ಆತ್ಮಹತ್ಯೆಗೆ ಶರಣಾದ ಬಾಲಿವುಡ್‌ನ ಖ್ಯಾತ ಕಲಾ ನಿರ್ದೇಶಕ ನಿತಿನ್‌ ದೇಸಾಯಿ

Date:

ಬಾಲಿವುಡ್‌ನ ಖ್ಯಾತ ಕಲಾ ನಿರ್ದೇಶಕ ನಿತಿನ್‌ ದೇಸಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಬೆಳಗ್ಗೆ ಮುಂಬೈ ಸಮೀಪದ ಕಾರ್ಜತ್‌ನಲ್ಲಿರುವ ತಮ್ಮದೇ ಒಡೆತನದ ಎನ್‌ಡಿ ಸ್ಟುಡಿಯೋದಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಸಮಸ್ಯೆ ಉಂಟಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಆಗಸ್ಟ್‌ 9ರಂದು ನಿತಿನ್‌ 58ನೇ ವಸಂತಕ್ಕೆ ಕಾಲಿಡಲಿದ್ದರು. ಹುಟ್ಟುಹಬ್ಬಕ್ಕೆ ಕೆಲವೇ ದಿನಗಳಿರುವಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯ ಮಾಹಿತಿ ಪಡೆದ ಖಾಲಾಪುರ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿತಿನ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಸ್ಥಳೀಯ ಶಾಸಕ ಮಹೇಶ್‌ ಬಾಲ್ಡಿ ನಿತಿನ್‌ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದು, “ನಿತಿನ್‌ ಆತ್ಮಹತ್ಯೆಗೆ ಶರಣಾಗಲು ಹಣಕಾಸಿನ ಸಮಸ್ಯೆಯೇ ಕಾರಣ. ಅವರ ಎನ್‌ಡಿ ಸ್ಟುಡಿಯೋ ಕಳೆದ ಕೆಲ ದಿನಗಳಿಂದ ನಷ್ಟದಲ್ಲಿ ನಡೆಯುತ್ತಿತ್ತು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ” ಎಂದಿದ್ದಾರೆ. ರಿತೇಶ್‌ ದೇಶಮುಖ್‌ ಸೇರಿದಂತೆ ಬಾಲಿವುಡ್‌ನ ಹಲವು ಗಣ್ಯರು ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹಮ್‌ ದಿಲ್‌ ದೇ ಚುಕೆ ಸನಮ್‌ʼ, ʼದೇವದಾಸ್‌ʼ, ʼಜೋಧಾ ಅಕ್ಬರ್‌ʼ, ʼಲಗಾನ್‌ʼ ಮುಂತಾದ ಜನಪ್ರಿಯ ಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿದ್ದ ನಿತಿನ್‌ ಅದ್ದೂರಿ ಸೆಟ್‌ಗಳನ್ನು ನಿರ್ಮಿಸುವ ಮೂಲಕ ಬಾಲಿವುಡ್‌ನಲ್ಲಿ ಸ್ಟಾರ್‌ ಕಲಾವಿದನಾಗಿ ಗುರುತಿಸಿಕೊಂಡಿದ್ದರು. ಅತ್ಯುತ್ತಮ ಕಲಾ ನಿರ್ದೇಶನಕ್ಕಾಗಿ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಕೇವಲ ಕಲಾ ನಿರ್ದೇಶಕನಾಗಿ ಮಾತ್ರವಲ್ಲದೇ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕನಾಗಿಯೂ ಹೆಸರು ಮಾಡಿದ್ದರು.

ಸಿನಿಮಾ ಶೂಟಿಂಗ್‌ಗೆ ಸೆಟ್‌ಗಳನ್ನು ನಿರ್ಮಿಸುವ ಸಲುವಾಗಿ 2005ರಲ್ಲಿ ಕಾರ್ಜತ್‌ನಲ್ಲಿ 52 ಎಕ್ಕರೆ ಪ್ರದೇಶದಲ್ಲಿ ಎನ್‌ಡಿ ಸ್ಟುಡಿಯೋವನ್ನು ಪ್ರಾರಂಭಿಸಿದ್ದರು. ʼಜೋಧಾ ಅಕ್ಬರ್‌ʼ, ʼಲಗಾನ್‌ʼ ಮುಂತಾದ ಚಿತ್ರಗಳನ್ನು ಇದೇ ಸ್ಟುಡಿಯೋದಲ್ಲಿ ಚಿತ್ರಿಸಲಾಗಿದೆ. ಹಿಂದಿ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ʼಬಿಗ್‌ ಬಾಸ್‌ʼನ ಚಿತ್ರೀಕರಣ ಕೂಡ ಇದೇ ಸ್ಟುಡಿಯೋದಲ್ಲಿ ನಡೆಯುತ್ತದೆ.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...