‘ಬಿಗ್‌ ಬಾಸ್’ ಮನೆಗೆ ಬೀಗ ಜಡಿದ ಅಧಿಕಾರಿಗಳು!

Date:

ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದ ಆರೋಪದ ಮೇಲೆ ಕನ್ನಡದ ‘ಬಿಗ್ ಬಾಸ್’ ಸೀಸನ್ 12ರ ಮನೆಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ಬಾರಿಯ ಬಿಗ್‌ ಬಾಸ್ ಅರ್ಧಕ್ಕೆ ಮೊಟಕುಗೊಳ್ಳುವ ಸಾಧ್ಯತೆಗಳಿವೆ.

ಬಿಗ್‌ ಬಾಸ್‌ ಆಯೋಜಕರು ಸರಿಯಾದ ರೀತಿಯಲ್ಲಿ ತಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಆದರೂ, ಆಯೋಜಕರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಬಿಗ್‌ ಬಾಸ್‌ ಮನೆಗೆ ಬೀಗ ಜಡಿಯಲಾಗಿದೆ.

ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್‌ ಬಾಸ್‌ ಮನೆ ನಿರ್ಮಿಸಲಾಗಿದೆ. ಈ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ. ಜಾಲಿವುಡ್ ಸ್ಟುಡಿಯೋದಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ ಎಂದು ಆರೋಪಿಸಲಾಗಿತ್ತು. ಆ ಕಾರಣಕ್ಕಾಗಿ ಜಾಲಿವುಡ್‌ ಸ್ಟುಡಿಯೋಗೂ ಕೂಡ ನೋಟಿಸ್‌ ನೀಡಲಾಗಿತ್ತು. ಆದರೆ, ಸ್ಟುಡಿಯೋದ ಮಾಲೀಕರು ನೋಟಿಸ್‌ನಲ್ಲಿ ಉಲ್ಲೇಖಿಸಲಾದ ಅಂಶಗಳನ್ನು ಪಾಲಿಸಿರಲಿಲ್ಲ. ಈ ನಡುವೆ, ಅದೇ ಸ್ಟುಡಿಯೋದಲ್ಲಿ ಬಿಗ್‌ ಬಾಸ್‌ ಶೋ ಕೂಡ ಆರಂಭವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ತ್ಯಾಜ್ಯವನ್ನು ವೈಜ್ಞಾನಿಕರವಾಗಿ ಸಂಸ್ಕರಿಸದ ಕಾರಣ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ. ಮಾತ್ರವಲ್ಲದೆ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಗತ್ಯ ಅನುಮತಿಯನ್ನೂ ಪಡೆದಿಲ್ಲ ಎಂಬ ಆರೋಪದ ಮೇಲೆ ಬಿಗ್‌ ಬಾಸ್‌ ಮನೆಯನ್ನು ಮುಚ್ಚಲು ಸೂಚಿಸಲಾಗಿತ್ತು. ಇದೀಗ, ಜಾಲಿವುಡ್ ಸ್ಟುಡಿಯೋಗೆ ಧಾವಿಸಿದ ಅಧಿಕಾರಿಗಳು ಮನೆಗೆ ಬೀಗ ಜಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...