ತನ್ನನ್ನು ತಾನು ಅತ್ಯಂತ ಕೊಳಕು ನಟ ಎಂದು ಕರೆದುಕೊಂಡ ನವಾಜುದ್ದೀನ್ ಸಿದ್ದಿಕಿ

Date:

ಬಾಲಿವುಡ್‌ ನಟ ನವಾಜುದ್ದೀನ್‌ ಸಿದ್ದಿಕಿ ಅವರು ತನ್ನನ್ನು ತಾನು ಕೊಳಕು ನಟ ಎಂದು ಕರೆದುಕೊಂಡಿದ್ದಾರೆ.

ಇತ್ತೀಚಿಗೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನೊಬ್ಬ ಅತ್ಯಂತ ಕೊಳಕು ನಟ. ಈ ಮುಖದೊಂದಿಗೆ ನಾನು ನಟನಾಗಲು ನಿರ್ಧರಿಸಿದಾಗ ಜನರು ಏನೆಂದುಕೊಳ್ಳುತ್ತಾರೊ ಎಂದು ಯೋಚಿಸಿರಲಿಲ್ಲ. ನನ್ನ ನಟನೆಯ ಬಗ್ಗೆ ಹಲವರು ಕೆಟ್ಟ ಭಾವನೆಯನ್ನು ಹೊಂದಿರುವುದಾಗಿ ನಾನು ಕೇಳಿದ್ದೇನೆ ಎಂದು ಸಿದ್ದಿಕಿ ತಿಳಿಸಿದ್ದಾರೆ.

”ನನ್ನನ್ನು ನೋಡಿದರೆ ಕೆಲವರು ಏಕೆ ಕೋಪಿಸಿಕೊಳ್ಳುತ್ತಾರೆ ಎಂದು ಗೊತ್ತಿಲ್ಲ. ಏಕೆಂದರೆ ನಾನು ಕೊಳಕು ನಟನಾಗಿರಬಹುದು. ನಾನು ಕೂಡ ನನ್ನನ್ನು ಕನ್ನಡಿ ಮುಂದೆ ನಿಂತು ನೋಡಿಕೊಂಡರೆ ಅದೇ ರೀತಿ ಅನಿಸಬಹುದು. ಇಂತಹ ಕೆಟ್ಟ ಮುಖವನ್ನು ಇಟ್ಟುಕೊಂಡು ನಾನೇಕೆ ಸಿನಿಮಾ ಲೋಕಕ್ಕೆ ಬಂದೆ ಎಂದು ನಾನು ಪ್ರಶ್ನಿಸಿಕೊಂಡಿದ್ದೇನೆ” ಎಂದು ಸಿದ್ದಿಕಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಸಿನಿಮಾ ರಂಗದಲ್ಲಿ ದೈಹಿಕವಾಗಿ ನಾನೊಬ್ಬ ಕೊಳಕು ನಟ. ನಾನು ಬಹಳ ವರ್ಷಗಳಿಂದ ಕೇಳಿಸಿಕೊಳ್ಳುತ್ತ ಬಂದಿದ್ದೇನೆ. ಹಾಗಾಗಿ ನಾನು ನಂಬಲು ಶುರು ಮಾಡಿದ್ದೇನೆ. ಚಿತ್ರರಂಗದ ಬಗ್ಗೆ ನನಗೆ ಯಾವುದೇ ದೂರುಗಳಿಲ್ಲ” ಎಂದು ಸಿದ್ದಿಕಿ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೊದಲ ಭಾಷಣದಲ್ಲೇ ಬಿಜೆಪಿಗರ ಬೆವರಿಳಿಸಿದ ರಾಹುಲ್ ಮತ್ತು ಮಹುವಾ

”ವಿವಿಧ ರೀತಿಯ ಪಾತ್ರಗಳನ್ನು ನೀಡಿದ ಎಲ್ಲ ನಿರ್ದೇಶಕರಿಗೆ ನಾನು ಧನ್ಯವಾದ ಹೇಳುತ್ತೇನೆ. ನಿಮ್ಮ ಬಳಿ ಚೂರು ಪ್ರತಿಭೆಯಿದ್ದರೂ ಸಿನಿಮಾ ರಂಗ ಹಲವು ಅವಕಾಶ ನೀಡುತ್ತದೆ. ಸಮಾಜದಲ್ಲಿ ತಾರತಮ್ಯವಿದೆ. ಆದರೆ ಉದ್ಯಮದಲ್ಲಿ ಇಲ್ಲ” ಎಂದು ನವಾಜುದ್ದೀನ್‌ ಸಿದ್ದಿಕಿ ತಿಳಿಸಿದ್ದಾರೆ.

ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ ಕೂಡ ಇತ್ತೀಚಿಗೆ ಪಾತ್ರಗಳ ಅಭಿನಯಗಳ ಆಧಾರದ ಮೇಲೆ ಚಿತ್ರರಂಗದಲ್ಲಿ ತಾರತಮ್ಯದಿಂದ ನಡೆಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದರು.

ಚಿತ್ರರಂಗವು ನಟರನ್ನು ಗೌರವಿಸುವುದಿಲ್ಲ. ಅವರು ನವಾಜುದ್ದೀನ್‌ ಕಪ್ಪು ಬಣ್ಣ, ಪಂಕಜ್‌ ತ್ರಿಪಾಠಿ ಸಾಧಾರಣ, ಮನೋಜ್‌ ಬಾಜಪೇಯಿ ಗೂಂಡಾ ಎಂದು ಭಾವಿಸುತ್ತಾರೆ. ಅವರು ಜನರನ್ನು ನೋಡುವ ರೀತಿ ಹಾಗಿದೆ ಎಂದು ತಿಳಿಸಿದರು.

ನವಾಜುದ್ದೀನ್‌ ಸಿದ್ದಿಕಿ ಅಭಿನಯದ ನಿಗೂಢ ಕ್ರೈಂ ಕಥಾನಕಾ ಹೊಂದಿರುವ ‘ರೌತು ಕಾ ರಾಜ್‌’ ಸಿನಿಮಾ ಒಟಿಟಿ ವೇದಿಕೆ ಜೀ5ನಲ್ಲಿ ಇತ್ತೀಚೆಗಷ್ಟೆ ಬಿಡುಗಡೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...