ಸಿನಿ ರಸಿಕರ ಗಮನ ಸೆಳೆದ ʼಕ್ಷೇತ್ರಪತಿʼ ಟೀಸರ್‌

Date:

`ಗುಳ್ಟು’ ಖ್ಯಾತಿಯ ನಟ ನವೀನ್‌ ಶಂಕರ್‌ ಅಭಿನಯದ ʼಕ್ಷೇತ್ರಪತಿʼ ಸಿನಿಮಾದ ಬಹುನಿರೀಕ್ಷಿತ ಟೀಸರ್‌ ಗುರುವಾರ ಬಿಡುಗಡೆಯಾಗಿದೆ. ಅಂದಾಜು ಎರಡು ನಿಮಿಷಗಳ ಟೀಸರ್‌ ಬಿಡುಗಡೆಯಾದ 24 ಗಂಟೆಗಳಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಯುವ ನಿರ್ದೇಶಕ ಶ್ರೀಕಾಂತ್‌ ಕಟಗಿ, ಉತ್ತರ ಕರ್ನಾಟಕದ ರೈತರ ಮೇಲಿನ ದೌರ್ಜನ್ಯ ಮತ್ತು ಬಂಡಾಯದ ಸುತ್ತದ ಚಿತ್ರದ ಕಥೆಯನ್ನು ಹೆಣೆದಿದ್ದಾರೆ. ʼಕ್ಷೇತ್ರಪತಿʼ ಪೊಲಿಟಿಕಲ್‌ ಡ್ರಾಮಾ ಸಿನಿಮಾ ಎಂಬುದನ್ನು 2 ನಿಮಿಷಗಳ ಟೀಸರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿದೆ.

ನವೀನ್‌ ಶಂಕರ್‌ ಮುಖ್ಯಭೂಮಿಕೆಯ ಈ ಚಿತ್ರದಲ್ಲಿ ಕೆಜಿಎಫ್‌ ಖ್ಯಾತಿಯ ಅರ್ಚನಾ ಜೋಯಿಸ್‌ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್‌ ಕುಮಾರ್‌, ಕೃಷ್ಣಾ ಹೆಬ್ಬಾಳೆ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಿನ್ನ ಟೈಟಲ್‌, ಉತ್ತರ ಕರ್ನಾಟಕದ ಕಥಾಹಂದರದ ಮೂಲಕ ಕುತೂಹಲ ಹೆಚ್ಚಿಸಿರುವ ʼಕ್ಷೇತ್ರಪತಿʼ ಮುಂಬರುವ ಜುಲೈ ತಿಂಗಳಿನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಕೆಜಿಎಫ್‌ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿರುವುದು ವಿಶೇಷ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...