ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

Date:

ಮಲಯಾಳಂ ಸಿನಿಮಾದ ಹಿರಿಯ ನಟ ಮೋಹನ್‌ಲಾಲ್ ಅವರಿಗೆ 2023ರ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಭಾರತದ ಚಿತ್ರರಂಗದಲ್ಲಿ ಅತ್ಯುನ್ನತ ಗೌರವವೆನಿಸಿದ ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 23, 2025ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಕುರಿತು ಎಕ್ಸ್‌ನಲ್ಲಿ ಪ್ರಕಟಣೆ ನೀಡಿದ್ದು, “ಮೋಹನ್‌ಲಾಲ್ ಅವರ ಅದ್ಭುತ ಸಿನೆಮಾ ಪ್ರಯಾಣ ಅನೇಕ ಪೀಳಿಗೆಗಳಿಗೆ ಪ್ರೇರಣೆ. ದಿಗ್ಗಜ ನಟ, ನಿರ್ದೇಶಕ ಮತ್ತು ನಿರ್ಮಾಪಕರಾದ ಅವರು ಭಾರತೀಯ ಸಿನೆಮಾಗೆ ನೀಡಿರುವ ಅಭೂತಪೂರ್ವ ಕೊಡುಗೆಗಾಗಿ ಗೌರವಿಸಲಾಗುತ್ತಿದೆ. ಅವರ ಅಪ್ರತಿಮ ಪ್ರತಿಭೆ, ಬಹುಮುಖಿ ಅಭಿನಯ ಹಾಗೂ ನಿರಂತರ ಪರಿಶ್ರಮವು ಭಾರತೀಯ ಚಿತ್ರರಂಗದಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿದೆ” ಎಂದು ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ವಿಷ್ಣುವರ್ಧನ್ @ 75 | ಕಾಲಧರ್ಮ ಕಡೆದು ನಿಲ್ಲಿಸಿದ ಕಲಾವಿದ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಮೋಹನಲಾಲ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೋಹನಲಾಲ್‌ ಅವರು ಶ್ರೇಷ್ಠತೆ ಮತ್ತು ಬಹುಮುಖತೆಯ ಸಂಕೇತವಾಗಿದ್ದಾರೆ. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಿತ್ರಗಳಲ್ಲೂ ಅವರು ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಚಿತ್ರರಂಗ ಮತ್ತು ರಂಗಭೂಮಿಯಲ್ಲಿ ಅವರ ಶ್ರೇಷ್ಠತೆಯು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಕಳೆದ ನಾಲ್ಕು ದಶಕಗಳಿಗೂ ಹೆಚ್ಚಿನ ಸಿನಿಮಾ ವೃತ್ತಿಜೀವನದಲ್ಲಿ ಮೋಹನಲಾಲ್ ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಸೇರಿ 400ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಗಾಗಿ 2001ರಲ್ಲಿ ಪದ್ಮಶ್ರೀ ಮತ್ತು 2019ರಲ್ಲಿ ಪದ್ಮಭೂಷಣ ಪ್ರಶಸ್ತಿಗಳೊಂದಿಗೆ ಗೌರವಿಸಲಾಗಿದೆ.

ಕಳೆದ ವರ್ಷ ನಟ ಮಿಥುನ್ ಚಕ್ರವರ್ತಿ ಅವರಿಗೆ 2022ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...