ತಮಿಳುನಾಡು ಸಿಎಂ ಸ್ಟಾಲಿನ್, ಸಿನಿಮಾ ತಾರೆಯರಾದ ಅಜಿತ್, ಅರವಿಂದ್ ಸ್ವಾಮಿ, ಖುಷ್ಬು ನಿವಾಸಕ್ಕೆ ಬಾಂಬ್ ಬೆದರಿಕೆ

Date:

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಖ್ಯಾತ ನಟರಾದ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಹಾಗೂ ನಟಿ-ರಾಜಕಾರಣಿ ಖುಷ್ಬು ಅವರ ನಿವಾಸಗಳಿಗೆ ಭಾನುವಾರ (ನ.16) ರಾತ್ರಿ ಬಾಂಬ್ ಬೆದರಿಕೆ ಬಂದಿರುವ ಘಟನೆ ವರದಿಯಾಗಿದೆ.

ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಚೇರಿಗೆ ಬೆದರಿಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ತಂಡ ಸಿಎಂ ನಿವಾಸ ಸೇರಿದಂತೆ ಚಿತ್ರತಾರೆಯರ ನಿವಾಸಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ.

ಬೆದರಿಕೆ ಸಂದೇಶ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದೊಂದಿಗೆ ಎಲ್ಲಾ ನಾಲ್ಕು ಸ್ಥಳಗಳಲ್ಲಿ ಸಂಪೂರ್ಣ ಶೋಧ ಕಾರ್ಯವನ್ನು ನಡೆಸಿದ್ದಾರೆ. ಹಲವು ಗಂಟೆಗಳ ಕಾಲ ನಡೆದ ಈ ತಪಾಸಣೆಯ ನಂತರ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಗೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದ್ದು ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇ ಮೇಲ್‌ನ ಮೂಲವನ್ನು ಪತ್ತೆ ಹಚ್ಚುವ ಕಾರ್ಯ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ತಂತ್ರಜ್ಞಾನವು ಸಿನಿಮಾದಲ್ಲಿ ಏಕರೂಪತೆ ಹೇರುತ್ತಿದೆ: ನಿರ್ದೇಶಕ ಗಿರಿರಾಜ್

ಕಳೆದ ವಾರ ಚೆನ್ನೈನ ಇಂಜಂಬಕ್ಕಂನಲ್ಲಿರುವ ಅಜಿತ್ ಕುಮಾರ್ ಅವರ ನಿವಾಸಕ್ಕೆ ಇದೇ ರೀತಿಯ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಬಂದಿತ್ತು. ಪೂರ್ವ ಕರಾವಳಿ ರಸ್ತೆ (ECR) ನಲ್ಲಿರುವ ಅವರ ಮನೆಗೆ ಬಾಂಬ್ ಸ್ಕ್ವಾಡ್ ಅನ್ನು ನಿಯೋಜಿಸಿ ಶೋಧ ನಡೆಸಲಾಗಿತ್ತು.

ಅಜಿತ್ ಕುಮಾರ್ ಅವರ ಪ್ರಕರಣಕ್ಕೂ ಮೊದಲು, ನಟ ಅರುಣ್ ವಿಜಯ್ ಅವರ ಎಕ್ಕಾಟ್ಟುತಂಗಲ್‌ನಲ್ಲಿರುವ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಡಿಜಿಪಿ ಕಚೇರಿಗೆ ಇ-ಮೇಲ್ ಬಂದಿತ್ತು. ಆ ಶೋಧ ಕಾರ್ಯದಲ್ಲೂ ಯಾವುದೇ ಸ್ಫೋಟಕ ಪತ್ತೆಯಾಗಿರಲಿಲ್ಲ.

ಅಕ್ಟೋಬರ್‌ನಲ್ಲಿ ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಅವರ ಟಿ ನಗರ ಸ್ಟುಡಿಯೋ ಕೂಡ ಹುಸಿ ಬಾಂಬ್ ಎಚ್ಚರಿಕೆಗೆ ಗುರಿಯಾಗಿತ್ತು.

ಈ ಹುಸಿ ಬೆದರಿಕೆ ಕರೆಗಳ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...