ನಯನತಾರ ‘ಅನ್ನಪೂರ್ಣಿ’ ಸಿನಿಮಾ ತೆಗೆದು ಹಾಕಿದ ನೆಟ್‌ಫ್ಲಿಕ್ಸ್; RSSಗೆ ಕ್ಷಮೆಯಾಚಿಸಿದ ಝೀ ಸ್ಟುಡಿಯೋಸ್

Date:

ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದ ನಯನತಾರ ಅಭಿನಯದ ‘ಅನ್ನಪೂರ್ಣಿ’ ತಮಿಳು ಸಿನಿಮಾವನ್ನು ಒಟಿಟಿಯಿಂದ ‘ನೆಟ್‌ಫ್ಲಿಕ್ಸ್’ ತೆಗೆದುಹಾಕಿದೆ. ಚಿತ್ರದ ನಿರ್ಮಾಪಕರಾದ ಝೀ ಸ್ಟುಡಿಯೋಸ್ ಸಂಸ್ಥೆ, ವಿಶ್ವ ಹಿಂದೂ ಪರಿಷತ್ ಹಾಗೂ ಆರ್‌ಎಸ್‌ಎಸ್‌ನೊಂದಿಗೆ ಕ್ಷಮೆಯಾಚಿಸಿದೆ.

“ಸಹ ನಿರ್ಮಾಪಕರಾಗಿ, ಹಿಂದೂ ಹಾಗೂ ಬ್ರಾಹ್ಮಣ ಸಮುದಾಯಗಳಿಗೆ ನೋವುಂಟು ಮಾಡುವ ಯಾವುದೇ ಉದ್ದೇಶವಿರಲಿಲ್ಲ. ಈ ಸಮುದಾಯಗಳಿಗೆ ತೊಂದರೆ ಹಾಗೂ ನೋವು ಉಂಟಾಗಿರುವುದಕ್ಕೆ ಕ್ಷಮೆ ಯಾಚಿಸಲು ಬಯಸುತ್ತೇವೆ” ಎಂದು ಝೀ ಸ್ಟುಡಿಯೋಸ್ ತನ್ನ ಕ್ಷಮಾಪಣಾ ಪತ್ರದಲ್ಲಿ ತಿಳಿಸಿದೆ.

ಸಿನಿಮಾದ ಸಹ ನಿರ್ಮಾಪಕರಾಗಿರುವ ನಾವು, ಸಿನಿಮಾದ ಕೆಲವು ದೃಶ್ಯಗಳನ್ನು ತಿದ್ದುಪಡಿ ಮಾಡುವವರೆಗೂ ನೆಟ್‌ಫ್ಲಿಕ್ಸ್‌ನಿಂದ ತೆಗೆದು ಹಾಕಿರುತ್ತೇವೆ ಎಂದು ಝೀ ಸ್ಟುಡಿಯೋಸ್ ತಿಳಿಸಿದೆ. ಈ ಸಿನಿಮಾ ಕೇಂದ್ರ ಸಿನಿಮಾ ಪ್ರಮಾಣ ಪತ್ರ ಮಂಡಳಿ (ಸಿಬಿಎಫ್‌ಸಿ)ಯಿಂದ ಅನುಮತಿ ಪಡೆದು ತಮಿಳುನಾಡಿನಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

‘ಅನ್ನಪೂರ್ಣಿ’ ಸಿನಿಮಾವು ಬ್ರಾಹ್ಮಣ ಸಮುದಾಯದ ಸಂಪ್ರದಾಯಸ್ಥ ಮಹಿಳೆಯೊಬ್ಬಳು ಭಾರತದ ನಂಬರ್‌ ಒನ್ ಶೆಫ್ ಆಗುವ ಕಥೆಯನ್ನು ಒಳಗೊಂಡಿದೆ. ಸಿನಿಮಾ ಪಾತ್ರಧಾರಿ ಅನ್ನಪೂರ್ಣಿ ಮಾಂಸಾಹಾರ ಅಡುಗೆ ಮಾಡುವುದು, ಸೇವನೆ ಮಾಡುವುದು ಹಾಗೂ ಆಕೆಯ ಮುಸ್ಲಿಂ ಸ್ನೇಹಿತ ರಾಮ ಮಾಂಸಾಹಾರಿಯಾಗಿದ್ದ ಎಂದು ಹೇಳುವ ದೃಶ್ಯಗಳ ಬಗ್ಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಧಕ್ಕೆಯಾಗಿರುವುದಕ್ಕೆ ಹಿಂದೂ ಐಟಿ ಸೆಲ್‌ನ ಮುಖ್ಯಸ್ಥ ರಮೇಶ್ ಸೋಲಂಕಿ ಎಂಬುವವರು ನಯನತಾರ, ನಿರ್ಮಾಪಕರು, ನಿರ್ದೇಶಕರು, ನೆಟ್‌ಫ್ಲಿಕ್ಸ್ ವೇದಿಕೆ ಒಳಗೊಂಡು ಸಿನಿಮಾ ತಂಡದ ಎಂಟು ಮಂದಿಯ ವಿರುದ್ಧ ಜನವರಿ 8ರಂದು ಮುಂಬೈ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...