ಕ್ಷಮೆ ಕೇಳದಿದ್ದರೆ ಕಮಲ್‌ ಹಾಸನ್‌ ಸಿನಿಮಾ ಬಿಡುಗಡೆಯಿಲ್ಲ: ವಾಣಿಜ್ಯ ಮಂಡಳಿ ಎಚ್ಚರಿಕೆ

Date:

ಕಮಲ್‌ ಹಾಸನ್‌ ಅವರು ಕನ್ನಡ ಭಾಷೆಯ ಬಗ್ಗೆ ಆಡಿರುವ ಮಾತುಗಳು ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಕ್ಷಮೆ ಕೇಳದಿದ್ದರೆ ಅವರು ಅಭಿನಯಿಸಿರುವ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆಗೊಳಿಸಲು ಬಿಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕಮಲ್ ಹಾಸನ್ ಅವರಿಂದ ಕ್ಷಮೆ ಕೇಳಿಸುತ್ತೇವೆ.ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕು ಇಲ್ಲದೇ ಹೋದರೆ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಥಗ್ ಲೈಫ್’ ಸಿನಿಮಾ ಕರ್ನಾಟಕದ ವಿತರಕ ವೆಂಕಟೇಶ್ ಅವರನ್ನು ಚೇಂಬರ್​ಗೆ ಕರೆಸಿ ಮಾತುಕತೆ ನಡೆಸಿದ್ದೇವೆ. ಕಮಲ್ ಹಾಸನ್ ಅವರನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಕಮಲ್ ಅವರಿಂದ ಕ್ಷಮೆ ಕೇಳಿಸುತ್ತೇವೆ. ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕು. ಇಲ್ಲದೇ ಹೋದರೆ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ’ ಎಂದು ನರಸಿಂಹಲು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕನ್ನಡ ತಮಿಳಿನಿಂದ ಹುಟ್ಟಿದೆ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

ಕನ್ನಡಪರ ನಾಯಕರಾದ ಸಾ .ರಾ ಗೋವಿಂದು ಮಾತನಾಡಿ, ‘ಕಮಲ್ ಹಾಸನ್ ಬಗ್ಗೆ ಕನಿಕರ ಇಲ್ಲ ಇದನ್ನ ಸಹಿಸೋಕೆ ಸದ್ಯ ಇಲ್ಲ. ಇವತ್ತು ನಾಳೆಯೊಳಗೆ ಕ್ಷಮೆ ಕೇಳದಿದ್ದರೆ ಚಿತ್ರ ಬಿಡುಗಡೆ ಆಗೋದಿಲ್ಲ. ಕಮಲ್ ಹಾಸನ್ ಅವರಿಗೆ ಮನದಟ್ಟು ಮಾಡಿಸುವ ಜವಾಬ್ದಾರಿ ವಿತರಕರದ್ದು, ಅದನ್ನು ಅವರಿಗೆ ಹೇಳಿದ್ದೀವಿ’ ಎಂದು ತಿಳಿಸಿದರು.

‘ತಮಿಳು ಭಾಷೆಯಿಂದ ಕನ್ನಡ ಭಾಷೆಯ ಜನನವಾಯಿತು’ ಎಂದು ಕಮಲ್ ಹಾಸನ್ ಹೇಳಿದ್ದರು. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಥಗ್ ಲೈಫ್’ ಜೂನ್ 5 ರಂದು ಬಿಡುಗಡೆ ಆಗಲಿದೆ. ಮಣಿರತ್ನಮ್‌ ನಿರ್ದೇಶನದ ಸಿನಿಮಾನಲ್ಲಿ ಕಮಲ್ ಹಾಸನ್ ಜೊತೆಗೆ ಅಭಿರಾಮಿ, ಸಿಂಭು, ತ್ರಿಷಾ ಮುಂತಾದವರು ನಟಿಸಿದ್ದಾರೆ. ಸಿನಿಮಾಕ್ಕೆ ಎ ಆರ್ ರೆಹಮಾನ್ ಸಂಗೀತ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...