200 ಕೋಟಿ ಕ್ಲಬ್‌ಗೆ ಲಗ್ಗೆ ಇಟ್ಟ ʼಪೊನ್ನಿಯನ್‌ ಸೆಲ್ವನ್‌-2ʼ

Date:

₹500 ಕೋಟಿಗೂ ಅಧಿಕ ಮೊತ್ತ ಕಲೆ ಹಾಕಿದ್ದ ʼಪೊನ್ನಿಯಿನ್‌ ಸೆಲ್ವನ್‌-1ʼ

4 ದಿನಕ್ಕೆ ₹200 ಕೋಟಿಗೂ ಅಧಿಕ ಮೊತ್ತ ಗಳಿಸಿರುವ ʼಪೊನ್ನಿಯನ್‌ ಸೆಲ್ವನ್‌-2ʼ

ತಮಿಳಿನ ಹಿರಿಯ ನಿರ್ದೇಶಕ ಮಣಿರತ್ನಂ ನಿರ್ದೇಶನದ ‘ಪೊನ್ನಿಯನ್‌ ಸೆಲ್ವನ್‌-2’ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಜಗತ್ತಿನಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ತೆರೆಕಂಡ ನಾಲ್ಕು ದಿನಕ್ಕೆ ಬರೋಬ್ಬರಿ ₹200 ಕೋಟಿಗಳನ್ನು ಕಲೆ ಹಾಕುವ ಮೂಲಕ ದಾಖಲೆ ಬರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆರೆಕಂಡ ಮೊದಲ ದಿನವೇ ಜಗತ್ತಿನಾದ್ಯಂತ ₹34 ಕೋಟಿಗಳನ್ನು ಕಲೆ ಹಾಕಿದ್ದ ‘ಪೊನ್ನಿಯನ್‌ ಸೆಲ್ವನ್‌-2’, ಎರಡನೇ ದಿನದ ₹70 ಕೋಟಿಗೂ ಅಧಿಕ ಮೊತ್ತವನ್ನು ಕಲೆ ಹಾಕಿತ್ತು. ಮೂರನೇ ದಿನ ಚಿತ್ರ ₹80 ಕೋಟಿಗೂ ಅಧಿಕ ಮೊತ್ತವನ್ನು ಕಲೆ ಹಾಕಿದ್ದು, ನಾಲ್ಕನೇ ದಿನ ₹24 ಕೋಟಿಗಳನ್ನು ಕಲೆ ಹಾಕುವ ಮೂಲಕ 200 ಕೋಟಿ ಕ್ಲಬ್‌ ಸೇರಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಚೋಳ ಸಾಮ್ರಾಜ್ಯದ ಗತ ವೈಭವದ ಕುರಿತು ತಮಿಳಿನ ಖ್ಯಾತ ಸಾಹಿತಿ ಕಲ್ಕಿ ಕೃಷ್ಣಮೂರ್ತಿ ಅವರು ರಚಿಸಿರುವ ಜನಪ್ರಿಯ ʼಪೊನ್ನಿಯಿನ್‌ ಸೆಲ್ವನ್‌ʼ ಕಾದಂಬರಿಯನ್ನು ಆಧಾರಿಸಿ ಮಣಿರತ್ನಂ ಎರಡು ಭಾಗಗಳಲ್ಲಿ ʼಪೊನ್ನಿಯನ್‌ ಸೆಲ್ವನ್‌ʼ ಸಿನಿಮಾ ತಯಾರಿಸಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ʼಪೊನ್ನಿಯಿನ್‌ ಸೆಲ್ವನ್‌-1ʼ ಭರ್ಜರಿ ಯಶಸ್ಸು ಗಳಿಸಿತ್ತು. ಗಲ್ಲಾ ಪೆಟ್ಟಿಗೆಯಲ್ಲಿ ₹500 ಕೋಟಿಗೂ ಅಧಿಕ ಮೊತ್ತವನ್ನು ಕಲೆ ಹಾಕಿತ್ತು. ಸದ್ಯ ಪ್ರದರ್ಶನ ಕಾಣುತ್ತಿರುವ ‘ಪೊನ್ನಿಯನ್‌ ಸೆಲ್ವನ್‌-2’ ಸಿನಿಮಾ ಮೊದಲ ಭಾಗದ ಗಳಿಕೆಯ ದಾಖಲೆಯನ್ನು ಹಿಂದಿಕ್ಕಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ತಮಿಳಿನ ಸ್ಟಾರ್‌ ನಟ ಚಿಯಾನ್‌ ವಿಕ್ರಮ್‌ ಆದಿತ್ಯ ಕರಿಕಾಳನ್‌ ಪಾತ್ರದಲ್ಲಿ ನಟಿಸಿದ್ದು, ಕಾರ್ತಿ, ಜಯಂ ರವಿ, ಐಶ್ವರ್ಯಾ ರೈ, ತ್ರಿಷಾ ಕೃಷ್ಣನ್‌, ಪ್ರಕಾಶ್‌ ರಾಜ್‌, ಕಿಶೋರ್‌ ಕುಮಾರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದು, ʼಲೈಕಾ ಪ್ರೊಡಕ್ಷನ್ಸ್‌ʼ ಬಂಡವಾಳ ಹೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...