ʼದಿ ಕೇರಳ ಸ್ಟೋರಿʼ ಚಿತ್ರ ನಿಷೇಧಿಸಿಲ್ಲ : ಸುಪ್ರೀಂ ಪ್ರಶ್ನೆಗೆ ಉತ್ತರಿಸಿದ ತಮಿಳುನಾಡು ಸರ್ಕಾರ

Date:

ಕಳಪೆ ಪ್ರದರ್ಶನದಿಂದಾಗಿ ಚಿತ್ರದ ಪ್ರದರ್ಶನ ರದ್ದು

ಚಿತ್ರದ ಪ್ರಚಾರಕ್ಕಾಗಿ ಸುಳ್ಳು ಹೇಳಿದರೇ ನಿರ್ಮಾಪಕರು?

ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನಕ್ಕೆ ನಿರ್ಬಂಧ ಹೇರಿದ್ದಕ್ಕೆ ವಿವರಣೆ ನೀಡುವಂತೆ ಸೂಚಿಸಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಮೂಲಕ ವಿವರಣೆ ನೀಡಿರುವ ತಮಿಳುನಾಡು ಸರ್ಕಾರದ ಪರ ವಕೀಲರು “ಕಳಪೆ ಪ್ರದರ್ಶನದಿಂದಾಗಿ ರಾಜ್ಯದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರದ ಪ್ರದರ್ಶನಗಳು ನಿಂತಿವೆ. ಆದರೆ, ಚಿತ್ರದ ಪ್ರಚಾರಕ್ಕಾಗಿ ನಿರ್ಮಾಪಕರು ಸರ್ಕಾರದ ಮೇಲೆ ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಎಂದು ಪ್ರತಿಯಾಗಿ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ʼದಿ ಕೇರಳ ಸ್ಟೋರಿʼ ಚಿತ್ರವನ್ನು ಪ್ರದರ್ಶಿಸದಂತೆ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಹೇರಿದೆ. ತಮಿಳುನಾಡಿನಲ್ಲೂ ಅನಧಿಕೃತವಾಗಿ ಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ಚಿತ್ರದ ನಿರ್ಮಾಪಕರು ರಾಜ್ಯ ಸರ್ಕಾರಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಎರಡೂ ರಾಜ್ಯ ಸರ್ಕಾರಗಳಿಗೆ ವಿವರಣೆ ನೀಡುವಂತೆ ಸೂಚಿಸಿ ನೋಟಿಸ್‌ ಜಾರಿ ಮಾಡಿದ್ದರು.

ಇದೀಗ ಅಫಡವಿಟ್‌ ಮೂಲಕ ತಮಿಳುನಾಡು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ವಿವರಣೆ ನೀಡಿದ್ದು, “ರಾಜ್ಯದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ಅನಧಿಕೃತ ನಿರ್ಬಂಧ ಹೇರಲಾಗಿದೆ ಎಂದು ನಿರ್ಮಾಪಕರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವದಲ್ಲಿ ಚಿತ್ರಕ್ಕೆ ಪ್ರೇಕ್ಷಕರ ಸ್ಪಂದನೆ ತೀರಾ ಕಳಪೆಯಾಗಿತ್ತು. ಚಿತ್ರದಲ್ಲಿ ಯಾವುದೇ ಜನಪ್ರಿಯ ಕಲಾವಿದರು ಇಲ್ಲದಿರುವುದು ಕೂಡ ಕಳಪೆ ಪ್ರದರ್ಶನಕ್ಕೆ ಕಾರಣ. ʼದಿ ಕೇರಳ ಸ್ಟೋರಿʼ ಬಿಡುಗಡೆಯಾಗಿ 2 ದಿನ ಕಳೆದರೂ ಪ್ರೇಕ್ಷಕರು ಸ್ಪಂದನೆ ಇಲ್ಲದ ಕಾರಣ ಮಲ್ಟಿಪ್ಲೆಕ್ಸ್‌ ಮಾಲೀಕರುಗಳೇ ಸ್ವಯಂ ಪ್ರೇರಿತರಾಗಿ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿದ್ದಾರೆ” ಎಂದು ವಾಸ್ತವತೆಯನ್ನು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಸಾಫ್ಟ್‌ವೇರ್‌ ಇಂಜಿನಿಯರ್‌ ʼಡೇರ್‌ಡೆವಿಲ್‌ ಮುಸ್ತಫಾʼ ಸಿನಿಮಾ ಮಾಡಿದ ಕಥೆ

“ಸರ್ಕಾರದ ಅಧಿಕಾರಿಗಳು ಅನಧಿಕೃತವಾಗಿ ಚಿತ್ರದ ಪ್ರದರ್ಶನವನ್ನು ರದ್ದುಪಡಿಸಿದ್ದಾರೆ ಎಂಬ ಆರೋಪಕ್ಕೆ ಪೂರಕವಾಗಿ ನಿರ್ಮಾಪಕರು ಯಾವುದೇ ಸಾಕ್ಷ್ಯಾಧಾರಗಳನ್ನು ಸಲ್ಲಿಸಿಲ್ಲ. ರಾಜ್ಯದ 19 ಮಲ್ಟಿಪ್ಲೆಕ್ಸ್‌ಗಳಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾ ಬಿಡುಗಡೆಯಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪ್ರತಿಯೊಂದು ಮಲ್ಟಿಪ್ಲೆಕ್ಸ್‌ ಬಳಿ ಪೊಲೀಸ್‌ ಪಡೆ ನಿಯೋಜನೆ ಮಾಡಲಾಗಿದೆ. ಆದರೆ, ಸಂವಿಧಾನದ 32ನೇ ವಿಧಿಯಡಿ ನ್ಯಾಯಾಲಯದಿಂದ ಅನುಚಿತ ಲಾಭ ಮತ್ತು ಚಿತ್ರಕ್ಕೆ ಪ್ರಚಾರ ಪಡೆಯುವ ಸಲುವಾಗಿ ನಿರ್ಮಾಪಕರು ಈ ರೀತಿಯ ಸುಳ್ಳು ಹೇಳಿಕೆ ನೀಡಿದ್ದಾರೆ” ಎಂದು ಪ್ರತಿಯಾಗಿ ಆರೋಪಿಸಿದ್ದಾರೆ.

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತʼದಿ ಕೇರಳ ಸ್ಟೋರಿʼ ಚಿತ್ರ ಮೂಡಿಬಂದಿದೆ. ಆದರೆ, ಈ ಚಿತ್ರ ತಿರುಚಿದ ಕಥಾಹಂದರವನ್ನು ಹೊಂದಿದೆ ಎಂಬ ಆರೋಪವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...