ರಾಜಮೌಳಿ ಸಿನಿಮಾ ಸಾಹಸಗಾಥೆಯ ಸಾಕ್ಷ್ಯಚಿತ್ರ; ಟ್ರೇಲರ್ ವೀಕ್ಷಿಸಿ

Date:

ಭಾರತೀಯ ಚಿತ್ರರಂಗವನ್ನು ಜಾಗತಿಕ ಹಂತಕ್ಕೆ ತಂದ ಕೆಲವೇ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರಾದ ಎಸ್‌ಎಸ್‌ ರಾಜಮೌಳಿ ಅವರ ಸಿನಿಮಾ ಸಾಹಸಗಾಥೆಯ ಸಾಕ್ಷ್ಯಚಿತ್ರ ‘ಮಾಡರ್ನ್ ಮಾಸ್ಟರ್ಸ್: ಎಸ್‌ಎಸ್ ರಾಜಮೌಳಿ’ ಟ್ರೇಲರ್ ಬಿಡುಗಡೆಯಾಗಿದೆ.

ಟ್ರೇಲರ್‌ನಲ್ಲಿ ರಾಜಮೌಳಿ ಅವರ ಪ್ರಸಿದ್ಧ ಸಿನಿಮಾಗಳಾದ ಆರ್‌ಆರ್‌ಆರ್‌ ಮತ್ತು ಬಾಹುಬಲಿಯ ತೆರೆಮರೆಯ ಕೆಲವು ದೃಶ್ಯಗಳನ್ನು ಒಳಗೊಂಡಿದೆ. ಅವರ ಆರ್‌ಆರ್‌ಆರ್‌ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಲಭಿಸಿದೆ.

ರಾಜಮೌಳಿ ಅವರ ಸಿನಿಮಾಗಳಲ್ಲಿ ನಟಿಸಿದ ರಾಮ್ ಚರಣ್, ಜೂನಿಯರ್ ಎನ್‌ಟಿಆರ್ ಮತ್ತು ಪ್ರಭಾಸ್ ನಿರ್ದೇಶಕರೊಂದಿಗೆ ಕೆಲಸ ಮಾಡಿದ ಅನುಭವಗಳನ್ನು ಹಂಚಿಕೊಂಡಿರುವುದು ಟ್ರೇಲರ್‌ನಲ್ಲಿ ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಮೌಳಿಯವರ ಕೆಲಸದ ಮೇಲಿನ ಸಮರ್ಪಣೆಯ ಬಗ್ಗೆ ಮಾತನಾಡುತ್ತಾ, ಜೂನಿಯರ್ ಎನ್‌ಟಿಆರ್, “ಅವರು ಹುಚ್ಚ, ಅವರೊಂದಿಗೆ ವಾದ ಮಾಡುವುದರಲ್ಲಿ ಅರ್ಥವಿಲ್ಲ. ಅವರಿಗೆ ಬೇಕಾದುದನ್ನು ಮಾಡಿ, ಅಲ್ಲಿಂದ ಹೊರಬಂದುಬಿಡಬೇಕು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?ಇನ್ಸೈಡ್ ಔಟ್ ಸಿನಿಮಾ ನೋಡಿ- ಒಳಗಿನ ಹೊರಗೊಂದು ವಿಸ್ಮಯ ಅರಿಯಿರಿ 

ಅದೇ ರೀತಿ ರಾಜಮೌಳಿ ಸೆಟ್‌ನಲ್ಲಿ ಮೈಕ್‌ಗಳನ್ನು ಒಡೆಯುವುದನ್ನು ನೋಡಿದ್ದೇನೆ ಎಂದು ರಾಮ್ ಚರಣ್ ಹೇಳಿದ್ದಾರೆ. “ಕೆಲವೊಮ್ಮೆ ನಾನು ಆಘಾತಕ್ಕೊಳಗಾಗುತ್ತೇನೆ. ರಾಜಮೌಳಿ ಅವರ ಚಿತ್ರಗಳನ್ನು ನಾನು ನೋಡಿದಾಗ ನಾನು ನನ್ನನ್ನು ಮೂರನೇ ವ್ಯಕ್ತಿಯಂತೆ ಕಾಣುತ್ತೇನೆ” ಎಂದಿದ್ದಾರೆ.

ರಾಜಮೌಳಿಯನ್ನು ಅವರ ಪತ್ನಿ ರಮಾ ರಾಜಮೌಳಿ, ‘ಕೆಲಸದ ರಾಕ್ಷಸ’ ಎಂದೂ ಕರೆದಿದ್ದಾರೆ. ರಾಜಮೌಳಿ ಅವರು ತಮ್ಮ ಕಥೆಗೆ ಹೇಗೆ ದಾಸರಾಗಿದ್ದಾರೆ ಎಂಬುದನ್ನು ವಿವರಿಸುವುದರೊಂದಿಗೆ ಟ್ರೇಲರ್ ಕೊನೆಗೊಳ್ಳುತ್ತದೆ.

ಅಪ್ಲಾಸ್ ಎಂಟರ್‌ಟೈನ್‌ಮೆಂಟ್ ಮತ್ತು ಫಿಲ್ಮ್ ಕಂಪ್ಯಾನಿಯನ್ ಸ್ಟುಡಿಯೋಸ್ ನಿರ್ಮಾಣದಲ್ಲಿ ಮಾಡರ್ನ್ ಮಾಸ್ಟರ್ಸ್: ಎಸ್‌ಎಸ್ ರಾಜಮೌಳಿ ಸಾಕ್ಷ್ಯಚಿತ್ರ ಮೂಡಿಬಂದಿದ್ದು, ರಾಘವ್ ಖನ್ನಾ ನಿರ್ದೇಶಿಸಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಹೆಸರುವಾಸಿಯಾದ ಜೇಮ್ಸ್ ಕ್ಯಾಮರೂನ್, ಜೋ ರುಸ್ಸೋ, ಕರಣ್ ಜೋಹರ್, ಪ್ರಭಾಸ್, ರಾಣಾ ದಗ್ಗುಬಾಟಿ, ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ಸಂದರ್ಶನವನ್ನು ಈ ಸಾಕ್ಷ್ಯಚಿತ್ರ ಒಳಗೊಂಡಿದೆ. ಆಗಸ್ಟ್ 2ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...