ದೀಪಿಕಾ ಪಡುಕೋಣೆ ಜೆಎನ್‌ಯು ಭೇಟಿಯಿಂದ ನನ್ನ ಸಿನಿಮಾ ಸೋತಿತು ಎಂದ ನಿರ್ದೇಶಕಿ

Date:

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ 2020 ರ ಜನವರಿಯಲ್ಲಿ ಜೆಎನ್‌ಯುಗೆ ಭೇಟಿ ನೀಡಿದ ಕಾರಣದಿಂದ ನನ್ನ ‘ಛಪಾಕ್’ ಸಿನಿಮಾ ಸೋತಿತು ಎಂದು ಚಿತ್ರದ ನಿರ್ದೇಶಕಿ ಮೇಘನಾ ಗುಲ್ಝಾರ್ ತಿಳಿಸಿದ್ದಾರೆ.

ಮಾಧ್ಯಮವೊಂದರ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕಿ ಮೇಘನಾ ಗುಲ್ಝಾರ್ ಅವರು,” ದೀಪಿಕಾ ಪಡುಕೋಣೆ ಚಿತ್ರ ಬಿಡುಗಡೆಯಾದ 2020 ರ ಜನವರಿಯಲ್ಲಿ ಜೆಎನ್‌ಯುಗೆ ಭೇಟಿ ನೀಡಿದರು. ಅವರ ಭೇಟಿ ಭಾರಿ ವಿವಾದಕ್ಕೀಡಾಯಿತು. ಆಗ ಬಿಡುಗಡೆಯಾಗಿದ್ದ ‘ಛಪಾಕ್’ ಚಿತ್ರವನ್ನು ಬಹಿಷ್ಕರಿಸುವ ಬಗ್ಗೆ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಘೋಷಣೆಗಳು ಶುರುವಾದವು” ಎಂದರು.

‘ಛಪಾಕ್’ ಸಿನಿಮಾವು ಆಸಿಡ್ ದಾಳಿಯಿಂದ ಬದುಕುಳಿದವರ ಕುರಿತಾದ ಕಥೆಯನ್ನು ಒಳಗೊಂಡಿತ್ತು. ಆದರೆ ಸಿನಿಮಾ ಹಳಿತಪ್ಪಿದ್ದಕ್ಕೆ ಕಾರಣ ಏನೆಂಬುದಕ್ಕೆ ನನಗೆ ಖಾತ್ರಿಯಿದೆ. ದೀಪಿಕಾ ಜೆಎನ್‌ಯು ಭೇಟಿ ಖಂಡಿತವಾಗಿಯು ಚಿತ್ರದ ಮೇಲೆ ಧಕ್ಕೆ ಮಾಡಿದೆ. ಸಿನಿಮಾ ವಿರುದ್ಧ ತಪ್ಪು ಸಂದೇಶ ಹೋಯಿತು ಎಂಬುದನ್ನು ನಾನು ಅಲ್ಲಗಳೆಯುವಂತಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

2020 ರ ಆರಂಭದಲ್ಲಿ ಜೆಎನ್‌ಯುನಲ್ಲಿ ಮುಸುಕುಧಾರಿ ದುಷ್ಕರ್ಮಿಗಳ ಗುಂಪುಗಳು ಕ್ಯಾಂಪಸ್‌ಗೆ ನುಗ್ಗಿ ಸಾಬರಮತಿ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಆಯುಧಗಳಿಂದ ಹಲ್ಲೆ ನಡೆಸಿದ್ದವು. ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ‘ದೇಶವಿರೋಧಿ ಘೋಷಣೆ’ಗಳನ್ನು ಎತ್ತಿದ್ದಾರೆ ಎಂಬ ಆರೋಪದೊಂದಿಗೆ ವಿವಾದವು ದೊಡ್ಡ ಸ್ವರೂಪವನ್ನು ಪಡೆದುಕೊಂಡಿತು.

ಜೆಎನ್‌ಯುಗೆ ತೆರಳುವ ಮೊದಲು, ಮಾಧ್ಯಮದೊಂದಿಗೆ ಮಾತನಾಡಿದ್ದ ದೀಪಿಕಾ ಪಡುಕೋಣೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರದ ಬಗ್ಗೆ ಮಾತನಾಡಿದ್ದರು. “ನಾವು ನಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಹೆದರುವುದಿಲ್ಲ. ನಾವು ದೇಶ ಮತ್ತು ಅದರ ಭವಿಷ್ಯದ ಬಗ್ಗೆ ಯೋಚಿಸುತ್ತಿದ್ದೇವೆ ಎಂದು ನಾನು ಭಾವಿಸುತ್ತೇನೆ. ನಮ್ಮ ದೃಷ್ಟಿಕೋನ ಏನೇ ಇರಲಿ, ವಿದ್ಯಾರ್ಥಿಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದರು.

‘ಛಪಾಕ್’ ಆಸಿಡ್ ದಾಳಿಯಿಂದ ಬದುಕುಳಿದವರ ಕಥೆಯನ್ನು ಆಧರಿಸಿದೆ. ಚಿತ್ರದಲ್ಲಿ ದೀಪಿಕಾ ನಟಿಸಿದ್ದರು. ಅಲ್ಲದೆ ಇದನ್ನು ಸ್ವತಃ ದೀಪಿಕಾ ಸಹ-ನಿರ್ಮಾಣ ಮಾಡಿದ್ದಾರೆ. ಸಿನಿಮಾವು ಹೆಚ್ಚು ಸಕಾರಾತ್ಮಕ ವಿಮರ್ಶೆಗಳನ್ನು ಪಡೆದುಕೊಂಡರೂ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಯಿತು.

ಈ ವರ್ಷ, ದೀಪಿಕಾ-ಶಾರುಖ್ ನಟನೆಯ ಸೂಪರ್ ಹಿಟ್‌ ಚಿತ್ರಗಳಾದ ‘ಪಠಾನ್’ ಮತ್ತು ‘ಜವಾನ್’ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ₹ 1000 ಕೋಟಿಗಿಂತ ಹೆಚ್ಚು ಗಳಿಸಿದೆ. ಹೃತಿಕ್ ರೋಷನ್ ಜೊತೆ ‘ಫೈಟರ್’ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಮೇಘನಾ ಗುಲ್ಝಾರ್ ಅವರ ಮುಂದಿನ ಚಿತ್ರ ‘ಸ್ಯಾಮ್ ಬಹದ್ದೂರ್’ ಇದೇ ಶುಕ್ರವಾರ, ಡಿಸೆಂಬರ್ 1 ರಂದು ಬಿಡುಗಡೆಯಾಗಿದೆ. ಇದರಲ್ಲಿ ವಿಕ್ಕಿ ಕೌಶಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...