ಯಶ್‌ ಜೊತೆಗೆ ನರ್ತನ್‌ ಸಿನಿಮಾ ಸದ್ಯಕ್ಕಿಲ್ಲ

Date:

ಶಿವರಾಜ್‌ ಕುಮಾರ್‌ ನಟನೆಯ ʼಭೈರತಿ ರಣಗಲ್‌ʼ ಸಿನಿಮಾದಲ್ಲಿ ನರ್ತನ್‌ ಬ್ಯುಸಿ

ಕೆಜಿಎಫ್‌-2 ಬಿಡುಗಡೆಯಾಗಿ ವರ್ಷ ಕಳೆದರೂ ಹೊಸ ಸಿನಿಮಾ ಘೋಷಿಸದ ಯಶ್‌

ಸ್ಟಾರ್‌ ನಟ ಯಶ್‌ ಮತ್ತು ಮಫ್ತಿ ಖ್ಯಾತಿಯ ನಿರ್ದೇಶಕ ನರ್ತನ್‌ ಕಾಂಬಿನೇಶನ್‌ನ ಸಿನಿಮಾ ಸೆಟ್ಟೇರಲಿದೆ. ಯಶ್‌ ಅವರ 19ನೇ ಚಿತ್ರಕ್ಕಾಗಿ ನರ್ತನ್‌ ಕಥೆ ಸಿದ್ಧಪಡಿಸುತ್ತಿದ್ದಾರೆ ಎಂಬ ಮಾತುಗಳು ಹಲವು ಬಾರಿ ಚರ್ಚೆಗೆ ಬಂದಿದ್ದವು. ಆದರೆ, ಇದೀಗ ನರ್ತನ್‌, ಶಿವರಾಜ್‌ ಕುಮಾರ್‌ ಅವರ ಜೊತೆ ಭೈರತಿ ರಣಗಲ್‌ ಸಿನಿಮಾ ಮಾಡುತ್ತಿದ್ದಾರೆ. ಹಾಗಿದ್ದಾರೆ ಯಶ್‌ಗಾಗಿ ಸಿದ್ಧಪಡಿಸಿದ್ದ ಕಥೆ ಏನಾಯ್ತು? ನರ್ತನ್‌-ಯಶ್‌ ಕಾಂಬಿನೇಶನ್‌ ಸಿನಿಮಾ ಸೆಟ್ಟೇರುತ್ತಾ ಎಂಬ ಹಲವು ಪ್ರಶ್ನೆಗಳಿಗೆ ಸ್ವತಃ ನರ್ತನ್‌ ಅವರೇ ಉತ್ತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವರಾಜ್‌ ಕುಮಾರ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಭೈರತಿ ರಣಗಲ್‌ʼ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾದ ಮುಹೂರ್ತ ಸಮಾರಂಭದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ನರ್ತನ್‌, ಯಶ್‌ ಜೊತೆ ತಾವು ಮಾಡಬೇಕಿದ್ದ ಸಿನಿಮಾದ ಕಥೆ ಏನಾಯ್ತು ಎಂಬ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ನಾನು ಯಶ್‌ ಅವರ 19ನೇ ಚಿತ್ರವನ್ನು ನಿರ್ದೇಶಿಸಬೇಕು ಎಂದುಕೋಂಡಿದ್ದು ನಿಜ. ಅದಕ್ಕಾಗಿ ಕಥೆಯನ್ನು ಕೂಡ ಸಿದ್ಧಪಡಿಸಿದ್ದೆ. ಆದರೆ, ಇವತ್ತಿನ ಕಾಲಘಟ್ಟದಲ್ಲಿ ನೆಟ್‌ಫ್ಲಿಕ್ಸ್‌, ಅಮೆಜಾನ್‌ನಂತಹ ವೇದಿಕೆಗಳಲ್ಲಿ ಪ್ರತಿದಿನ ಹೊಸ ಚಿತ್ರಗಳು ಬಿಡುಗಡೆಯಾಗುತ್ತಿವೆ. ಹೀಗೆ ಪೈಪೋಟಿಯ ಮೇಲೆ ಬಿಡುಗಡೆಯಾಗುವ ಸಿನಿಮಾಗಳಲ್ಲಿ ಕೆಲವೊಮ್ಮೆ ನಾವು ಬರೆದಿಟ್ಟುಕೊಂಡ ಕಥೆಯನ್ನು ಹೋಲುವ ಅಂಶಗಳಿದ್ದಾಗ ಬದಲಾವಣೆ ಮಾಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ಯಶ್‌ ಅವರ ಜೊತೆ ಸಿನಿಮಾ ಮಾಡುವುದು ತಡವಾಗುತ್ತಿದೆ. ಕೆಜಿಎಫ್‌ ನಂತರ ಯಶ್‌ ಅವರು ಕೇವಲ ಸ್ಟಾರ್‌ ನಟನಾಗಿ ಉಳಿದಿಲ್ಲ, ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅವರ ವರ್ಚಸ್ಸಿಗೆ ತಕ್ಕನಾದ ಸಿನಿಮಾ ಮಾಡಬೇಕು. ಹೀಗಾಗಿ ತಡವಾಗುತ್ತಿದೆ. ಅವರು ಕೂಡ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಸಿನಿಮಾದ ಕಥೆಯನ್ನು ಕೇಳಿದ್ದಾರೆ. ಕತೆಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುತ್ತಿದ್ದೇವೆ. ಸದ್ಯದಲ್ಲೇ ಎಲ್ಲ ಮಾಹಿತಿ ನೀಡುತ್ತೇನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ʼಮಳ್ಳಿ ಪೆಳ್ಳಿʼ ಚಿತ್ರದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ನರೇಶ್‌ ಮೂರನೇ ಪತ್ನಿ

ʼಕೆಜಿಎಫ್‌-2ʼ ಸಿನಿಮಾ ಯಶಸ್ಸಿನ ಬಳಿಕ ನಟನೆಯಿಂದ ಅಂತರ ಕಾಯ್ದುಕೊಂಡಿರುವ ಯಶ್‌ ಈವರೆಗೆ ತಮ್ಮ ಮುಂದಿನ ಚಿತ್ರವನ್ನು ಘೋಷಿಸಿಲ್ಲ. ಇಷ್ಟು ದಿನಗಳ ಕಾಲ ನರ್ತನ್‌ ನಿರ್ದೇಶನದ ಚಿತ್ರದಲ್ಲಿ ಯಶ್‌ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಇದೀಗ ಯಶ್‌, ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್‌ ದಾಸ್‌ ಅವರ ಚಿತ್ರದಲ್ಲಿ ನಟಿಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ʼಕೆವಿಎನ್‌ ಪ್ರೊಡಕ್ಷನ್ಸ್‌ʼ ಈ ಚಿತ್ರಕ್ಕೆ ಬಂಡವಾಳ ಹೂಡಲಿದೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...