ ತನಿಖೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಟಿಯರ ಮೇಲೆ ದೌರ್ಜನ್ಯ ನಡೆದಿದ್ದರೆ, ಈ ಬಗ್ಗೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಮಾಜದ ಪ್ರತಿಬಿಂಬವಾಗಿರುವ ಸಿನಿಮಾದ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳ ಬಗ್ಗೆ ಪರಿಶೀಲನೆಯಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ಸಿಗಬೇಕಾದಲ್ಲಿ ಎಲ್ಲ ರೀತಿಯಲ್ಲಿ ‘ಹೊಂದಾಣಿಕೆ’ ಮಾಡಿಕೊಳ್ಳಬೇಕಿದೆ ಎಂದು ಹಲವು ನಟಿಯರು ಆರೋಪಿಸಿದ್ದಾರೆ. ಖ್ಯಾತ ನಿರ್ದೇಶಕರು, ನಿರ್ಮಾಪಕರು ಮತ್ತು ನಟರ ಮೇಲೆ ಈ ದೂರು ಕೇಳಿಬಂದಿದೆ. ಮಲಯಾಳಂ ಸಿನಿಮಾ ರಂಗವನ್ನು 10 ರಿಂದ 15 ನಿರ್ಮಾಪಕರು, ನಿರ್ದೇಶಕರು ಮತ್ತು ನಟರು ನಿಯಂತ್ರಿಸುತ್ತಿದ್ದಾರೆ. ಅವರ ಆಣತಿಯಂತೆ ಸಿನಿಮಾ ರಂಗ ನಡೆಯುತ್ತದೆ ಎಂದು ದೂರಲಾಗಿದೆ.

ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ನ್ಯಾಯಮೂರ್ತಿ ಹೇಮಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸಮಿತಿಯ ವರದಿಯಲ್ಲಿ ಕೆಲ ಆಘಾತಕಾರಿ ಅಂಶಗಳು ಸೋರಿಕೆಯಾಗಿದ್ದವು. ಬಳಿಕ ಸರ್ಕಾರವೇ ಸಾಕ್ಷಿಗಳು, ನಟಿಯರ ಹೇಳಿಕೆಗಳುಳ್ಳ 235 ಪುಟಗಳ ವರದಿಯನ್ನು ಬಿಡುಗಡೆ ಮಾಡಿದೆ.

ಇದರ ಬಳಿಕ ಹಲವಾರು ಮಹಿಳಾ ಕಲಾವಿದರು ತಾವು ಎದುರಿಸಿದ ಕಿರುಕುಳದ ಬಗ್ಗೆ ಮಾತನಾಡಿದ್ದಾರೆ. ಆರೋಪ ಹೊತ್ತಿರುವ ನಿರ್ದೇಶಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿದ್ದ ರಂಜಿತ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಟ ಸಿದ್ದಿಕ್ ರಾಜೀನಾಮೆ ಸಲ್ಲಿಸಿದ್ದರು. ಜೊತೆಗೆ ಮಲಯಾಳಂ ಚಲನಚಿತ್ರ ನಟರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್​ಲಾಲ್​ ಅವರು ಕೂಡ ರಾಜೀನಾಮೆ ಕೊಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...