ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼಸ್ಪೈʼ ಟೀಸರ್‌

Date:

ಸುಭಾಷ್‌ ಚಂದ್ರ ಬೋಸ್‌ ಸಾವಿನ ರಹಸ್ಯ ಬೇಧಿಸುವ ಕಥನ

ಜೂನ್‌ 29ಕ್ಕೆ ತೆರೆಗೆ ಬರಲಿದೆ ಪತ್ತೇದಾರಿ ಸಿನಿಮಾ

ಟಾಲಿವುಡ್‌ನ ಖ್ಯಾತ ನಟ ನಿಖಿಲ್‌ ಸಿದ್ಧಾರ್ಥ್‌ ಅಭಿನಯದ ʼಸ್ಪೈʼ ಸಿನಿಮಾದ ಬಹುನಿರೀಕ್ಷಿತ ಟೀಸರ್‌ ಸೋಮವಾರ ಬಿಡುಗಡೆಯಾಗಿದ್ದು ಸಿನಿ ರಸಿಕರ ಗಮನ ಸೆಳೆಯುತ್ತಿದೆ. ದೆಹಲಿಯ ರಾಜ್‌ಪಥ್‌ನಲ್ಲಿರುವ ಸುಭಾಷ್ ಚಂದ್ರ ಬೋಸ್ ಪುತ್ಥಳಿಯ ಎದುರು ಈ ಚಿತ್ರದ ಟೀಸರ್‌ ಅನಾವರಣ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸ್ಪೈʼ ಹೆಸರಿನ ಶೀರ್ಷಿಕೆಯೇ ಸೂಚಿಸುವಂತೆ ಈ ಚಿತ್ರ ಪತ್ತೇದಾರಿ ಕಥಾಹಂದರವನ್ನು ಒಳಗೊಂಡಿದೆ. ಚಿತ್ರದಲ್ಲಿ ಗೂಢಾಚಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ ಅವರ ಸಾವಿನ ರಹಸ್ಯದ ಚಿತ್ರದ ಕಥೆಯನ್ನು ಹೆಣೆಯಲಾಗಿದೆ ಎಂಬುದನ್ನು ಒಂದೂವರೆ ನಿಮಿಷಗಳ ಟೀಸರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿದೆ.

ಆ್ಯಕ್ಷನ್ ಪ್ಯಾಕ್‌ ಕಥಾಹಂದರವುಳ್ಳ ಈ ಚಿತ್ರದಲ್ಲಿ ನಿಖಿಲ್ ಸಿದ್ದಾರ್ಥಗೆ ಐಶ್ವರ್ಯ ಮೆನನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸನ್ಯಾ ಠಾಕೂರ್, ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮುಂತಾದವರು ಪ್ರಮುಕ ಪಾತ್ರಗಳಲ್ಲಿ ನಟಿಸಿದ್ದಾರೆ.

ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರಕ್ಕೆ ಗ್ಯಾರಿ ಬಿ ಹೆಚ್ ಆ್ಯಕ್ಷನ್ ಕಟ್‌ ಹೇಳಿದ್ದು, ಚರಣ್ ತೇಜ್ ಉಪ್ಪಲಪತಿ ಬಂಡವಾಳ ಹೂಡಿದ್ದಾರೆ. ಶ್ರೀ ಚರಣ್‌ ಮತ್ತು ವಿಶಾಲ್‌ ಚಂದ್ರಶೇಖರ್‌ ಅವರು ಈ ಚಿತ್ರಕ್ಕೆ ಜಂಟಿಯಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಟೀಸರ್‌ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಜೂನ್‌ 29ಕ್ಕೆ ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ತೆರೆಗೆ ಬರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...