ಧೋನಿ ನಿರ್ಮಾಣದ ತಮಿಳು ಸಿನಿಮಾ ಫಸ್ಟ್‌‌ ಲುಕ್‌ ಬಿಡುಗಡೆ

Date:

ಫಸ್ಟ್‌ ಲುಕ್ ಪೋಸ್ಟರ್‌ ಹಂಚಿಕೊಂಡು ತಂಡಕ್ಕೆ ಶುಭಕೋರಿದ ಧೋನಿ

ಸದ್ಯದಲ್ಲೇ ತೆರೆಗೆ ಬರಲಿದೆ ʼಲೆಟ್ಸ್‌ ಗೆಟ್‌ ಮ್ಯಾರೀಡ್‌ʼ ಸಿನಿಮಾ

ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಎಲ್ಲರಿಗೂ ತಿಳಿದಿದೆ. ತಮ್ಮ ಪತ್ನಿ ಸಾಕ್ಷಿ ಜೊತೆಗೂಡಿ ʼಧೋನಿ ಎಂಟರ್‌ಟೈನ್ಮೆಂಟ್ʼ ಬ್ಯಾನರ್ ಶುರು ಮಾಡಿರುವ ಅವರು ತಮಿಳು ಸೇರಿದಂತೆ ಬೇರೆ ಭಾಷೆಗಳ ಚಿತ್ರಗಳನ್ನು ನಿರ್ಮಿಸುವುದಾಗಿ ಈ ಹಿಂದೆ ಘೋಷಿಸಿದ್ದರು. ಧೋನಿ ಒಡೆತನದ ಸಂಸ್ಥೆ ಬಂಡವಾಳ ಹೂಡಿರುವ ʼಎಲ್‌ಜಿಎಂʼ (ಲೆಟ್ಸ್‌ ಗೆಟ್‌ ಮ್ಯಾರೀಡ್‌) ಚಿತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಇದೀಗ ಬಿಡುಗಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ʼಎಲ್‌ಜಿಎಂʼ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್‌ ಹಂಚಿಕೊಂಡಿರುವ ಧೋನಿ, “ನಿಮ್ಮ ಮುಖದಲ್ಲಿ ನಗು ಮೂಡಿಸುವ ಕೌಟುಂಬಿಕ ಕಥಾಹಂದರವನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿ” ಎನ್ನುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ರಮೇಶ್ ಥಮಿಳ್ಮಣಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಶೂಟಿಂಗ್‌ ಕಳೆದ ಜನವರಿಯಲ್ಲಿ ಪ್ರಾರಂಭವಾಗಿತ್ತು. ಸದ್ಯ ಕೊನೆಯ ಹಂತದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಕೆಲ ದಿನಗಳಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಶುರುವಾಗಲಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಕೌಟುಂಬಿಕ ಕಥಾಹಂದರವುಳ್ಳ ಈ ಚಿತ್ರದಲ್ಲಿ ಹರೀಶ್ ಕಲ್ಯಾಣ್, ನದಿಯಾ ಹಾಗೂ ʼಲವ್ ಟು ಡೇʼ ಖ್ಯಾತಿಯ ಇವಾನಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ತಮಿಳಿನ ಖ್ಯಾತ ಹಾಸ್ಯ ಕಲಾವಿದ ಯೋಗಿ ಬಾಬು, ಮಿರ್ಚಿ ವಿಜಯ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಮೇಶ್ ಥಮಿಳ್ಮಣಿ ನಿರ್ದೇಶನದ ಜೊತೆಗೆ ಸಂಗೀತ ಸಂಯೋಜನೆಯ ಹೊಣೆಯನ್ನು ಕೂಡ ಹೊತ್ತುಕೊಂಡಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...